ವಾಯುಭಾರ ಕುಸಿತ, ರಾಜ್ಯದಲ್ಲಿ ಎರಡು ದಿನ ಮಳೆಯ ಸಿಂಚನ
ಬೆಂಗಳೂರು, ಮಾರ್ಚ್ 14: ದಕ್ಷಿಣ ಶ್ರೀಲಂಕಾದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತವು ಅರಬ್ಬಿ ಸಮುದ್ರದ ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ.
ಇದು ಕೇರಳ ತೀರ ಪ್ರವೇಶಿಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕೇರಳದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ತಿರುವನಂತಪುರದಿಂದ 390 ಕಿಲೋಮೀಟರ್ ದಕ್ಷಿಣ, ನೈಋತ್ಯ ವಲಯದಲ್ಲಿ ತೀವ್ರ ಚಂಡಮಾಡುರತ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಂಟೆಗೆ 65ಕಿ.ಮೀ ವೇಗದಲ್ಲಿ ಮಾರುತ ಬೀಸುವ ಸಾಧ್ಯತೆ ಇದೆ. ತಿರುವನಂತಪುರದಿಂದ 390 ಕಿಲೋ ಮೀಟರ್ ನೈಋತ್ಯದಲ್ಲಿ ಕಾಸರಗೋಡು ತನಕ ಸಮುದ್ರದಲ್ಲಿ ಚಂಡಮಾರುತ ಬಲಗೊಳ್ಳುವ ಸಾಧ್ಯತೆ ಇದ್ದು, ಇದರ ಫಲವಾಗಿ ತಿರುವನಂತಪುರ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಶ್ರೀಲಂಕಾದ ನೈಋತ್ಯ ಭಾಗ ಹಾಗೂ ಮಾಲ್ಡೀವ್ಸ್ ನ ಕೆಲವೆಡೆ ವಾಯು ಭಾರ ಕುಸಿತದಿಂದಾಗಿ ಮುಂದಿನ 48ಗಂಟೆಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಸಾಧಾರಣ ಮಳೆಯಾಗಿವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಸಾಧಾರಣ ಮಳೆ, ಕರಾವಳಿ ಪ್ರದೇಶಗಳ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 31.6ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.1ಡಿಗ್ರಿ ಸೆಲ್ಸಿಯಸ್, ಕೆಐಎಎಲ್ ನಲ್ಲಿ ಗರಿಷ್ಠ 31.6ಡಿಗ್ರಿ ಸೆಲ್ಸಿಯಸ್ ಕನಿಷ್ಠ 18.4, ಎಚ್ಎಎಲ್ ನಲ್ಲಿ ಗರಿಷ್ಠ 31.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.











Click it and Unblock the Notifications