ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ನೌಕರರಿಂದ ವಿಧಾನಸೌಧ ಮುತ್ತಿಗೆ!
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ನೌಕರರು ಇಂದು ವಿಧಾನಸೌಧ ಮುತ್ತಿಗೆ ಹಾಕಿದರು.
ನಿವೃತ್ತಿ ವೇತನಕ್ಕಾಗಿ ಒತ್ತಾಯಿಸಿ ಇಂದು ಬಿಸಿಯೂಟ ಕಾರ್ಯಕರ್ತೆಯರು ವಿಧಾನಸೌಧ ಮುತ್ತಿಗೆ ಹಾಕಿದ್ದಾರೆ. ಬಿಸಿಯೂಟ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 13ರಿಂದ ಫ್ರೀಡಂ ಪಾರ್ಕ್ನ್ನಲ್ಲಿ ಅನಿರ್ಧಿಷ್ಟಾವಧಿ ಧರಣಿಯನ್ನು ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿದ್ದಾರೆ. ಆದರೆ ಇದಕ್ಕೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಅವರು ಮುಂದಾದರು. ಈ ವೇಳೆ ಬ್ಯಾರಿಕೇಡ್‌ಗಳನ್ನು ತಳ್ಳುತ್ತಿದ್ದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದವಾಯಿತು.
'ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಬೇಡಿಕೆಗಳ ಬಗ್ಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ಇಂದು (ಫೆಬ್ರವರಿ 15) ನಾವು ಮುತ್ತಿಗೆ ಹಾಕಲು ನಿರ್ಧರಿಸಿದೆವು' ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಗೌರವ ಅಧ್ಯಕ್ಷೆ ಎಸ್. ವರಲಕ್ಷ್ಮೀ ಹೇಳಿದರು.
ಒಂದು ಲಕ್ಷ ನಿವೃತ್ತಿ ವೇತನ, ಬೇಸಿಗೆ ಮತ್ತು ದಸರಾ ರಜೆಗಳ ವೇತನ ಕಡ್ಡಾಯ, ಅಪಘಾತದಲ್ಲಿ ಮರಣ ಹೊಂದಿದರೆ ಕುಟುಂಬದವರಿಗೆ ಉದ್ಯೋಗ ನೀಡಬೇಕು ಎನ್ನುವ ಇತರ ಬೇಡಿಕೆಗಳನ್ನಿಟ್ಟುಕೊಂಡು ಬಿಸಿಯೂಟ ಕಾರ್ಯಕರ್ತೆಯ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಕೆಲವೇ ತಿಂಗಳುಗಳಲ್ಲಿ ನಡೆಯಲಿದ್ದು, ಒಂದು ವೇಳೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವುದಾಗಿ ಭರವಸೆಯನ್ನು ನೀಡಿದೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎನ್‌ಎಚ್‌ಎಂ-ಒಳ ಗುತ್ತಿಗೆ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ಹ್ಯಾರಿಸ್ ಭರವಸೆ ನೀಡಿದ್ದಾರೆ.

ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘದಿಂದ ಫ್ರೀಡಂ ಪಾರ್ಕ್ನನಲ್ಲಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ನಿಮ್ಮ ಬೇಡಿಕೆಗಳನ್ನು ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗುವುದು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಕೆಲಸ ಕಾರ್ಯ ಮಾಡುವುದು ಸೇರಿದಂತೆ ಇನ್ನುಳಿದ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದರು.












Click it and Unblock the Notifications