Karnataka Congress: ಹತಾಶೆಯಲ್ಲಿರುವ ವಿಪಕ್ಷಗಳು ಫೇಕ್ ಫ್ಯಾಕ್ಟರಿಗಳಿಗೆ ಕೆಲಸಕೊಟ್ಟಿವೆ: ಕಾಂಗ್ರೆಸ್ ಆಕ್ರೋಶ
ಬೆಂಗಳೂರು, ಜುಲೈ 25: ಆಳಂದ ಶಾಸಕ ಬಿಆರ್ ಪಾಟೀಲ್ ಕಲಬುರಗಿ ಉಸ್ತುವಾರಿ ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ ಎನ್ನಲಾದ ವರದಿ ಕುರಿತು ಬಿಜೆಪಿ ಸುಳ್ಳು ಆರೋಪ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಸೋಲಿನ ಹತಾಶೆಯಲ್ಲಿರುವ ವಿಪಕ್ಷಗಳು ಈಗ ತಮ್ಮ ಫೇಕ್ ಫ್ಯಾಕ್ಟರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿವೆ.ಗ್ಯಾರಂಟಿಗಳ ಜಾರಿ ಮಾಡಿದ ನಮ್ಮ ಸರ್ಕಾರಕ್ಕೆ ಸಿಗುತ್ತಿರುವ ಜನಮೆಚ್ಚುಗೆಯನ್ನು ಸಹಿಸಲಾಗದೆ ನಕಲಿ ಸೃಷ್ಟಿಯ ಮೊರೆ ಹೋಗಿವೆ ವಿಪಕ್ಷಗಳು.ಶಾಸಕ ಬಿ ಆರ್ ಪಾಟೀಲ್ ಅವರ ಹಳೆಯ ವಿಳಾಸದ ನಕಲಿ ಲೆಟರ್ ಹೆಡ್ ನಲ್ಲಿ ನಕಲಿ ಪತ್ರ ಸೃಷ್ಟಿಸಿದ ಸಾಧನೆ ಮಾಡುತ್ತೇವೆ ಎಂದುಕೊಂಡಿದ್ದರೆ ಅದು ಮೂರ್ಖತನವಾಗುತ್ತದೆ ಎಂದು ಕಿಡಿಕಾರಿದೆ.

ಪತ್ರದ ಕುರಿತು ಶಾಸಕ ಬಿ.ಆರ್ ಪಾಟೀಲ್ ಹೇಳಿದ್ದೇನು?
ಶಾಸಕ ಬಿ.ಆರ್ ಪಾಟೀಲ್ ಅವರು ಶಾಸಕರ ಕುಂದುಕೊರತೆಗಳನ್ನು ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿದು ಬಿಟ್ಟಿರುತ್ತಾರೆ ಎಂದು ಶಾಸಕರು ಹೇಳಿದ್ದಾರೆ.
ಈ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಕೆಲ ಆರೋಪಗಳನ್ನು ಮಾಡುತ್ತಿರುವಂತೆ ಕುತಂತ್ರದಿಂದ ಸುಳ್ಳುಗಳನ್ನು ಹರಿಬಿಡಲಾಗಿದೆ. ಈ ಪತ್ರ ತಮ್ಮದಲ್ಲಾ, ತಾವು ಕೊಟ್ಟ ಪತ್ರಕ್ಕೂ ಈ ಪತ್ರದಲ್ಲಿರುವ ವಿಷಯಕ್ಕೂ ಸಂಬಂಧವಿಲ್ಲಾ. ಈ ಫೇಕ್ ಲೆಟರ್ ನಲ್ಲಿ ನನ್ನ ಸಹಿಯನ್ನು ಫೋಟೋ ಶಾಪ್ ಮೂಲಕ ಅಂಟಿಸಲಾಗಿದೆ. ಅಲ್ಲದೇ ಈ ಫೇಕ್ ಲೆಟರ್ ನಲ್ಲಿ ನನ್ನ ಹಳೆಯ ಮನೆಯ ವಿಳಾಸ ಬರೆಯಲಾಗಿದೆ.
ಸೋಲಿನ ಹತಾಶೆಯಲ್ಲಿರುವ ವಿಪಕ್ಷಗಳು ಈಗ ತಮ್ಮ ಫೇಕ್ ಫ್ಯಾಕ್ಟರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿವೆ.
— Karnataka Congress (@INCKarnataka) July 25, 2023
ಗ್ಯಾರಂಟಿಗಳ ಜಾರಿ ಮಾಡಿದ ನಮ್ಮ ಸರ್ಕಾರಕ್ಕೆ ಸಿಗುತ್ತಿರುವ ಜನಮೆಚ್ಚುಗೆಯನ್ನು ಸಹಿಸಲಾಗದೆ ನಕಲಿ ಸೃಷ್ಟಿಯ ಮೊರೆ ಹೋಗಿವೆ ವಿಪಕ್ಷಗಳು.
ಶಾಸಕ ಬಿ ಆರ್ ಪಾಟೀಲ್ ಅವರ ಹಳೆಯ ವಿಳಾಸದ ನಕಲಿ ಲೆಟರ್ ಹೆಡ್ ನಲ್ಲಿ ನಕಲಿ ಪತ್ರ ಸೃಷ್ಟಿಸಿದ ಸಾಧನೆ… pic.twitter.com/o0avhwoNNB
ಪತ್ರವನ್ನು ಡಿಜಿಟಲ್ ನಲ್ಲಿ ಟೈಪ್ ಮಾಡಿ, ಸಹಿಗೆ ಜೆರಾಕ್ಸ್ ನಿಂದ ಸ್ಕ್ಯಾನ್ ಮಾಡಿ ಬಳಸಲಾಗಿದೆ. ಈ ಪತ್ರ ನನ್ನದಲ್ಲಾ. ನನ್ನ ಎಲ್ಲಾ ಅಧಿಕೃತ ಪತ್ರಗಳಲ್ಲಿ ಕ್ರಮ ಸಂಖ್ಯೆಯನ್ನು ಪೂರ್ವನಿಯೋಜಿತವಾಗಿ ಪ್ರಿಂಟ್ ಮಾಡಿರಲಾಗುತ್ತದೆ. ಇದು ಫೇಕ್ ಲೆಟರ್ ಎನ್ನಲು ಅಷ್ಟು ಸಾಕು ಎಂದು ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.
ನನ್ನ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ಮನಸ್ಥಾಪ ಹಚ್ಚಲು ಕುತಂತ್ರದಿಂದ ಮಾಡಿರುವಂತಿದೆ. ಇದನ್ನು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೂಡ ಕಲಬುರ್ಗಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಿದ್ದೇನೆ ಎಂದೂ ಶಾಸಕ ಬಿ.ಆರ್ ಪಾಟೀಲ್ ತಿಳಿಸಿದ್ದಾರೆ.












Click it and Unblock the Notifications