ರಾಜ್ಯದಲ್ಲಿ ಹೆಚ್ಚಾಯ್ತು ಡೆಂಗ್ಯೂ ಭೀತಿ; ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್ ಬಿಡುಗಡೆ; ನೀವು ತಿಳಿಯಲೇ ಬೇಕಾದ ಮಾಹಿತಿ ಇಲ್ಲಿದೆ
ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ.
ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕ ಹುಟ್ಟಿಸಿದೆ. ಕೊರೋನಾ ಆತಂಕದಲ್ಲೇ ಸಾಕಷ್ಟು ಶ್ರಮಿಸಿದ್ದ ಆಸ್ಪತ್ರೆಗಳಿಗೆ ಇದೀಗ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಡೆಂಗಿ ಜ್ವರ: ಸೋಂಕಿನ ಈಡಿಸ್ ಸೊಳೆ ಕಚ್ಚುವುದರಿಂದ ಡೆಂಘಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳತ್ತದೆ.
ಡೆಂಗ್ಯೂ ಮತ್ತು ಚಿಕುಂಗುನ್ಯ ತಡೆಗಟ್ಟಲು ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು
• ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಡೆಂಗಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ.
• ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ.
• ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ಡೆಂಗ್ಯೂ ರೋಗ ಲಕ್ಷಣಗಳು
• ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರ
• ತಲೆನೋವು, ಮೈಕೈ & ಕೀಲು ನೋವು, ವಾಕರಿಕೆ ವಾಂತಿ, ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು
• ಬಾಯಿ, ಮೂಗು & ವಸಡುಗಳಲ್ಲಿ ರಕ್ತಸ್ರಾವದ ಗುರುತುಗಳು
• ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು / ರಕ್ತಸ್ರಾವದ ಗುರುತುಗಳು ಕಪ್ಪು ಬಣ್ಣದ ಮಲ ವಿಸರ್ಜನೆ
• ವಿಪರೀತ ಬಾಯಾರಿಕೆ
• ತಣ್ಣನೆಯ ಬಿಳಿಚಿದ ಚರ್ಮ
• ಜ್ಞಾನ ತಪ್ಪುವುದು
• ರಕ್ತದ ಒತ್ತಡದ ಕುಸಿತ & ನಾಡಿ ಬಡಿತದ ಕುಸಿತ-ಇವು ಡೆಂಗಿ ರಕ್ತ ಸ್ರಾವ ಜ್ವರ & ಡೆಂಗಿ ಆಘಾತ ಜ್ವರದ ಲಕ್ಷಣಗಳು.
ಡೆಂಗ್ಯೂ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯುದಿದ್ದಲ್ಲಿ ರೋಗ ಲಕ್ಷಣಗಳು ಉಲ್ಭಣಗೊಂಡು ಡೆಂಗಿ ರಕ್ತ ಸ್ರಾವ ಜ್ವರ ಹಾಗೂ ಡೆಂಗಿ ಅಘಾತ ಜ್ವರ ದಿಂದ ಸಾವು ಸಂಭವಿಸಬಹುದು. ಆದ್ದರಿಂದ ಡೆಂಗಿ ಜ್ವರದ ಲಕ್ಷಣಗಳು ಕಂಡು ಬಂದ ತಕ್ಷಣವೇ ಹತ್ತರಿದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಾಡಬೇಕಾದದ್ದು ಏನು?
1. ಮನೆಯಲ್ಲಿರುವ ಎಲ್ಲಾ ನೀರಿನ ಸಂಗ್ರಾಹಕಗಳು ಮತ್ತು ಮೇಲ್ಬಾವಣಿಯಲ್ಲಿರುವ ತೊಟ್ಟಿಯ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು, ಒಣಗಿಸಿ ನೀರನ್ನು ಮತ್ತೆ ತುಂಬಿಸಿ ಭದ್ರವಾಗಿ ಮುಚ್ಚಳಿಕೆಯಿಂದ ಮುಚ್ಚುವುದು.
2. ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿನ ಒಡೆದ ಬಾಟಲಿ, ಟೆನ್, ಟೈರು ಇತ್ಯಾದಿ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು. ಘನತ್ಯಾಜ್ಯ ವಸ್ತುಗಳನ್ನು ಬೋರಲಾಗಿಡುವುದು ಮತ್ತು ಶೀಘ್ರವಾಗಿ ಸೂಕ್ತ ವಿಲೇವಾರಿ ಮಾಡಬೇಕು.
3. ಏರ್ ಕೂಲರ್‌ಗಳಲ್ಲಿ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಬದಲಾಯಿಸಬೇಕು.
4. ಯಾವಾಗಲೂ ಮೈ ತುಂಬಾ ಬಟ್ಟೆ ಧರಿಸಬೇಕು.
5. ಹಗಲು ಹೊತ್ತಿನಲ್ಲಿ ನಿದ್ರಿಸುವ / ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವಯಸ್ಸಾದವರು ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು.
6. ಡೆಂಗಿ ಜ್ವರ ಪೀಡಿತರೂ ಸಹ ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು.
7. ಜ್ವರ ಪೀಡಿತರು ಸಾಕಷ್ಟು ದ್ರವರೂಪದ ಆಹಾರಗಳನ್ನು ಸೇವಿಸುವುದು ಹಾಗೂ ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು.
8. ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು.












Click it and Unblock the Notifications