7ನೇ ಗ್ಯಾರಂಟಿ ಘೋಷಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ !

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳದ್ದೇ ಸದ್ದು. ಇರುವ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಬೆಲೆ ಏರಿಕೆ ಮಾಡಲಾಗುತ್ತಿದೆ ಎನ್ನುವ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೇ ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕತೆ ಸುಧಾರಿಸಿದೆ ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿದೆ.

ಇದೀಗ ಏಳನೇ ಗ್ಯಾರಂಟಿ ಯೋಜನೆ ಇದೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆಯೊಂದನ್ನು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಭೂ ಒಡೆತನವನ್ನು ಆರನೇ ಗ್ಯಾರಂಟಿಯಾಗಿ, ಏಳನೇ ಗ್ಯಾರಂಟಿಯಾಗಿ ರೈತರಿಗೆ ನೀರನ್ನು ನೀಡುತ್ತಿದ್ದೇವೆ. ಗಂಗಾ ಸ್ನಾನ ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾನದಿ ನೀರು ಕುಡಿಯುವುದಕ್ಕೆ ಅಷ್ಟು ಪವಿತ್ರವಾದುದು. ಅಂತಹ ನೀರನ್ನು ಜನರ ಉಪಯೋಗಕ್ಕಾಗಿ ಕೆರೆಗಳಿಗೆ ಹರಿಸುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

Deputy Cm Announces Karnataka s 7th Guarantee Scheme

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ.

ಕೆರೆಗಳಿಗೆ ನೀರು ಹರಿಸಲು 800 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಈಗಾಗಲೇ ವೆಚ್ಚ ಮಾಡಲಾಗಿದೆ. ಎಲ್ಲಾ ಕೆರೆಗಳನ್ನು ತುಂಬಿಸುವ ಸಲುವಾಗಿ ವಾರ್ಷಿಕ ವಿದ್ಯುತ್ ವೆಚ್ಚವೇ 80 ಲಕ್ಷ ರೂಪಾಯಿ ತಲುಪುತ್ತದೆ. ಸರ್ಕಾರವು ಒಂದೆರಡು ವರ್ಷ ಈ ವೆಚ್ಚವನ್ನು ಭರಿಸಬಹುದು. ಆದ ಕಾರಣಕ್ಕೆ ಎಲ್ಲಾ ಕೆರೆಗಳನ್ನು ಮೀನುಗಾರಿಕೆ ನಡೆಸಲು ಹರಾಜು ಹಾಕಬೇಕು. ಈ ಮೂಲಕ ವೆಚ್ಚವನ್ನು ಸರಿದೂಗಿಸಬೇಕು ಎಂದು ಹೇಳಿದ್ದೇನೆ. ಇದರಿಂದ ಎಲ್ಲಾ ರೈತರಿಗೆ ಅನುಕೂಲವಾಗಲಿದೆ.

ಎನ್.ಟಿ.ಬೊಮ್ಮಣ್ಣ ಹಾಗೂ ನಾನು ಬಂಗಾರಪ್ಪನವರ ಶಿಷ್ಯರು. ವಿ.ಎಸ್.ಉಗ್ರಪ್ಪ ಅವರು ಸಂಸದ ಸ್ಥಾನಕ್ಕೆ ನಿಂತಿದ್ದಾಗ ಬೊಮ್ಮಣ್ಣ ಅವರು 74 ಕೆರೆಗಳನ್ನು ತುಂಬಿಸುವಂತೆ ಮನವಿ ಮಾಡಿದ್ದರು. ನನ್ನ ಸ್ನೇಹಿತರಾದ ನಿಮ್ಮ ಕೆಲಸವನ್ನು ಖಂಡಿತವಾಗಿ ನಾನು ಮಾಡಿಕೊಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅಂದು ಕೊಟ್ಟ ಮಾತು ಇಂದು ಈಡೇರಿದೆ. ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸಿ 1.76 ಲಕ್ಷ ಜನರ ಬದುಕಿಗೆ ನೆರವಾಗಿದ್ದೇವೆ ಎಂದಿದ್ದಾರೆ.

ಕರುನಾಡಿನ ಜನರ ಸೇವೆಯನ್ನು ಉತ್ತಮ ಸರ್ಕಾರ ಮುನ್ನಡೆಸುತ್ತಿದೆ. ಭವಿಷ್ಯದಲ್ಲಿ ಇದಕ್ಕಿಂತ ಉತ್ತಮ ಆಡಳಿತ ನೀಡುತ್ತೇವೆ. 2028 ಕ್ಕೆ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ‌ಅಧಿಕಾರಕ್ಕೆ ಬಂದು ನಿಮ್ಮ ಸೇವೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಏಳನೇ ಗ್ಯಾರಂಟಿಯಾಗಿ ಕೆರೆಗಳಿಗೆ ನೀರು!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ದೃಶ್ಯಗಳು ಎಂದು ಡಿ.ಕೆ ಶಿವಕುಮಾರ್ ಅವರು ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಅನ್ನದಾತರ ಪರ ನಮ್ಮ ಸರ್ಕಾರ

ರಾಜ್ಯದಲ್ಲಿರುವ ಜಲಮೂಲಗಳಿಂದ ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು 800 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರಾಜ್ಯ ಸರ್ಕಾರ ಖರ್ಚು ಮಾಡಿದೆ. ಕೆರೆಗಳನ್ನು ತುಂಬಿಸುವ ಮೂಲಕ ರೈತರ ಬದುಕಿನಲ್ಲಿ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್: ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು 7ನೇ ಗ್ಯಾರಂಟಿಯ ಬಗ್ಗೆ ಮಾತನಾಡಿರುವುದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+