ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೇನಾ ಮುಖ್ಯಸ್ಥರ ದುರ್ಮರಣ: ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ

|
Google Oneindia Kannada News

ಹಾವೇರಿ, ಡಿಸೆಂಬರ್ 10: ಸೇನಾ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ ಸಂಭ್ರಮಾಚರಣೆಯ ಟ್ವೀಟ್‍ಗಳನ್ನು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಅವರು ಶಿಗ್ಗಾಂವ್ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದ್ವೇಷದ ಸಂದೇಶಗಳನ್ನು ಹಂಚಿಕೊಳ್ಳುವವರನ್ನು ಪ್ರತಿ ಭಾರತೀಯನೂ ಅತ್ಯಂತ ಕಠಿಣ ಶಬ್ಧಗಳಲ್ಲಿ ಖಂಡಿಸಬೇಕು. ದೇಶಕ್ಕಾಗಿ ದೊಡ್ಡ ಸೇನೆಯನ್ನು ಮುನ್ನಡೆಸಿ ರಕ್ಷಣೆ ಮಾಡುತ್ತಿದ್ದವರ ಬಗ್ಗೆ, ಆ ಹುದ್ದೆಯ ಘನತೆಯ ಕುರಿತು ಪರಿಕಲ್ಪನೆ ಇಲ್ಲದೆ ಅತ್ಯಂತ ಬೇಜವಾಬ್ದಾರಿಯಿಂದ ಟ್ವೀಟ್ ಮಾಡಿರುವವರ ಕೃತ್ಯಕ್ಕೆ ಸಂಬಂಧಿಸಿದಂತೆ ಫೇಸ್‌ಬುಕ್, ಟ್ವೀಟ್ ಮಾಡಿರುವವರ ವಿಳಾಸವನ್ನು ಪತ್ತೆ ಮಾಡಿ ಕೂಡಲೇ ಪ್ರಕರಣ ದಾಖಲು ಮಾಡಿ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಈ ವಿಕೃತಿಯನ್ನು ಕ್ಷಮಿಸುವ ಮಾತಿಲ್ಲ. ಖಂಡಿತವಾಗಿ ಶಿಕ್ಷೆ ಆಗಲೇಬೇಕು ಎಂದರು.

Derogatory tweets on Gen. Rawats death; legal action against the culprits: CM Bommai


ಹೆಲಿಕಾಪ್ಟರ್ ದುರಂತದಲ್ಲಿ ಮರಣವನ್ನಪ್ಪಿರುವ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆ ಇಂದು ನೆರವೇರಲಿದ್ದು, ಕನ್ನಡನಾಡಿನ ಪರವಾಗಿ ಗೌರವ ಮತ್ತು ಶ್ರದ್ಧಾಂಜಲಿಯನ್ನು ಅರ್ಪಿಸುವುದಾಗಿ ತಿಳಿಸಿದರು. ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮ್ಯಾಂಡ್ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದು, ಅತ್ಯುತ್ತಮ ಚಿಕಿತ್ಸೆಯನ್ನು ಪರಿಣಿತ ವೈದ್ಯರ ತಂಡ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಗುಣಮುಖರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಬೆಳಗಾವಿ ಅಧಿವೇಶನ:

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದಿಂದ ಕಾನೂನು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಶ್ನೋತ್ತರ ಇರುತ್ತದೆ. ಪ್ರತಿಪಕ್ಷದವರು ಎತ್ತುವ ವಿಚಾರಗಳಿಗೆ ಸೂಕ್ತ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದರು.

Derogatory tweets on Gen. Rawats death; legal action against the culprits: CM Bommai

ಹಕ್ಕಿಜ್ವರ:

ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಬಗ್ಗೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸಭೆ ನಡೆಸಲಾಗಿದ್ದು, ಸೂಕ್ತ ಲಸಿಕೆ, ಔಷಧಿಗಳ ಪೂರೈಕೆ ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸಲು ತಿಳಿಸಲಾಗಿದೆ. ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದಿಂದ ಮಾರ್ಗದರ್ಶನವನ್ನು ನಿರೀಕ್ಷಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

English summary
Some persons with perverted minds have tweeted derogative, celebratory messages about the death of Chief of Defence Staff Gen. Rawat. The police Chief has been instructed to take legal action against these elements: Chief Minister Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X