ವಾಯುಭಾರ ಕುಸಿತ: ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

Recommended Video

      ಕರ್ನಾಟಕದ ಹಲವು ಭಾಗಗಳಲ್ಲಿ 3 ದಿನಗಳು ಮಳೆ ಸಾಧ್ಯತೆ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಸೆ.20-22ರವರೆಗೆ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು ನಗರ, ಬೆಂ, ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ,ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ 6.4 ಸೆಂ.ಮೀನಿಂದ 11.5 ಸೆಂ.ಮೀನಷ್ಟು ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

      ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಗುರುವಾರ ಆಂಧ್ರಪ್ರದೇಶ, ಒಡಿಶಾಗಳಲ್ಲಿ ಕುಂಭದ್ರೋಣ ಮಳೆ ಬೀಳುವ ಸಾಧ್ಯತೆ ಇದೆ ಅದರಿಂದ ಕರ್ನಾಟಕದಲ್ಲೂ ಮತ್ತೆ ಮುಂಗಾರು ಚುರುಕಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

      Depression in Bay of Bengal: Heavy rain alert in Karnataka

      ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 29.1 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19.5ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೈಎಎಲ್ ನಲ್ಲಿ ಗರಿಷ್ಠ 28.5ಡಿಗ್ರಿ ಸೆಲ್ಸಿಯಸ್ ಕನಿಷ್ಠ 19.14 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ನಲ್ಲಿ ಗರಿಷ್ಠ 29.2ಡಿಗ್ರಿ ಸೆಲ್ಸಿಯಸ್ ಕನಿಷ್ಠ 18.9ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+