ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೆ?

By Manjunatha
|
Google Oneindia Kannada News

ಬೆಂಗಳೂರು, ಮೇ 28: ಸಮ್ಮಿಶ್ರ ಸರ್ಕಾರ ರಚನೆ ಆದಾಗ ಮಾತ್ರವೇ ಸಾಮಾನ್ಯವಾಗಿ ಈ ಉಪ ಮುಖ್ಯಮಂತ್ರಿ ಸ್ಥಾನದ ಚರ್ಚೆ ಬರುತ್ತದೆ. ಬಹುಮತದ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಚರ್ಚೆ ಬಹಳ ಕಡಿಮೆ.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆದರೆ, ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿ ಆಗಿದ್ದಾರೆ. ಆದರೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್‌ ಕೇವಲ ಉತ್ಸವ ಮೂರ್ತಿಯೇ, ಅವರ ಅಧಿಕಾರ ವ್ಯಾಪ್ತಿಯೇನು, ಸರ್ಕಾರದಲ್ಲಿ ಅವರ ಜವಾಬ್ದಾರಿಯೇನು? ಇನ್ನಿತರೆ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಮೈತ್ರಿ ಸರ್ಕಾರಕ್ಕೆ ಮೊದಲ ವಿಘ್ನ!? ಪರಮೇಶ್ವರ್ ಮಾತಿನ ಅರ್ಥವೇನು?ಮೈತ್ರಿ ಸರ್ಕಾರಕ್ಕೆ ಮೊದಲ ವಿಘ್ನ!? ಪರಮೇಶ್ವರ್ ಮಾತಿನ ಅರ್ಥವೇನು?

ಅಸಲಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಾಂವಿಧಾನಿಕ ಹುದ್ದೆಯೇ ಅಲ್ಲ. ಆ ಹುದ್ದೆಯನ್ನು ಅತೃಪ್ತರ ಕಣ್ಣೋರೆಸಲು ಸೃಷ್ಠಿ ಮಾಡಲಾಗಿದೆ ಎನ್ನುತ್ತಾರೆ ಹಿರಿಯ ರಾಜಕೀಯ ವಿಷ್ಲೇಶಕರು. ಮೊನ್ನೆ ಸದನದಲ್ಲಿ ಯಡಿಯೂರಪ್ಪ ಕೂಡ ಇದೇ ಮಾತನ್ನು ಹೇಳಿದ್ದರು.

Deputy chief minister G Parameshwar demanding for portfolio

ಹಾಗಿದ್ದರೆ ಪರಮೇಶ್ವರ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿರುವುದು ಕೇವಲ ಕಣ್ಣೊರೆಸಲು ಮಾತ್ರವೇ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ವಿಷಯ ಅವರಿಗೂ ಗೊತ್ತಿದೆ. ಆದರೆ ಪರಮೇಶ್ವರ್ ಅವರಿಗೆ ತಾವು ಕೇವಲ ಕಾಗದದ ಹುಲಿ ಆಗಲು ಇಷ್ಟವಿಲ್ಲ ಹಾಗಾಗಿ ಅವರು ಬಲಿಷ್ಠ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಪ್ರಮುಖ ಖಾತೆಗೆ ಹೈಕಮಾಂಡ್‌ ಬಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಪರಮೇಶ್ವರ್ ಅವರು ಈ ಹಿಂದೆ ಗೃಹಮಂತ್ರಿ ಸೇರಿದಂತೆ, ವೀರಪ್ಪ ಮೊಯ್ಲಿ, ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ, ಧರಂಸಿಂಗ್ ಅವರುಗಳ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸಿರುವ ಅನುಭವ ಅವರಿಗಿದೆ.

English summary
Deputy chief minister G Parameshwar demanding Congress high command for a important portfolio. In his political career he served as minister for different portfolios.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X