ಬೆಂಗಳೂರಿಗರೇ ಎಚ್ಚರ ಎಚ್ಚರ: ಪ್ರತಿ ದಿನ 77 ರಿಂದ 109 ಡೆಂಗ್ಯೂ ಪ್ರಕರಣಗಳು ಪತ್ತೆ
ಬೆಂಗಳೂರು, ಸೆಪ್ಟೆಂಬರ್ 21: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಬೆಂಗಳೂರುನಲ್ಲೇ 4979 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಆರೋಗ್ಯ ಇಲಾಖೆ ಡೆಂಗ್ಯೂ ಪ್ರಕರಣಗಳನ್ನ ತಡೆಗಟ್ಟಲು ಅಗತ್ಯ ಕ್ರಮಗಳನ್ನ ತೆಗೆದುಕೊಂಡಿದೆ.
ಬೆಂಗಳೂರು ನಗರದಲ್ಲಿಯೇ ಸೆಪ್ಟೆಂಬರ್ ತಿಂಗಳಲ್ಲಿಯೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರದಲ್ಲಿ ದಿನೇ ದಿನೇ ಡೆಂಗ್ಯೂ ಸೋಂಕು ತಗುಲುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಜೊತೆಗೆ ರಾಜ್ಯದಲ್ಲಿ ನಿಫಾ ವೈರಸ್ನ ಆತಂಕವೂ ಹೆಚ್ಚಾಗಿದೆ. ನಿಫಾ ಹಾಗೂ ಡೆಂಗ್ಯೂ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಆಗಸ್ಟ್‌ನಲ್ಲಿ 2,374 ಸೋಂಕುಗಳು ಪತ್ತೆಯಾಗಿವೆ. ಅಂದರೆ ದಿನಕ್ಕೆ ಸರಾಸರಿ 77 ಕೇಸ್ಗಳು. ಇನ್ನು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 20ರ ನಡುವೆ ಬಿಬಿಎಂಪಿ ವ್ಯಾಪ್ತಿಯಲ್ಲಿ 2,182 ಪ್ರಕರಣಗಳು ದಾಖಲಾಗಿವೆ. ಅಂದರೆ ದೈನಂದಿನ ಸರಾಸರಿ 109 ಪ್ರಕರಣಗಳು ಪತ್ತೆಯಾಗಿವೆ.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರು ಪೂರ್ವ, ದಕ್ಷಿಣ ಮತ್ತು ಮಹದೇವಪುರ ವಲಯಗಳಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಪ್ರತಿದಿನವೂ ಅಂಕಿಅಂಶಗಳಲ್ಲಿ ಬದಲಾವಣೆಗಳಾಗುತ್ತಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಕೆ.ವಿ.ತ್ರಿಲೋಕ್ ಚಂದ್ರ ಅವರು ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಜನವರಿ 1 ರಿಂದ ಸೆಪ್ಟೆಂಬರ್ 19 ರವರೆಗೆ 9,208 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.
5,220 ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿವೆ. ಎರಡನೇ ಮತ್ತು ಮೂರನೇ ಅತಿ ಹೆಚ್ಚು ಡೆಂಗ್ಯೂ ಹರಡುವ ಜಿಲ್ಲೆಗಳಾಗಿ ಮೈಸೂರು ಮತ್ತು ಉಡುಪಿಯನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ ಈ ವರ್ಷ ಪತ್ತೆಯಾದ ಡೆಂಗ್ಯೂ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಬಿಬಿಎಂಪಿ ಪ್ರದೇಶ ವ್ಯಾಪ್ತಿಯಲ್ಲಿ ಕಂಡುಬಂದಿದೆ. ಆದರೆ, ಡೆಂಗ್ಯೂ ಟೆಸ್ಟ್ ಮಾಡಿಸಿದವರ ಒಟ್ಟು ಸಂಖ್ಯೆಗೆ ಹೋಲಿಸಿದರೆ ಡೆಂಗ್ಯೂ ಸೋಂಕು ದೃಢಪಟ್ಟವರ ಸಂಖ್ಯೆ ಕಡಿಮೆ ಇದೆ.
ಬೆಂಗಳೂರನ್ನು ಹೊರತು ಪಡಿಸಿ ಕೊಡಗು, ಬೀದರ್, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಡೆಂಗ್ಯೂ ಪ್ರಕರಣಗಳಲ್ಲಿ ನಾಲ್ಕು ಪಟ್ಟು ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.
ಇನ್ನು ಸೋಂಕು ಕಡಿಮೆ ಮಾಡಲು ಬಿಬಿಎಂಪಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಾವು ಡೆಂಗ್ಯೂ ಹೆಚ್ಚಿರುವ ಕಡೆ ಹೆಚ್ಚಿನ ನಿಗಾವಹಿಸುತ್ತಿದ್ದೇವೆ. ಸೋಂಕಿನ ಈಡಿಸ್ ಸೊಳೆ ಕಚ್ಚುವುದರಿಂದ ಡೆಂಘಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳತ್ತದೆ.
ಡೆಂಗ್ಯೂ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯುದಿದ್ದಲ್ಲಿ ರೋಗ ಲಕ್ಷಣಗಳು ಉಲ್ಭಣಗೊಂಡು ಡೆಂಗಿ ರಕ್ತ ಸ್ರಾವ ಜ್ವರ ಹಾಗೂ ಡೆಂಗಿ ಅಘಾತ ಜ್ವರ ದಿಂದ ಸಾವು ಸಂಭವಿಸಬಹುದು. ಆದ್ದರಿಂದ ಡೆಂಗಿ ಜ್ವರದ ಲಕ್ಷಣಗಳು ಕಂಡು ಬಂದ ತಕ್ಷಣವೇ ಹತ್ತರಿದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಡೆಂಗ್ಯೂ ರೋಗ ಲಕ್ಷಣಗಳು
• ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರ
• ತಲೆನೋವು, ಮೈಕೈ & ಕೀಲು ನೋವು, ವಾಕರಿಕೆ ವಾಂತಿ, ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು
• ಬಾಯಿ, ಮೂಗು & ವಸಡುಗಳಲ್ಲಿ ರಕ್ತಸ್ರಾವದ ಗುರುತುಗಳು
• ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು / ರಕ್ತಸ್ರಾವದ ಗುರುತುಗಳು ಕಪ್ಪು ಬಣ್ಣದ ಮಲ ವಿಸರ್ಜನೆ
• ವಿಪರೀತ ಬಾಯಾರಿಕೆ
• ತಣ್ಣನೆಯ ಬಿಳಿಚಿದ ಚರ್ಮ
• ಜ್ಞಾನ ತಪ್ಪುವುದು
• ರಕ್ತದ ಒತ್ತಡದ ಕುಸಿತ & ನಾಡಿ ಬಡಿತದ ಕುಸಿತ-ಇವು ಡೆಂಗಿ ರಕ್ತ ಸ್ರಾವ ಜ್ವರ & ಡೆಂಗಿ ಆಘಾತ ಜ್ವರದ ಲಕ್ಷಣಗಳು.
-
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
ಮಾರ್ನಿಂಗ್ ವಾಕ್ vs ಈವಿನಿಂಗ್ ವಾಕ್: ಯಾವುದು ಉತ್ತಮ? -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು











Click it and Unblock the Notifications