ಬೆಂಗಳೂರು ಜನತೆಗೆ ಬಿಗ್‌ ಶಾಕ್; ಶೀಘ್ರವೇ ನೀರಿನ ದರ ಹೆಚ್ಚಳ: ಡಿಕೆ ಶಿವಕುಮಾರ್ ಘೋಷಣೆ‌

ಬೆಂಗಳೂರು, ಜನವರಿ 28: 2025 ರ ವರ್ಷದ ಆರಂಭದಲ್ಲಿಯೇ ರಾಜ್ಯ ಸರ್ಕಾರ ಜನತೆಗೆ ಬಿಗ್‌ ಶಾಕ್‌ ನೀಡುತ್ತಿದೆ. ಬಸ್‌ ದರ ಏರಿಕೆ, ವಿದ್ಯುತ್ ದರ ಹೆಚ್ಚಳ, ಹಾಲಿನ ದರ ಹೆಚ್ಚಳ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದು, ಇದೀಗ ಶೀಘ್ರವೇ ನೀರಿನ ದರ ಏರಿಕೆ ಮಾಡುವ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಳಿವನ್ನು ನೀಡಿದ್ದಾರೆ.

ಬೆಂಗಳೂರಿನ ಕಾವೇರಿ ಭವನದಲ್ಲಿ ಮಂಗಳವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಬಿ ಎಂ ಆರ್ ಡಿ ಎ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಡಿ ಕೆ ಶಿವಕುಮಾರ್‌ ಮಾತನಾಡಿ, 2014ರಿಂದ ಬೆಂಗಳೂರಲ್ಲಿ ಕಾವೇರಿ ನೀರಿನ ದರವನ್ನು ಹೆಚ್ಚಳ ಮಾಡಿಲ್ಲ. ಹೀಗಾಗಿ ನೀರು ನಿರ್ವಹಣೆಯ ಹೊರೆ ಹೆಚ್ಚಾಗುತ್ತಿದೆ. ಇದರಿಂದ ನಷ್ಟ ಉಂಟಾಗುತ್ತಿದೆ ಎಂದು ಹೇಳಿದರು.

Deputy CM DK Shivakumar Announces Hike In Water Tariff Soon

ತಿಂಗಳಿಗೆ ನೀರಿನ ದರ ಕಡಿಮೆ ಇದ್ದು, ನಿರ್ವಹಣಾ ವೆಚ್ಚ ಹೆಚ್ಚಿರುವ ಕಾರಣ 85 ಕೋಟಿ ಹೊರೆಯಾಗುತ್ತಿದೆ. ವರ್ಷಕ್ಕೆ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಶೀಘ್ರವೇ ನೀರಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಕಳೆದ ಬಾರಿ ನೀರಿನ ಅಭಾವದಿಂದ ದೊಡ್ಡ ಸಮಸ್ಯೆ ಆಗಿತ್ತು. ಈ ಬಾರಿ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಲಮಂಡಳಿಗೆ ವಾರ್ಷಿಕ 1 ಸಾವಿರ ಕೋಟಿ ನಷ್ಟ ಉಂಟಾಗುತ್ತಿದೆ. ಈ ನಷ್ಟವನ್ನು ಸರಿದೂಗಿಸಲು, ಸಂಸ್ಥೆ ಉಳಿಸಲು ಶೀಘ್ರವೇ ನೀರಿನ ದರ ಹೆಚ್ಚಳ ಮಾಡುವುದಾಗಿ ಘೋಷಿಸಿದರು.

ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

2014 ರಿಂದ ಇಲ್ಲಿಯ ತನಕ ಅಂದರೆ 11 ವರ್ಷಗಳಿಂದ ನಗರದಲ್ಲಿ ನೀರಿನ ಬಿಲ್ ಅನ್ನು ಹೆಚ್ಚಳ ಮಾಡಿಲ್ಲ. ಈ ಕಾರಣಕ್ಕೆ ಬಿಡ್ಬ್ಯೂಎಸ್ಎಸ್ ಬಿಗೆ ವರ್ಷಕ್ಕೆ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿಯಾಗುತ್ತಿತ್ತು. ಈ ಬಾರಿ 75 ಕೋಟಿಯಾಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ತಿಂಗಳಿಗೆ 85 ಕೋಟಿ ಹಣ ನಷ್ಟವಾಗುತ್ತಿದೆ ಎಂದರು.

ನೀರಿನ ಬಿಲ್ ಹೆಚ್ಚಳ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಕಾರಣಕ್ಕೆ ನಗರದ ಎಲ್ಲಾ ಶಾಸಕರ ಬಳಿ ಹೋಗಿ ಮಂಡಳಿಯವರು ಚರ್ಚೆ ನಡೆಸಿದ್ದಾರೆ. ಅಲ್ಲದೇ ನೀರಿನ ಜಾಲ ವಿಸ್ತರಣೆ ಮಾಡುವ ಸಲುವಾಗಿ ಅನೇಕ ಬ್ಯಾಂಕ್ ಗಳ ಬಳಿ ಸಾಲ ಕೇಳಲೂ ಆಗುತ್ತಿಲ್ಲ. ಬ್ಯಾಂಕ್ ಅವರು ಮಂಡಳಿ ನಷ್ಟದಲ್ಲಿದೆ ನಾವು ಸಹಾಯ ಮಾಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಹಣ ನೀಡುತ್ತಿರುವ ಜೈಕಾ ಸಂಸ್ಥೆ ಸೇರಿದಂತೆ ಹಲವಾರು ಸಂಸ್ಥೆಗಳು ನೆರವು ಬೇಕು ಎಂದಾದರೆ ಹಣ ವಾಪಸಾತಿಯ ಬಗ್ಗೆ ಭರವಸೆ ನೀಡಿ ಎಂದು ತಿಳಿಸುತ್ತಿದ್ದಾರೆ" ಎಂದರು.

ಈ ಹಿಂದೆ ಕೊಳೆಗೇರಿ ಹಾಗೂ ಬಡವರ ಉಪಯೋಗಕ್ಕೆ ಸರ್ಕಾರ ರೂ.20 ಕೋಟಿ ಹಣ ಮೀಸಲಿಟ್ಟಿತ್ತು. ಹಿಂದಿನ ಬಿಜೆಪಿ ಸರ್ಕಾರ ಈ ಸಹಾಯಧನವನ್ನು ನಿಲ್ಲಿಸಿತ್ತು. ಇದನ್ನು ಮುಂದುವರೆಸಲಾಗುವುದು. ಬಡವರಿಗೆ ನೀರು ನೀಡಿದರೂ ಸಹ ಅದು ಕೂಡ ಲೆಕ್ಕಕ್ಕೆ ಸಿಗಬೇಕು. 1 ಪೈಸೆ ಹಣ ನೀಡಿಯಾದರೂ ಸಂಪರ್ಕ ನೀಡಬೇಕು. ಯಾರು ಎಷ್ಟು ನೀರು ಪಡೆಯುತ್ತಿದ್ದಾರೆ ಎನ್ನುವ ಲೆಕ್ಕ ಸರ್ಕಾರಕ್ಕೆ ಸಿಗಬೇಕು. ಅನೇಕ ಕಡೆ ಕೊಳೆಗೇರಿ ಹೆಸರಿನಲ್ಲಿ ಉಳ್ಳವರು ನೀರು ಪಡೆಯುತ್ತಿದ್ದಾರೆ" ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲರನ್ನು ಒಳಗೊಂಡಿರುವ ತೆರಿಗೆ ಪಾವತಿಗೆ ವ್ಯವಸ್ಥೆ ರೂಪಿಸಿರುವ ಮಾದರಿಯಲ್ಲಿ ನೀರಿನ ಸಂಪರ್ಕ, ಬಳಕೆಯಾಗುವ ನೀರಿನ ಬಗ್ಗೆ ನಿಖರ ಮಾಹಿತಿ ಸಿಗಬೇಕು ಎಂದು ಯೋಜನೆ ರೂಪಿಸಲಾಗಿದೆ. ಬಡವರು, ಶ್ರೀಮಂತರು, ವಸತಿ ಸಮುಚ್ಚಯಗಳು ಹೀಗೆ ಪ್ರತಿಯೊಂದು ಲೆಕ್ಕವೂ ಸಿಗಬೇಕು. ಸಾರ್ವಜನಿಕರು ಕೊಂಚವಾದರೂ ಹಣ ಪಾವತಿ ಮಾಡಿ ನೀರಿನ ಸಂಪರ್ಕ ಪಡೆಯಬೇಕು. ಅಕ್ರಮ ಸಂಪರ್ಕ ಪಡೆದಿರುವವರು ಸಕ್ರಮ ಮಾಡಿಕೊಳ್ಳಬೇಕು. ಬಿಡ್ಬ್ಯೂ ಎಸ್ ಎಸ್ ಬಿ ಉಳಿವಿಗೆ ಮತ್ತು ಎಲ್ಲರಿಗೂ ನೀರನ್ನು ಒದಗಿಸಿಕೊಡಲು ನಾವು ತೀರ್ಮಾನ ಮಾಡಬೇಕಿದೆ ಎಂದು ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+