ಅಕ್ರಮ ಡಿನೋಟಿಫಿಕೇಷನ್, ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 26 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಮತ್ತು ಬಿಡಿಎ ಆಯುಕ್ತ ಶ್ಯಾಂ ಭಟ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ.

ವಕೀಲ ನಟರಾಜ್ ಶರ್ಮಾ ಅವರು ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ. 1 ಎಕರೆ 37 ಗುಂಟೆ ಭೂಮಿ ಅಕ್ರಮ ಡಿನೋಟಿಫಿಕೇಷನ್‌ನಲ್ಲಿ ಸಿದ್ದರಾಮಯ್ಯ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. [ಡಿನೋಟಿಫಿಕೇಷನ್ : ಯಡಿಯೂರಪ್ಪ ವಿರುದ್ಧ ಸುಪ್ರೀಂಗೆ ಸರ್ಕಾರ]

siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶ್ಯಾಂ ಭಟ್, ಬಿಡಿಎ ಭೂ ಸ್ವಾಧೀನ ಅಧಿಕಾರಿ ಬೋರಯ್ಯ ಅವರ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ. [ಎಸಿಬಿ ರಚನೆ : ಸಿದ್ದರಾಮಯ್ಯ ಹೇಳುವುದೇನು?]

ಬೆಂಗಳೂರಿನ ರಾಚೇನಹಳ್ಳಿಯಲ್ಲಿ 1 ಎಕರೆ 37 ಗುಂಟೆ ಭೂಮಿಯನ್ನು ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸರ್ವೆ ನಂಬರ್ 89/2, 83/1, 55/1, 67/4, 79/5, 83/7ರ ಜಮೀನು ಡಿನೋಟಿಫೈ ಮಾಡಲಾಗಿದೆ ಎಂದು ಆರೋಪವಾಗಿದೆ.

ಇದು 2ನೇ ದೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಇದು ಎಸಿಬಿಗೆ 2ನೇ ದೂರಾಗಿದೆ. ಮೊದಲು ಸಿದ್ದರಾಮಯ್ಯ ಅವರ ವಜ್ರ ಖಚಿತ ಉಬ್ಲೋ ವಾಚ್ ಬಗ್ಗೆ ತನಿಖೆಯಾಗಬೇಕು ಎಂದು ದೂರು ದಾಖಲಾಗಿತ್ತು. [ವಜ್ರ ಖಚಿತ ಉಬ್ಲೋ ವಾಚ್ ಬಗ್ಗೆ ಎಸಿಬಿಗೆ ಮೊದಲ ದೂರು]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Advocate S.Nataraj Sharma filed a complaint to Anti Corruption Bureau (ACB) against Karnataka Chief Minister Siddaramaiah in the illegal land denotification case.
Please Wait while comments are loading...