ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿನೋಟಿಫಿಕೇಷನ್ ಹಗರಣ: ಬಿಎಸ್ವೈಗೆ ಮತ್ತೆ ಸಂಕಷ್ಟ, ಏ.19ಕ್ಕೆ ಹಾಜರಾಗಲು ಸಮನ್ಸ್ ಜಾರಿ

|
Google Oneindia Kannada News

ಬೆಂಗಳೂರು, ಮಾ.26: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೊಂದು ಭೂ ಸಂಕಷ್ಟ ಎದುರಾಗಿದೆ. ಡಿನೋಟಿಫಿಕೇಷನ್ ಹಗರಣ ಬೆನ್ನು ಬಿಡದಂತೆ ಅವರನ್ನು ಕಾಡುತ್ತಿದ್ದು, 9 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ ಬಂದಿದ್ದು, ಇದೀಗ ಮತ್ತೆ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ.

ಐ.ಟಿ ಕಾರಿಡಾರ್‌ ನಿರ್ಮಾಣಕ್ಕಾಗಿ ಬೆಂಗಳೂರಿನ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿದ ಆರೋಪ ಸಂಬಂಧ ಬಿ.ಎಸ್‌. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಏಪ್ರಿಲ್‌ 19ರಂದು ಖುದ್ದು ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ.

Recommended Video

ಡಿನೋಟಿಫಿಕೇಷನ್ ಕೇಸ್ - ಯಡಿಯೂರಪ್ಪ ಗೆ ದೊಡ್ಡ ತಲೆ ನೋವು ! | Oneindia Kannada

ಐಟಿ ಕಾರಿಡಾರ್ ಡಿ ನೋಟಿಫಿಕೇಷನ್ ಅಕ್ರಮ: ಮಾಜಿ ಸಿಎಂ ಬಿಎಸ್‌ವೈಗೆ ಮತ್ತೆ ಭೂ ಕಂಟಕ
ನ್ಯಾಯಾಧೀಶ ಬಿ. ಜಯಂತ್‌ ಕುಮಾರ್‌, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್‌ 13(1)(ಡಿ) ಮತ್ತು 13(2)ರ ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಸಮನ್ಸ್‌ ಜಾರಿ ಮಾಡುವಂತೆ ಶನಿವಾರ ಆದೇಶ ಹೊರಡಿಸಿದ್ದಾರೆ.

Denotification Scam: BS Yediyurappa is in trouble again, Special court issued summon to appear on April 19

2013ರಲ್ಲಿ ವಾಸುದೇವ ರೆಡ್ಡಿ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿರುವ ವಿಶೇಷ ನ್ಯಾಯಾಲಯ, ದೂರುದಾರರ ಪ್ರಮಾಣೀಕೃತ ಹೇಳಿಕೆ ದಾಖಲಿಸಿ ವಿಚಾರಣಾ ಪ್ರಕ್ರಿಯೆ ಕೈಗೆತ್ತಿಕೊಂಡಿದೆ.

ಪ್ರಕರಣದ ಹಿನ್ನೆಲೆ:

ಐ.ಟಿ. ಕಾರಿಡಾರ್‌ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯ ಪೈಕಿ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ಮಾಜಿ ಸಿಎಂ ಬಿಎಸ್ ವೈ ಮೇಲಿದೆ. ಈ ಪ್ರಕರಣದಲ್ಲಿ ಮೂಲ ದೂರುದಾರರಾದ ವಾಸುದೇವ ರೆಡ್ಡಿ, ಮಾಜಿ ಸಚಿವ ಆರ್‌.ವಿ. ದೇಶಪಾಂಡೆ, ಯಡಿಯೂರಪ್ಪ ಸೇರಿದಂತೆ ಹತ್ತು ಮಂದಿಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು.

2015ರಲ್ಲಿ ಹೈಕೋರ್ಟ್‌ ದೇಶಪಾಂಡೆ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿತ್ತು. ಉಳಿದ ಎಂಟು ಜನರ ವಿರುದ್ಧದ ದೂರನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ಎರಡನೇ ಆರೋಪಿಯಾಗಿರುವ ಯುಡಿಯೂರಪ್ಪ ವಿರುದ್ಧದ ಪ್ರಕರಣ ಹಾಗೆಯೇ ಇದೆ.

ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಆದೇಶಿಸಿತ್ತು. ತನಿಖೆ ನಡೆಸಿದ್ದ ಪೊಲೀಸರು ಎರಡು ಭಾರಿ ಯಡಿಯೂರಪ್ಪ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ ಎಂದು 'ಬಿ' ವರದಿ ಸಲ್ಲಿಸಿದ್ದರು. ಎರಡೂ ವರದಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು. 2021ರ ನ. 27ರಂದು ಎರಡನೇ 'ಬಿ' ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯ ವಿಚಾರಣೆ ಆರಂಭಿಸುವುದಾಗಿ ಆದೇಶಿಸಿತು.

English summary
Denotification Scam: BS Yediyurappa is in trouble again, Special court issued summon to appear on April 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X