Second International Airport: ಉತ್ತರ ಕರ್ನಾಟಕದಲ್ಲೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೂಗು..
Bengauru Second Airport News: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾನವನ್ನು 20233 ಹೊತ್ತಿಗೆ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಜಾಗ ಅಂತಿಮ ಬಗ್ಗೆ ಇನ್ನೂವರೆಗೆ ನಿರ್ಧಾರವಾಗಿಲ್ಲ. ಇದಕ್ಕೆ ಕೇಂದ್ರ ಸರ್ಕಾರ ಅಂತಿಮ ಮುದ್ರೆ ಒತ್ತಬೇಕಿದೆ. ಇತ್ತ ತಮಿಳುನಾಡು ಸರ್ಕಾರ ಸಹ ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣ ಸ್ಥಾಪಿಸಲು ಪೈಪೋಟಿ ಒಡ್ಡುತ್ತಿದೆ. ಇದರ ನಡುವೆ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೂಗು ಜೋರಾಗಿದೆ.
ಕರ್ನಾಟಕ ರಾಜ್ಯ ಸರ್ಕಾರ ಬೆಂಗಳೂರು ಬಿಟ್ಟು ಬೇರೆಡೆಗೆ ಎರಡನೇ ಅಂತಾರಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಕಾಣುತ್ತಿಲ್ಲ. ಆದ್ದರಿಂದ ಉತ್ತರ ಕರ್ನಾಟಕದ ಪ್ರಮುಖ ನಗರವಾಗಿರುವ ಹುಬ್ಬಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬೇಡಿಕೆ ಕೇಳಿ ಬಂದಿದೆ. ಈಗಾಗಲೇ ಇಲ್ಲಿನ ವಿಮಾನ ನಿಲ್ದಾಣ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಇನ್ನೂ ತಡ ಮಾಡದೇ ಪ್ರಹ್ಲಾದ್ ಜೋಶಿಯವರು ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿಸಲು ಒತ್ತಾಯಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಲಾಗಿದೆ.

ಕೇಂದ್ರ ಸಚಿವರಿಗೆ ಮನವಿ
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಹುಬ್ಬಳ್ಳಿಯಲ್ಲಿ ಟರ್ಮಿನಲ್ ನಿರ್ಮಾಣ, ಏರ್‌ಪೋರ್ಟ್ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ವಿಶಾಲ ಟರ್ಮಿನಲ್ ನಿರ್ಮಿಸುವ ಜೊತೆಗೆ ಬೋಯಿಂಗ್ ನಂತಹ ವಿಮಾನಗಳು ಬಂದು ನಿಲ್ಲಲು ಅನುಕೂಲವಾಗುವ ವ್ಯವಸ್ಥೆ ಇಲ್ಲಿರಲಿವೆ. ಆದರೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನೀವು ದೇಶಿಯ ವಿಮಾನಯಾನ ಮಾಡಬಹುದು. ಭಾರತ ಬೇರೆ ಬೇರೆ ರಾಜ್ಯಗಳಿಗೆ ತೆರಳಬಹುದಾಗಿದೆ. ಇಲ್ಲಿಂತ ವಿದೇಶಕ್ಕೆ ತೆರಳಲು ನೀವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಬೇಕು.
ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಜನದಟ್ಟಣೆ ಕಾರಣಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದಲ್ಲಿ ಸಂಪನ್ಮೂಲಗಳಿವೆ. ಆದ್ದರಿಂದ ಇಲ್ಲಿನ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮಾಡಿಸಿ ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಬೆಂಗಳೂರು ಬಿಟ್ಟು ಬೇರೆಡೆ ನಿರ್ಮಿಸಲು ಮನಸಿಲ್ಲ
ರಾಜ್ಯ ಸರ್ಕಾರ ಬೆಂಗಳೂರು ಹೊರತುಪಡಿಸಿ ಬೇರೆಲ್ಲೂ ವಿಮಾನ ನಿಲ್ದಾಣ ಮಾಡಲ್ಲ ಎಂದು ಹೇಳಿದೆ. ರಾಜಧಾನಿಯಲ್ಲಿನ ಜನಸಂಖ್ಯೆ ಹೆಚ್ಚಳ, ಸಂಚಾರ ಸಮಸ್ಯೆ ಎಲ್ಲವು ಇದೆ. ಹೀಗಿದ್ದರು ಬೆಂಗಳೂರು ಬಿಟ್ಟು ಬೇರೆಡೆ ನಿರ್ಮಿಸಲು ಮುಂದಾಗುತ್ತಿಲ್ಲ. ಆದ್ದರಿಂದ ಪ್ರಹ್ಲಾದ್ ಜೋಶಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮಾಡಿಸಬೇಕು ಎಂದು ಆಗ್ರಹಿಸಲಾಗಿದೆ.
2.50 ಲಕ್ಷ ಪ್ರಯಾಣಿಕರ ನಿರ್ವಹಣೆ ಗುರಿ
ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ವಾರ್ಷಿಕ 50 ಸಾವಿರ ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯ ಹೊಂದಿಎ. ಭವಿಷ್ಯದಲ್ಲಿ 2.50 ಲಕ್ಷದಷ್ಟು ಪ್ರಯಾಣಿಕರ ನಿರ್ವಹಣೆಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ಈ ಸಂಬಂಧ ಹೊಸ ವಿಶಾಲ ಟರ್ಮಿನಲ್ ನಿರ್ಮಿಸಲು ಕೇಂದ್ರ ಅನುಮೋದನೆ ನೀಡಿದೆ. ಸುವ್ಯವಸ್ಥೆ ಜೊತೆಗೆ ಮೇಲ್ದರ್ಜೆಗೆ ಏರಲಿದೆ. ಇದೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಬೆಳಗಾವಿ ಸುತ್ತಮುತ್ತಲಿನ ಎಲ್ಲ ಜಿಲ್ಲೆಗಳ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂಬುದು ಜನರ ಆಶಯವಾಗಿದೆ..












Click it and Unblock the Notifications