INDIA ಸಭೆಗೆ ಅಧಿಕಾರಿಗಳ ದುರುಪಯೋಗದ ಆರೋಪ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು ಜುಲೈ 18: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಣತಂತ್ರ ಹಾಕಿಕೊಂಡಿರುವ ವಿಪಕ್ಷಗಳು ಬೆಂಗಳೂರಿನಲ್ಲಿ ನಡೆಸಿದ್ದು,INDIA ಸಭೆಗೆ ಅಧಿಕಾರಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

 Opposition Parties Meeting

ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಂತೆಯೇ ನಡೆದಿದೆ. ಇಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಬದಲಿಗೆ ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕಷ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ ಆರೋಪ ಏನು?

ಘಟಬಂಧನ್ ಸಭೆಗೆ ಆಗಮಿಸಿರುವ ಹೊರರಾಜ್ಯದ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ನಿಯೋಜನೆ ಮಾಡಿದ್ದು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಐಎಎಸ್ ಜೀತ ಪದ್ಧತಿಯನ್ನು ಜಾರಿಗೆ ತಂದು ಕರ್ನಾಟಕದ ಹೆಮ್ಮೆ, ಪರಂಪರೆಗೆ ಘಟಶ್ರಾದ್ಧ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 Opposition Parties Meeting

ಅಧಿಕಾರ ಬಂಧನಕ್ಕಾಗಿ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ. ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+