ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿನೋಟಿಫಿಕೇಷನ್ ಹಗರಣ: ಬಂಧನ ಭೀತಿಯಿಂದ ಪಾರಾದ ಯಡಿಯೂರಪ್ಪ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಜೂ.18. ಬೆಳ್ಳಂದೂರು ಡಿನೋಟಿಫಿಕೇಷನ್ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸದ್ಯ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಅವರಿಗೆ ಜಾಮೀನು ನೀಡಿದೆ. ಹಾಗಾಗಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಬಿಎಸ್ ವೈ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಬಿ.ಜಯಂತ್ ಕುಮಾರ್ ಅವರು ಮಾನ್ಯ ಮಾಡಿದ್ದಾರೆ. ಬಿಎಸ್ ವೈ ಪರ ವಕೀಲರು ಸಲ್ಲಿಸಿದ್ದ ಜಾಮೀನಿಗೆ ತಮ್ಮದೇನೂ ಅಭ್ಯಂತರವಿಲ್ಲ ಎಂದು ಮೂಲ ದೂರುದಾರರು ಮತ್ತು ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿಯನ್ನು ಪುರಸ್ಕರಿಸಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರು; ಕಾಂಗ್ರೆಸ್ ಕೆಂಡಾಮಂಡಲ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರು; ಕಾಂಗ್ರೆಸ್ ಕೆಂಡಾಮಂಡಲ

ಡಿನೋಟಿಫಿಕೇಷನ್ ಹಗರಣ ಬೆನ್ನು ಬಿಡದಂತೆ ಬಿಎಸ್ ವೈ ಅವರನ್ನು ಕಾಡುತ್ತಿದ್ದು, 9 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ ಬಂದಿದ್ದು, ಮತ್ತೆ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿತ್ತು.

2013ರಲ್ಲಿ ವಾಸುದೇವ ರೆಡ್ಡಿ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿರುವ ವಿಶೇಷ ನ್ಯಾಯಾಲಯ, ದೂರುದಾರರ ಪ್ರಮಾಣೀಕೃತ ಹೇಳಿಕೆ ದಾಖಲಿಸಿ ವಿಚಾರಣಾ ಪ್ರಕ್ರಿಯೆ ಕೈಗೆತ್ತಿಕೊಂಡಿದೆ.

 Denotification case: Special court grants bail to former CM BSY

ಪ್ರಕರಣದ ಹಿನ್ನೆಲೆ:

ಐ.ಟಿ. ಕಾರಿಡಾರ್‌ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯ ಪೈಕಿ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ಮಾಜಿ ಸಿಎಂ ಬಿಎಸ್ ವೈ ಮೇಲಿದೆ. ಈ ಪ್ರಕರಣದಲ್ಲಿ ಮೂಲ ದೂರುದಾರರಾದ ವಾಸುದೇವ ರೆಡ್ಡಿ, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಯಡಿಯೂರಪ್ಪ ಸೇರಿದಂತೆ ಹತ್ತು ಮಂದಿಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು.

2015ರಲ್ಲಿ ಹೈಕೋರ್ಟ್ ದೇಶಪಾಂಡೆ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿತ್ತು. ಉಳಿದ ಎಂಟು ಜನರ ವಿರುದ್ಧದ ದೂರನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ಎರಡನೇ ಆರೋಪಿಯಾಗಿರುವ ಯುಡಿಯೂರಪ್ಪ ವಿರುದ್ಧದ ಪ್ರಕರಣ ಹಾಗೆಯೇ ಇದೆ.

ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಆದೇಶಿಸಿತ್ತು. ತನಿಖೆ ನಡೆಸಿದ್ದ ಪೊಲೀಸರು ಎರಡು ಭಾರಿ ಯಡಿಯೂರಪ್ಪ

ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ ಎಂದು 'ಬಿ' ವರದಿ ಸಲ್ಲಿಸಿದ್ದರು. ಎರಡೂ ವರದಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು.2021ರ ನ. 27ರಂದು ಎರಡನೇ 'ಬಿ' ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯ ವಿಚಾರಣೆ ಆರಂಭಿಸುವುದಾಗಿ ಆದೇಶಿಸಿತು.

English summary
Former chief minister B S Yeddyurappa has recently escaped fear of arrest. The Special Court of Representatives granted bail on Saturday in Denotification case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X