Dengue: ಡೆಂಗ್ಯೂ ಹೆಚ್ಚಳ; ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ
ಬೆಂಗಳೂರು, ಜುಲೈ. 11: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಡೆಂಗ್ಯೂ ಮುಂತಾದ ರೋಗಗಳ ಕುರಿತು ರಾಜ್ಯದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ?
ರಾಜ್ಯದಲ್ಲಿ ಪ್ರಸ್ತುತ ಡೆಂಗ್ಯೂ, ಚಿಕೂನ್ ಗುನ್ಯ ಹಾಗೂ ಜಿಕಾ ಮುಂತಾದ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ರೋಗಗಳು ಹರಡದಂತೆ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಗಳು ಮತ್ತು ಶಾಲೆಗಳು ಸೇರಿದಂತೆ ಸಮುದಾಯದ ಸಹಭಾಗಿತ್ವದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಈ ರೋಗಗಳ ಲಕ್ಷಣಗಳು ಕಂಡು ಬಂದಲ್ಲಿ ವಹಿಸಬೇಕಾದ ಅಗತ್ಯ ಕ್ರಮಗಳ ಕುರಿತು ವಿಸ್ತ್ರತವಾದ ಮಾರ್ಗಸೂಚಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ಉಲ್ಲೇಖ (1) ಮತ್ತು (2) ರಂತೆ ಈಗಾಗಲೇ ಹೊರಡಿಸಲಾಗಿದೆ.

ಈ ಕುರಿತು ಶಾಲಾ ವಿದ್ಯಾರ್ಥಿಗಳ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ಕೆಳಕಂಡ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ಮತ್ತು ಸಿಬ್ಬಂದಿಗೆ ಈ ಮೂಲಕ ಸೂಚಿಸಿದೆ.
1) ಶಾಲಾ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಜಾಗಗಳಲ್ಲಿ ಮತ್ತು ಇಲ್ಲಿನ ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸತಕ್ಕದ್ದು. ಮತ್ತು ಇಂತಹ ಸನ್ನಿವೇಶಗಳ ಹತ್ತಿರ ಶಾಲಾ ವಿದ್ಯಾರ್ಥಿಗಳು ಸುತ್ತಾಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸತಕ್ಕದ್ದು ಹಾಗೂ ಇವುಗಳನ್ನು ತೆರವುಗೊಳಿಸಲು ಹಾಗೂ ವಿಲೇವಾರಿ ಮಾಡಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು.
2) ಇಂತಹ ಸಂದರ್ಭಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ, ಪುರ ಸಭೆ, ನಗರ ಸಭೆ, ಮಹಾನಗರ ಪಾಲಿಕೆಗಳ (ಸ್ಥಳೀಯ ಸಂಸ್ಥೆಗಳ) ಹಾಗೂ ಸ್ಥಳೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಅಥವಾ ಆವರಣದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸಬೇಕು. ಇಂತಹ ಸನ್ನಿವೇಶಗಳನ್ನು ತೆರವುಗೊಳಿಸಲು ಮತ್ತು ಶಾಲಾ ಪರಿಸರಕ್ಕೆ ಸಾಂಕ್ರಾಮಿಕ ರೋಗ ನಿರೋಧಕ ದ್ರಾವಣಗಳನ್ನು ಕಾಲ-ಕಾಲಕ್ಕೆ ಸಿಂಪಡಿಸಲು ನಿಯಮಾನುಸಾರ ಅಗತ್ಯ ಕ್ರಮವಹಿಸತಕ್ಕದ್ದು.
3) ಶಾಲೆಗಳಲ್ಲಿನ ನೀರಿನ ಸಂಗ್ರಹಕಗಳನ್ನು (ತೊಟ್ಟಿ, ಬ್ಯಾರೆಲ್ ಇತ್ಯಾದಿ)ಗಳನ್ನು ವಾರಕ್ಕೊಮ್ಮೆ ಉಜ್ಜಿ, ತೊಳೆದು, ಖಾಲಿ ಮಾಡಿ. ಒಣಗಿಸಿ ಭರ್ತಿ ಮಾಡಿದ ನಂತರ ಭದ್ರವಾದ ಮುಚ್ಚಳದಿಂದ ಮುಚ್ಚುವುದು.
4) ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಕುರಿತು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಸ್ಥಳೀಯ ಆರೋಗ್ಯ ಸಿಬ್ಬಂದಿ / ಶಾಲಾ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡುವುದು.
5) ಈ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ನಿಯಂತ್ರಣದಲ್ಲಿ ವಿದ್ಯಾರ್ಥಿಗಳು ಹಾಗೂ ಸಮುದಾಯದ ಸಹಭಾಗಿತ್ವ ಹಾಗೂ ಪಾತ್ರದ ಕುರಿತು ಶಾಲೆಗಳಲ್ಲಿ ಭಾಷಣ ಸ್ಪರ್ಧೆ, ರಸಪ್ರಶ್ನೆ ಹಾಗೂ ಕಿರುನಾಟಕಗಳು ಇತ್ಯಾದಿ ಪತ್ಯೇತರ ಚಟುವಟಿಕೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು. ಶಾಲೆಗಳಲ್ಲಿನ ಸೈನ್ಸ್ ಕ್ಲಬ್ ಚಟುವಟಿಕೆಗಳ ಮೂಲಕ ಇಂತಹ ಈ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಹಾಗೂ ಈ ಮಾಹಿತಿಯು ವಿದ್ಯಾರ್ಥಿಗಳ ಮೂಲಕ ಪೋಷಕರ ಮತ್ತು ಪಾಲಕರ ಸಮುದಾಯಕ್ಕೆ ತಲುಪಿಸುವಂತೆ ತಿಳಿಸುವುದು.

6) ಒಂದು ವೇಳೆ ಶಾಲಾ ವಿದ್ಯಾರ್ಥಿಗಳಲ್ಲಿ ಇಂತಹ ಜ್ವರ ಪ್ರಕರಣಗಳು ವರದಿಯಾದಲ್ಲಿ ತಕ್ಷಣ ಅಂತಹ ವಿದ್ಯಾರ್ಥಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆಯನ್ನು ಕೊಡಿಸುವುದು. ಶುಶೂಷೆ ಮಾಡಿಸಲು ಅಗತ್ಯ ಕ್ರಮವಹಿಸುವುದು. ಒಂದು ವೇಳೆ ಶಾಲೆಗಳಲ್ಲಿ ಗುಂಪು ಜ್ವರ ಪ್ರಕರಣಗಳು ವರದಿಯಾದಲ್ಲಿ ಸ್ಥಳೀಯ, ತಾಲ್ಲೂಕು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತ್ವರಿತವಾಗಿ ಮಾಹಿತಿ ನೀಡಬೇಕು.
ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರಕಲು ಮತ್ತು ಶುಕ್ರೂಷೆ ಮಾಡಿಸಲು ಅಗತ್ಯ ಕ್ರಮವಹಿಸತಕ್ಕದ್ದು. ಇಂತಹ ಸಂದರ್ಭಗಳಲ್ಲಿ ಅನಾರೋಗ್ಯ ಪೀಡಿತನಾಗಿರುವ ವಿದ್ಯಾರ್ಥಿಯ ಸಂಪರ್ಕಕ್ಕೆ ಬೇರೆ ವಿದ್ಯಾರ್ಥಿಗಳು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸತಕ್ಕದ್ದು.
ಮೇಲ್ಕಂಡ ಎಲ್ಲಾ ಅಂಶಗಳನ್ನು ಕಟ್ಟನಿಟ್ಟಾಗಿ ಪಾಲಿಸುವುದರೊಂದಿಗೆ ಇಂತಹ ರೋಗಗಳಿಂದ ಯಾವುದೇ ವಿದ್ಯಾರ್ಥಿ ಅಥವಾ ವಿದ್ಯಾರ್ಥಿಗಳಿಗೆ ಇಂತಹ ಯಾವುದೇ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಹಾಗೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳನ್ನು ನಡೆಸಿಕೊಂಡು ಹೋಗುವಂತೆ ಈ ಮೂಲಕ ಸೂಚಿಸಿದೆ.
ಈ ಸಂಬಂಧ ಉಲ್ಲೇಖ-01 ಮತ್ತು 02 ರಲ್ಲಿನ ಅಂಶಗಳ ಪೈಕಿ ಶಾಲಾ ಶಿಕ್ಷಣ ಇಲಾಖೆಗೆ ಅನ್ವಯಿಸುವ ಅಂಶಗಳನ್ನು ಅನುಪಾಲಿಸಿ, ಸಮರ್ಪಕವಾಗಿ ಅನುಷ್ಟಾನಗೊಳಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸತಕ್ಕದ್ದು. ಈ ಕುರಿತು ಸಮುದಾಯದ, ಸ್ಥಳೀಯ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳ ಮತ್ತು ತಾಲ್ಲೂಕು ಮತ್ತು ಜಿಲ್ಲಾಡಳಿತಗಳ ಸಹಕಾರ ಹಾಗೂ ಮಾರ್ಗದರ್ಶನದೊಂದಿಗೆ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ಕೈಗೊಳ್ಳುವುದು.
ಮುಂದುವರೆದು, ಇಂತಹ ಸನ್ನಿವೇಶಗಳಲ್ಲಿ ಮೇಲ್ಕಂಡ ನಿರ್ದೇಶನಗಳೊಂದಿಗೆ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಂಬಂಧಿಸಿದ ಇಲಾಖೆಗಳು, ಆಯಾ ಜಿಲ್ಲಾಡಳಿತಗಳು ಮತ್ತು ಸ್ಥಳೀಯ ಸಂಸ್ಥೆಗಳು ಕಾಲ-ಕಾಲಕ್ಕೆ ನೀಡುವ ಸೂಚನೆಗಳನ್ನು ಹಾಗೂ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈ ಮೂಲಕ ತಿಳಿಸಲಾಗಿದೆ.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications