ಸೇನಾ ಮುಖ್ಯಸ್ಥರ ದುರ್ಮರಣ: ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ
ಹಾವೇರಿ, ಡಿಸೆಂಬರ್ 10: ಸೇನಾ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ ಸಂಭ್ರಮಾಚರಣೆಯ ಟ್ವೀಟ್‍ಗಳನ್ನು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಅವರು ಶಿಗ್ಗಾಂವ್ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
Koo AppOffensive Tweets and Social Media posts about the tragic chopper crash in which we lost our #CDSGeneralBipinRawat will not be tolerated. I strongly condemn all such messages and have instructed our Police Officials to take strict disciplinary legal action against the offenders. They should be booked immediately as this is absolutely unpardonable. - Basavaraj Bommai (@bsbommai) 10 Dec 2021
ದ್ವೇಷದ ಸಂದೇಶಗಳನ್ನು ಹಂಚಿಕೊಳ್ಳುವವರನ್ನು ಪ್ರತಿ ಭಾರತೀಯನೂ ಅತ್ಯಂತ ಕಠಿಣ ಶಬ್ಧಗಳಲ್ಲಿ ಖಂಡಿಸಬೇಕು. ದೇಶಕ್ಕಾಗಿ ದೊಡ್ಡ ಸೇನೆಯನ್ನು ಮುನ್ನಡೆಸಿ ರಕ್ಷಣೆ ಮಾಡುತ್ತಿದ್ದವರ ಬಗ್ಗೆ, ಆ ಹುದ್ದೆಯ ಘನತೆಯ ಕುರಿತು ಪರಿಕಲ್ಪನೆ ಇಲ್ಲದೆ ಅತ್ಯಂತ ಬೇಜವಾಬ್ದಾರಿಯಿಂದ ಟ್ವೀಟ್ ಮಾಡಿರುವವರ ಕೃತ್ಯಕ್ಕೆ ಸಂಬಂಧಿಸಿದಂತೆ ಫೇಸ್‌ಬುಕ್, ಟ್ವೀಟ್ ಮಾಡಿರುವವರ ವಿಳಾಸವನ್ನು ಪತ್ತೆ ಮಾಡಿ ಕೂಡಲೇ ಪ್ರಕರಣ ದಾಖಲು ಮಾಡಿ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಈ ವಿಕೃತಿಯನ್ನು ಕ್ಷಮಿಸುವ ಮಾತಿಲ್ಲ. ಖಂಡಿತವಾಗಿ ಶಿಕ್ಷೆ ಆಗಲೇಬೇಕು ಎಂದರು.

ಹೆಲಿಕಾಪ್ಟರ್ ದುರಂತದಲ್ಲಿ ಮರಣವನ್ನಪ್ಪಿರುವ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆ ಇಂದು ನೆರವೇರಲಿದ್ದು, ಕನ್ನಡನಾಡಿನ ಪರವಾಗಿ ಗೌರವ ಮತ್ತು ಶ್ರದ್ಧಾಂಜಲಿಯನ್ನು ಅರ್ಪಿಸುವುದಾಗಿ ತಿಳಿಸಿದರು. ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮ್ಯಾಂಡ್ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದು, ಅತ್ಯುತ್ತಮ ಚಿಕಿತ್ಸೆಯನ್ನು ಪರಿಣಿತ ವೈದ್ಯರ ತಂಡ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಗುಣಮುಖರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಬೆಳಗಾವಿ ಅಧಿವೇಶನ:
ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದಿಂದ ಕಾನೂನು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಶ್ನೋತ್ತರ ಇರುತ್ತದೆ. ಪ್ರತಿಪಕ್ಷದವರು ಎತ್ತುವ ವಿಚಾರಗಳಿಗೆ ಸೂಕ್ತ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದರು.

ಹಕ್ಕಿಜ್ವರ:
ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಬಗ್ಗೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸಭೆ ನಡೆಸಲಾಗಿದ್ದು, ಸೂಕ್ತ ಲಸಿಕೆ, ಔಷಧಿಗಳ ಪೂರೈಕೆ ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸಲು ತಿಳಿಸಲಾಗಿದೆ. ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದಿಂದ ಮಾರ್ಗದರ್ಶನವನ್ನು ನಿರೀಕ್ಷಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications