Karnataka weather: ಮಳೆ ಬಂದರೂ ಕರ್ನಾಟಕದಲ್ಲಿ ಕಡಿಮೆಯಾಗಿಲ್ಲ ತಾಪಮಾನ
ಬೆಂಗಳೂರು, ಮೇ. 05: ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ವಾರ ಕೂಡ ಮಳೆಯಾಗುವ ಎಲ್ಲಾ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೂ ಕೂಡ ರಾಜ್ಯದಲ್ಲಿ ಶನಿವಾರ ಇನ್ನೂ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಶನಿವಾರ ಗರಿಷ್ಠ ಗರಿಷ್ಠ ತಾಪಮಾನ 44.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದರ ನಂತರ ರಾಯಚೂರು ಜಿಲ್ಲೆಯಲ್ಲಿ 44.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಶುಕ್ರವಾರವೂ ಎರಡೂ ಜಿಲ್ಲೆಗಳಲ್ಲಿಯೂ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಬೆಂಗಳೂರು ಹವಾಮಾನ ಕೇಂದ್ರ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಸುರಿದ ಮಳೆಯು ತಾಪಮಾನವನ್ನು ಒಂದು ಹಂತಕ್ಕೆ ತಂದಿದೆ. ಆದ್ದರಿಂದ ಶನಿವಾರ ಅಸಾಮಾನ್ಯವಾಗಿ ತಾಪಮಾನ ಹೆಚ್ಚಾಗಿಯೇ ಇತ್ತು. ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಇಂದು 38.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ನಿನ್ನೆ 36.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ಬೆಂಗಳೂರಿನಲ್ಲಿ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ನಿಂದ 37.6 ಡಿಗ್ರಿ ಸೆಲ್ಸಿಯಸ್‌ಗೆ ಜಿಗಿದಿದೆ. ಬೆಂಗಳೂರು ಕೆಐಎಎಲ್ 39.1 ರಿಂದ 39.2 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಪ್ರಕಾರ, ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ಮೇ 3 ರಂದು ಅತಿ ಹೆಚ್ಚು ಅಂದರೆ 79.5 ಮಿಮೀ ಮಳೆಯಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮೇ 11 ರ ವರೆಗೆ ಮಳೆಯ ಮುನ್ಸೂಚನೆಯನ್ನು ಸಹ ಬಿಡುಗಡೆ ಮಾಡಿದೆ. ಮೇ 6 ರವರೆಗೆ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಅತಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಮತ್ತು ಮಿಂಚಿನ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಉಳಿದ ಭಾಗವು ಶುಷ್ಕವಾಗಿರುತ್ತದೆ ಎಂದು ಹೇಳಿದೆ.
ಮೇ 7 ಮತ್ತು ಮೇ 11 ರ ನಡುವೆ, ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆಯ ಹೆಚ್ಚಳದ ಸಾಧ್ಯತೆಯಿದೆ. ಕರ್ನಾಟಕದ ಉಳಿದ ಭಾಗಗಳಲ್ಲಿಯೂ ಚದುರಿದಂತೆ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ವಾರ ಅಂದರೆ ಮೇ 7 ರ ನಂತರ ಮೇ 19 ರವರೆಗೆ ಸಾಧಾರಣದಿಂದ ಭಾರೀ ಮಳೆಯನ್ನು ನಿರೀಕ್ಷಿಸಬಹುದು ಎಂದು ತಿಳಿಸಿದೆ.












Click it and Unblock the Notifications