ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಕುರಿತು ಚರ್ಚೆ: ಸಚಿವ ಅಶ್ವತ್ಥನಾರಾಯಣ ಭರವಸೆ

|
Google Oneindia Kannada News

ಬೆಂಗಳೂರು, ಜ.1: ಸರಕಾರವು ಅತಿಥಿ ಉಪನ್ಯಾಸಕರ ಪರವಾಗಿಯೇ ಇದೆ. ಅವರ ವೇತನವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದರು.

ವೇತನ ಹೆಚ್ಚಳ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಈ ಸಂಬಂಧ ಉನ್ನತ ಶಿಕ್ಷಣ ಸಚಿವರು ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ.

'ಉಪನ್ಯಾಸಕರ ಬೇಡಿಕೆ ಸಂಬಂಧ ಸರ್ಕಾರ ಈಗಾಗಲೇ ಸಮಿತಿ ರಚನೆ ಮಾಡಿದೆ. ಈ ಸಮಿತಿಯ ವರದಿ ಬಂದ ಕೂಡಲೇ ಸಾಧ್ಯವಿರುವ ಎಲ್ಲ ಪರಿಹಾರ ಕ್ರಮಗಳನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ. ಉಪನ್ಯಾಸಕರು ತಕ್ಷಣ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಬೇಕು' ಎಂದು ಡಾ. ಅಶ್ವತ್ಥನಾರಾಯಣ ಮನವಿ ಮಾಡಿದರು.

Demands of Guest Lecturers will be resolved once committee submits report: Minister Ashwatha Narayana

ಖಾಯಂ ಮಾಡುವುದು ಸಾಧ್ಯವಿಲ್ಲ:

ಅತಿಥಿ ಉಪನ್ಯಾಸಕರನ್ನು ನೇರವಾಗಿ ಖಾಯಂ ಮಾಡುವುದು ಸಾಧ್ಯವಿಲ್ಲ. ಇದಕ್ಕೆ ಉಮಾದೇವಿ ಪ್ರಕರಣದ ತೀರ್ಪು ಅಡಚಣೆಯಾಗಿದೆ. ಆದರೂ ನಾವು ಅತಿಥಿ ಉಪನ್ಯಾಸಕರಿಗೆ ಕೊರೋನಾ ಸಮಯದಲ್ಲೂ ವೇತನ ಕೊಟ್ಟಿದ್ದೇವೆ. ಮುಷ್ಕರನಿರತ ಉಪನ್ಯಾಸಕರು ಇದನ್ನು ಅರ್ಥ ಮಾಡಿಕೊಳ್ಳಬೇಕು' ಎಂದರು.

ಸರಕಾರಿ ಕಾಲೇಜುಗಳಲ್ಲಿ ಕಡಿಮೆ ಉಪನ್ಯಾಸಕರು ಇದ್ದ ಕಾರಣಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗಿದೆ. ಆದರೆ ಇವರು ಸರಕಾರದ ಗಮನಕ್ಕೆ ತಾರದೆಯೇ ಮುಷ್ಕರಕ್ಕೆ ಇಳಿದಿರುವುದು ಸರಿಯಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಮೇಕೆದಾಟು- ಕಾಂಗ್ರೆಸ್ ನಾಟಕ

ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ನಾಟಕವಾಡುತ್ತಿದೆ. ಅದು ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯು ಈ ನಾಟಕದ ಒಂದು ಭಾಗವಷ್ಟೆ ಎಂದು ಸಚಿವರು ಲೇವಡಿ ಮಾಡಿದರು.

ನೀರಾವರಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪರಿಣಿತರಿದ್ದಾರೆ. ಅವರು ಈ ಕ್ಷೇತ್ರದಲ್ಲಿ ಭಗೀರಥನಿದ್ದಂತೆ. ಮೇಕೆದಾಟು ವಿಚಾರದಲ್ಲಿ ಸರಕಾರದ ನಿಲುವನ್ನು ಸದನದಲ್ಲೇ ಸ್ಪಷ್ಟವಾಗಿ ತಿಳಿಸಲಾಗಿದೆ. ತಾನು ಅಧಿಕಾರದಲ್ಲಿದ್ದಾಗ ಏನನ್ನೂ ಮಾಡದ ಕಾಂಗ್ರೆಸ್, ಈಗ ಗದ್ದಲ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹರಿಹಾಯ್ದರು.

ಕಾಂಗ್ರೆಸ್ ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದು, ಜನರನ್ನು ದಿಕ್ಕು ತಪ್ಪಿಸುತ್ತಿದೆ. ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ ಅನುಕೂಲವಾಗಲಿದ್ದು, ಸರಕಾರವು ಇದನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಕುಡಿಯುವ ನೀರಿನ ಪೂರೈಕೆ ಉದ್ದೇಶದ ಈ ಯೋಜನೆಯನ್ನು ಜಾರಿಗೆ ತರದೆ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಅಶ್ವತ್ಥನಾರಾಯಣ ಹೇಳಿದರು.

Recommended Video

Kohli ಅನ್ನು ಚೇಂಜ್ ಮಾಡಲು Dravid ಪ್ರಯತ್ನವನ್ನು ರಿವೀಲ್ ಮಾಡಿದ KL Rahul | Oneindia Kannada

English summary
The government which has always stood by guest lecturers will consider all possibilities to redress their woes: Minister for Higher Education Dr.C.N.Ashwatha Narayana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X