Dengue cases: ರಾಜ್ಯದಲ್ಲಿ ಹೆಚ್ಚಾಯ್ತು ಡೆಂಗ್ಯೂ ಕೇಸ್‌ಗಳು; ಸರ್ಕಾರದ ಕ್ರಮಗಳೇನು?

ಬೆಂಗಳೂರು, ಜೂನ್. 26: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನ ದಿನಕ್ಕೂ ಹೆಚ್ಚುತ್ತಿದೆ. ಈವರೆಗೆ 5,374 ಪ್ರಕರಣ ವರದಿಯಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಲಹೆ, ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರ ನಿಗದಿಪಡಿಸಿದ ಮಿತಿಯಂತೆ ಡೆಂಗ್ಯೂ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 0.5 ಮೀರಬಾರದು. ಕರ್ನಾಟಕದ ಪ್ರಕರಣಗಳ ಸಾವಿನ ಪ್ರಮಾಣವು ಮಿತಿಗಿಂತ ತೀರಾ ಕಡಿಮೆಯಿದೆ. ರೋಗ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಎಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Dengue cases CM Siddaramaiah directs officials to control dengue in state

ಡೆಂಘಿ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಿಎಂ ಸಲಹೆ, ಸೂಚನೆ

• ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ.

• ಭಾರತ ಸರ್ಕಾರವು ಡೆಂಘಿ ಪ್ರಕರಣಗಳಲ್ಲಿ Case fatality rate m ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ.

• ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. Case fatality rate 0.09% ಇದೆ.

• ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಕಡೆಗಳಲ್ಲಿ ರೋಗ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು.

• ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಬೇಕು.

Dengue cases CM Siddaramaiah directs officials to control dengue in state

• ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್‌.ಎಸ್‌.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಬೇಕು.

• ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಬೇಕು.

• ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು.

• ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು.

• ಡೆಂಘಿ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+