ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆ

|
Google Oneindia Kannada News

ಬೆಂಗಳೂರು, ನವೆಂಬರ್, 29: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ. ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮತ್ತೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಆಂಧ್ರ ಪ್ರದೇಶದ ಕೆಲವು ಭಾಗದಲ್ಲಿ ಭಾನುವಾರ ಮಧ್ಯಾಹ್ನ ಮಳೆಯಾಗಿದೆ. ತಮಿಳುನಾಡನ್ನು ಕೊಚ್ಚಿ ಹೋಗುವಂತೆ ಮಾಡಿದ್ದ ಅಕಾಲಿಕ ಮಳೆ ಈ ಬಾರಿ ಆಂಧ್ರ ಪ್ರದೇಶದ ಮೇಲೆ ತನ್ನ ಪ್ರತಾಪ ತೋರಲಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.[ತಮಿಳುನಾಡಲ್ಲಿ ಕುಂಭದ್ರೋಣ ಮಳೆ ಆರ್ಭಟ ಹೇಗಿತ್ತು?]

rain

ಗುಂಟೂರು, ಪ್ರಕಾಶಮ್, ನೆಲ್ಲೂರು, ಚಿತ್ತೂರ್, ಕಡಪಾ, ಅನಂತಪುರ ಮತ್ತು ಕರ್ನೂಲ್ ಭಾಗದಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.[ಗೂಗಲ್ ಮ್ಯಾಪ್ ನಲ್ಲಿ 'ಬೆಳ್ಳಂದೂರು ಲೇಕ್' ಹುಡುಕಬೇಡಿ!]

ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶದ ಮೇಲೆ ವಾಯುಭಾರ ಕುಸಿತ ಯಾವ ಪರಿಣಾಮ ಬೀರುತ್ತಿಲ್ಲ.

English summary
A fresh spell of rain seems inevitable for people of Andhra Pradesh as the Indian Meteorological Department (IMD) has confirmed moderate to rather heavy rain at many places across the state commencing Sunday. Rain would occur at isolated places over South Interior Karnataka. Dry weather would prevail over Coastal Karnataka & North Interior Karnataka Meteorological department said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X