2028ಕ್ಕೆ ಮತ್ತೊಮ್ಮೆ HD ಕುಮಾರಸ್ವಾಮಿ ಸಿಎಂ ಚರ್ಚೆ: ಒಳ್ಳೆ ದಿನ ಏಕೆ ಅಶುಭ ಎಂದ ಡಿ ಕೆ ಶಿವಕುಮಾರ್
ಬೆಂಗಳೂರು: ಮುಂದಿನ 2028ಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರಬೇಕು ಎನ್ನುವುದು ರಾಜ್ಯದ ಜನರ ಬಯಕೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆ ಜೆಡಿಎಸ್‌ನಲ್ಲಿ ಶುರುವಾಗಿದ್ದು, 2028 ಕ್ಕೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇಂತಹ ಒಳ್ಳೆ ದಿನ ಏಕೆ ಅಶುಭ ಮಾತನ್ನಾಡುವುದು, ಆ ವಿಚಾರ ಬೇಡ ಬಿಡಿ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಈ ರೀತಿ ಆರೋಪ ಮಾಡುವವರು ಮಾಧ್ಯಮಗಳ ವೇದಿಕೆಯಲ್ಲಿ ನನ್ನ ಜೊತೆ ಚರ್ಚೆಗೆ ಬರಲಿ. ನಾನು ಅಥವಾ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡರಲ್ಲಿ ಯಾರಾದರೂ ಬರುತ್ತೇವೆ. ಅಕ್ರಮವಾಗಿದ್ದರೆ, ಕನಕಪುರ ತಾಲ್ಲೂಕಿಗೆ ಪ್ರಶಸ್ತಿ ಕೊಟ್ಟಿದ್ದು ಯಾಕೆ? ಅಕ್ರಮ ನಡೆದಿದ್ದರೆ ತನಿಖೆ ಮಾಡಲಿ, ಬಡವರ ಹೊಟ್ಟೆಗೆ ನಷ್ಟ ಮಾಡುವುದೇಕೆ? ಪ್ರತಿ ವರ್ಷ ನಾವು 6 ಸಾವಿರ ಕೋಟಿಯಷ್ಟು ಅನುದಾನದ ಕೆಲಸ ಮಾಡಿದ್ದು ಸರಿಯಲ್ಲವೇ? ಅಕ್ರಮ ಮಾಡಿದ್ದರೆ ಅಂತಹವರನ್ನು ಬಂಧಿಸಿ ಒಳಗೆ ಹಾಕಲಿ ಎಂದರು.

26 ನಿಗಮಗಳ ಅಧ್ಯಕ್ಷ ಸ್ಥಾನ ಅವಧಿ ಮುಕ್ತಾಯವಾಗಿರುವ ಕುರಿತು ಮಾತನಾಡಿ, ಎರಡು ವರ್ಷ ಅಥವಾ ಮುಂದಿನ ಆದೇಶ ಬರುವವರೆಗೂ ಎಂದು ಸರ್ಕಾರ ತಿಳಿಸಿದೆ. ಮುಂದಿನ ಆದೇಶ ಬರುವವರೆಗೂ ಶಾಸಕರು ತಮ್ಮ ಸ್ಥಾನದಲ್ಲಿ ಕೆಲಸ ಮುಂದುವರಿಸಿಕೊಂಡು ಹೋಗಲಿದ್ದಾರೆ. ಇದು ಪಕ್ಷದ ತೀರ್ಮಾನ ಎಂದು ತಿಳಿಸಿದರು.
ತಂದೆಗಾಗಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿರುವ ಕುರಿತು ಮಾತನಾಡಿ, ನಾವು ಸೇವೆ ಮಾಡುತ್ತಿರುವುದು ನಾಡಿನ ಜನತೆಗಾಗಿ. ಕುಟುಂಬಕ್ಕಾಗಿಯಲ್ಲ. ಕುಟುಂಬದ ಆಸೆ, ಭಾವನೆಗಳು, ತೊಂದರೆಯಲ್ಲಿ ಇರುವದರ ಬಗ್ಗೆ ಅವರು ಮಾತನಾಡಿಕೊಳ್ಳಲಿ. ನಾವು ಈ ದೇಶದ ಜನತೆಯ ಹಿತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ ಎಂದರು. ಹಾಸನ ಜೆಡಿಎಸ್ ಸಮಾವೇಶದಲ್ಲಿ ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಶಕ್ತಿ ಬರುವುದಿಲ್ಲ, ಜೀವ ಬರುವುದಿಲ್ಲ, ಧೈರ್ಯ ಬರುವುದಿಲ್ಲ. ಅದಕ್ಕೆ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ ಎಂದರು.
ಮನೆಗೆ ನುಗ್ಗಿ ಬಂಧಿಸಲಾಯಿತು ಎನ್ನುವ ದೇವೆಗೌಡರ ಹೇಳಿಕೆ ಕುರಿತು ಮಾತನಾಡಿ, ಈ ದೇಶದಲ್ಲಿ ಏನೇನು ಕಾನೂನು ಇದೆಯೋ ಅದೆಲ್ಲವೂ ಎಲ್ಲರಿಗೂ ಒಂದೇ. ಯಾರಿಗೆ ಏನೇನು ಕಾನೂನು ಮಾಡಬೇಕು ಅನ್ನೋದಕ್ಕೆ ನೀವೇ ಉತ್ತರ ನೀಡಬೇಕು ಎಂದು ಹೇಳಿದರು.
ತಮ್ಮ ಭಾಷಣದ ವೇಳೆ ಸದನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ರಾಷ್ಟ್ರಪತಿಯವರಿಗೆ ರಾಜ್ಯಪಾಲರು ಪತ್ರ ಬರೆದಿರುವ ಕುರಿತು ಮಾತನಾಡಿ, ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ರಾಜ್ಯಪಾಲರು ಭಾಷಣ ಓದಿ, ರಾಷ್ಟ್ರಗೀತೆ ಆಗುವ ತನಕ ಇರಬಹುದಿತ್ತು. ರಾಜ್ಯಪಾಲರಿಗೆ ನರೇಗಾ ಬಗೆಗಿನ ಭಾಷಣ ಓದುವುದಕ್ಕೆ ಇಷ್ಟವಿಲ್ಲದಿದ್ದರೆ ಹಾಗೆ ಇರಬಹುದಿತ್ತು. ಜತೆಗೆ ಸಾಕಷ್ಟು ಬೇರೆ ಅವಕಾಶಗಳೂ ಇದ್ದವು. ರಾಜ್ಯಪಾಲರು ಸರ್ಕಾರ ನೀಡಿದ ಭಾಷಣ ಓದುವುದು ಸಂವಿಧಾನ ರಕ್ಷಣೆಯ ಕರ್ತವ್ಯ. ನಮ್ಮಲ್ಲಿ ಅಲ್ಲದೇ ಬೇರೆ ರಾಜ್ಯಗಳಲ್ಲೂ ಇದೇ ರೀತಿ ಆಗಿದೆ ಎಂದರು.
ಇದೇ 31ರವರೆಗೆ ಕನಕೋತ್ಸವ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಚರಿಸಲಾಗುತ್ತಿದ್ದು, ಯುವಕರಿಗೆ ಕ್ರೀಡೆ, ಕಲೆ, ಸಾಂಸ್ಕೃತಿಕ, ಶೈಕ್ಷಣಿಕ ಆಸಕ್ತಿಗೆ ಪ್ರೋತ್ಸಾಹ ನೀಡಲು ಮುಂದಾಗಿದ್ದೇವೆ. ಈ ವರ್ಷದಿಂದ ಚನ್ನಪಟ್ಟಣ ಹಾಗೂ ರಾಮನಗರ, ಮಾಗಡಿ, ಕುಣಿಗಲ್ ನಲ್ಲಿ ಇದನ್ನು ಆರಂಭಿಸಲಾಗಿದ್ದು, ಇದನ್ನು ರಾಜ್ಯದ ಇತರೆ ತಾಲ್ಲೂಕುಗಳಿಗೆ ತೆಗೆದುಕೊಂಡು ಹೋಗಬೇಕು. ಮುಂದಿನ ದಿನಗಳಲ್ಲಿ ಇದಕ್ಕೆ ಹೊಸ ರೂಪ ನೀಡಿ, ಹೊಸ ಯೋಜನೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications