CM Siddaramaiah: ಬರಗಾಲದ ನಡುವೆಯೂ ದಸರಾ ಹಬ್ಬದ ಸಂಭ್ರಮದ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದಿಷ್ಟು!
ಮೈಸೂರು, ಅಕ್ಟೋಬರ್ 23 : ದಸರಾ ಎಂಬುದು ನಾಡ ಹಬ್ಬ, ಜನರ ಹಬ್ಬ. ಆದರೆ ಈ ಬಾರಿ ಬರಗಾಲವಿದೆ. ಆದರೂ ಜನ ದಸರಾದ ಸಂಭ್ರಮವನ್ನು ಸವಿಯುತ್ತಿರುವುದು ಸಂತೋಷದ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ಮೈಸೂರು ಜಿಲ್ಲಾಡಳಿತ ಮತ್ತು ಭಾರತೀಯ ವಾಯುಪಡೆ ವತಿಯಿಂದ ನಾಡಹಬ್ಬ ದಸರಾ 2023 ವೈಮಾನಿಕ ಪ್ರದರ್ಶನ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,ಮೈಸೂರು ದಸರಾ ಸಂದರ್ಭದಲ್ಲಿ ಏರ್ ಶೋ ಏರ್ಪಡಿಸಲು ಕೇಂದ್ರ ಸಚಿವರನ್ನು ಕೋರಲಾಗಿತ್ತು. ಅದರಂತೆ ಏರ್ ಶೋವನ್ನು ಏರ್ಪಡಿಸಲಾಗಿದೆ. ಹಿಂದೆ ಶ್ರೀಮತಿ ನಿರ್ಮಲಾ ಸೀತರಾಮನ್ ಅವರು ರಕ್ಷಣಾ ಸಚಿವರಾಗಿದ್ದಾಗ, ಇದೇ ರೀತಿ ಏರ್ ಶೋ ವನ್ನು ಏರ್ಪಡಿಸಲಾಗಿತ್ತು. ದಸರಾ ರಜೆಯ ಸಂದರ್ಭವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ, ಏರ್ ಶೋವನ್ನು ವೀಕ್ಷಿಸುತ್ತಿದ್ದಾರೆ. ಈ ಬಾರಿ ಬರಗಾಲವಿದೆ. ಆದರೂ ಜನ ದಸರಾದ ಸಂಭ್ರಮವನ್ನು ಸವಿಯುತ್ತಿರುವುದು ಸಂತೋಷದ ವಿಷಯ ಎಂದು ತಿಳಿಸಿದರು.

ನಾಳೆ ವಿಜಯದಶಮಿಯಂದು ಜಂಬೂ ಸವಾರಿ ಇದೆ. ಮಧ್ಯಾಹ್ನ ನಂದಿಪೂಜೆಯ ನಂತರ ಜಂಬೂಸವಾರಿ ಪ್ರಾರಂಭವಾಗುತ್ತದೆ. ಇಂದು ನಾನು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮೈಸೂರು ನಗರದ ಸಿಟಿರೌಂಡ್ಸ್ ಮಾಡಿ ದೀಪಾಲಂಕಾರದ ವ್ಯವಸ್ಥೆಯನ್ನು ವೀಕ್ಷಿಸಲಿದ್ದೇನೆ ಎಂದರು.
ಮೈಸೂರು ಮಹಾರಾಣಿ ಕಾಲೇಜಿನ ವಿಜ್ಞಾನ , ಕಲಾ ಕಾಲೇಜು, ಹಾಸ್ಟೆಲ್ ಕಟ್ಟಡಗಳನ್ನು ಒಟ್ಟಾರೆ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಸೂಚಿಸಲಾಗಿದ್ದು, ಇದರಿಂದ ಸುಮಾರು 2000 ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲಾಗಿದೆ. ಹಿಂದಿನ ಸರ್ಕಾರದವರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದರು.
ಬರಗಾಲದ ಕಾಮಗಾರಿಗಳು ಸಾಗುತ್ತಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಹಾಗೂ ಮೇವು ಬೆಳೆಯಲು ಹಾಗೂ ಸಂಗ್ರಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಬಾರಿ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ 10 ರಿಂದ 15 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯಿತ್ತು. ಆದರೆ ಈ ಬಾರಿ ಬೇಡಿಕೆ 15 ರಿಂದ 16 ಸಾವಿರ ಮೆಗಾವ್ಯಾಟ್ ಗೆ ಏರಿಕೆಯಾಗಿದೆ. 32000 ಮೆ.ವಾ ಉತ್ಪಾದಿಸುವ ಸಾಮಥ್ರ್ಯವಿದ್ದರೂ ಕೂಡ , ಆ ಪ್ರಮಾಣದ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಟೀಕಿಸುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಆರೋಪ ಮಾಡುವುದು ಬಿಟ್ಟರೆ ಬೇರೆ ಏನೂ ತಿಳಿದಿಲ್ಲ ಎಂದರು.
ಈ ಬಾರಿ ಮಳೆಯ ಅಭಾವದಿಂದಾಗಿ ರೈತರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರೈತರಿಗೆ ಐದು ಗಂಟೆಗಳ ನಿರಂತರ ವಿದ್ಯುತ್ ಪೂರೈಕೆಗೆ ಆದೇಶ ನೀಡಲಾಗಿದೆ. ಆದರೆ ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಯ ಭತ್ತ ಬೆಳೆಯುವ ರೈತರಿಗೆ ಏಳು ಗಂಟೆ ವಿದ್ಯುತ್ ನೀಡಲು ಆದೇಶಿಸಿದೆ. ಸುಮಾರು 2 ಸಾವಿರ ವ್ಯಾಟ್ ವರೆಗೆ ವಿದ್ಯುತ್ ಖರೀದಿ ಮಾಡಬೇಕಾಗಿದೆ. ಕೋಜನರೇಶನ್ ವ್ಯವಸ್ಥೆಯ ಮೂಲಕ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕಲ್ಲಿದ್ದಲ್ಲಿನ ಗುಣಮಟ್ಟದ ಮೇಲೆ ವಿದ್ಯುತ್ ಉತ್ಪಾದನೆಯ ಪ್ರಮಾಣ ನಿಗದಿಯಾಗುತ್ತದೆ. ಅದರಲ್ಲಿ ಕೆಲವೊಮ್ಮೆ 50 ರಿಂದ 60 ಮೆ.ವ್ಯಾ ವಿದ್ಯುತ್ ಮಾತ್ರ ಉತ್ಪಾದನೆ ಸಾಧ್ಯವಾಗುತ್ತದೆ. ಈ ಎಲ್ಲ ವಿಷಯಗಳು ಕೇವಲ ಆರೋಪ ಮಾಡುವ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿರಬೇಕು . ಅವರು ಮಾಡುವ ಆರೋಪಗಳೆಲ್ಲವೂ ಸುಳ್ಳು ಎಂದು ತಿಳಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ











Click it and Unblock the Notifications