ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಬೆಂಗಳೂರು, ಜೂನ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಚ್ಚರಿ ಮೂಡಿಸಿದರು.
ಕರ್ನಾಟಕದ ಉಪ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿಯಾದ ಬಿಎಸ್ ಯಡಿಯೂರಪ್ಪ ಅವರನ್ನು ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿದರು. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 135 ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯವಾಗಿ ಕಾಂಗ್ರೆಸ್ ಸೋಲಿಸಿತ್ತು.

ಗೆದ್ದ ಬಳಿಕ ಉಪ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಚುನಾವಣೆಗೂ ಮುನ್ನವೇ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದರು. ಹೀಗಾಗಿ ಅವರು ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಅವರ ಮಗ ಬಿವೈ ವಿಜಯೇಂದ್ರ ಅವರು ಕಣಕ್ಕಿಳಿದು ಗೆಲುವು ಸಾಧಿಸಿದ್ದರು.
ಗುರುವಾರ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಬಿಎಸ್ ಯಡಿಯೂರಪ್ಪ ಅವರ ಖಾಸಗಿ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ರಾಜಕೀಯದ ಹೊರತಾಗಿ ಡಿಕೆ ಶಿವಕುಮಾರ್ ಹಾಗೂ ಬಿಎಸ್ ಯಡಿಯೂರಪ್ಪ ಅವರು ಪರಸ್ಪರ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರು ಬಿಎಸ್‌ವೈ ಅವರನ್ನು ಭೇಟಿಯಾಗಿದ್ದಾರೆ.

ಈಗ ಬಿಎಸ್ ಯಡಿಯೂರಪ್ಪ ಅವರು ಶಾಸಕರೂ ಕೂಡ ಅಲ್ಲದಿರುವುದರಿಂದ ಅವರು ತಮ್ಮ ಅಧಿಕೃತ ಸರ್ಕಾರಿ ನಿವಾಸವನ್ನು ಖಾಲಿ ಮಾಡಿದ್ದಾರೆ. ಬದಲಿಗೆ ಅವರು ಡಾಲರ್ಸ್ ಕಾಲೋನಿಯ ಖಾಸಗಿ ನಿವಾಸದಲ್ಲಿ ವಾಸ ಮಾಡುತ್ತಿದ್ದಾರೆ.












Click it and Unblock the Notifications