ಜೆಡಿಎಸ್ ಸೇರಲಿದ್ದಾರೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ!

ವಿಜಯಪುರ, ಫೆಬ್ರವರಿ 18 : ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟುಮಾಡಿದ್ದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಜೆಡಿಎಸ್ ಸೇರಲಿದ್ದಾರೆ. ಕುಮಾರಸ್ವಾಮಿ ಅವರು ನಡಹಳ್ಳಿ ಅವರು ಬಂದರೆ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಎ.ಎಸ್.ಪಾಟೀಲ ನಡಹಳ್ಳಿ ಅವರು ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸುತ್ತಿದ್ದಾರೆ. '2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಬುಧವಾರ ನಡಹಳ್ಳಿ ಅವರು ಘೋಷಿಸಿದ್ದಾರೆ. [ಪ್ರತ್ಯೇಕ ರಾಜ್ಯದ ಬೇಡಿಕೆ, ಉಲ್ಟಾ ಹೊಡೆದ ಶಾಸಕ ನಡಹಳ್ಳಿ]

'ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ರಾಜಕೀಯವಾಗಿ ನನ್ನನ್ನು ತುಳಿಯಲು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿರುವ ನಡಹಳ್ಳಿ ಅವರು, ಮುಂದೆ ಎಂದಿಗೂ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ' ಎಂದು ಹೇಳಿದ್ದಾರೆ. [ಎ.ಎಸ್.ಪಾಟೀಲ ಉಚ್ಛಾಟನೆ?]

ಇತ್ತ ಕಾಂಗ್ರೆಸ್ ಶಾಸಕರಾಗಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿರುವ ನಡಹಳ್ಳಿ ಅವರ ಶಾಸಕತ್ವ ಅನರ್ಹಗೊಳಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ. ಈಗಾಲಗೇ ಹಲವಾರು ಬಾರಿ ಪಕ್ಷದ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡಿ ನಡಹಳ್ಳಿ ಅವರು ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ....

ಜೆಡಿಎಸ್ ಸೇರಲಿದ್ದಾರೆ ಶಾಸಕ ನಡಹಳ್ಳಿ

ಜೆಡಿಎಸ್ ಸೇರಲಿದ್ದಾರೆ ಶಾಸಕ ನಡಹಳ್ಳಿ

ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಜೆಡಿಎಸ್ ಸೇರಲಿದ್ದಾರೆ. '2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಬುಧವಾರ ಎ.ಎಸ್.ಪಾಟೀಲ ನಡಹಳ್ಳಿ ಅವರು ಘೋಷಿಸಿದ್ದಾರೆ.

ಎಂ.ಬಿ.ಪಾಟೀಲ್ ವಿರುದ್ಧ ಆಕ್ರೋಶ

ಎಂ.ಬಿ.ಪಾಟೀಲ್ ವಿರುದ್ಧ ಆಕ್ರೋಶ

'ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದೇನೆ. ಇನ್ನು ಮುಂದೆ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದರು. ಸಚಿವ ಎಂ.ಬಿ.ಪಾಟೀಲ್ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನ ನಡೆಸಿದ್ದಾರೆ' ಎಂದು ಪಾಟೀಲ್ ದೂರಿದ್ದಾರೆ.

ಅನರ್ಹಗೊಳಿಸುವಂತೆ ಮನವಿ

ಅನರ್ಹಗೊಳಿಸುವಂತೆ ಮನವಿ

ಕಾಂಗ್ರೆಸ್ ಪಕ್ಷದ ಶಾಸಕರಾಗಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಾ, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ನಡಹಳ್ಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುತ್ತೇನೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಪಕ್ಷಕ್ಕೆ ಸ್ವಾಗತಿಸಿದ ಕುಮಾರಸ್ವಾಮಿ

ಪಕ್ಷಕ್ಕೆ ಸ್ವಾಗತಿಸಿದ ಕುಮಾರಸ್ವಾಮಿ

'ಶಾಸಕ ನಡಹಳ್ಳಿ ಅವರು ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಾ ನಮಗೆ ಬೆಂಬಲ ನೀಡಿದ್ದಾರೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

'ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದರು'

'ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದರು'

ಎ.ಎಸ್.ಪಾಟೀಲ ನಡಹಳ್ಳಿ ಅವರು ಹಲವು ಬಾರಿ ಪಕ್ಷದ ನಾಯಕರಿಗೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. 'ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆಗಣಿಸಿದೆ. ಆದ್ದರಿಂದ ಅದು ಪ್ರತ್ಯೇಕ ರಾಜ್ಯವಾಗಬೇಕು' ಎಂದು ಹೇಳಿಕೆ ನೀಡಿದ್ದರು. ಬಿಬಿಎಂಪಿ ವಿಭಜನೆ ಕುರಿತು ಚರ್ಚಿಸಲು ಸರ್ಕಾರ ವಿಶೇಷ ವಿಧಾನಮಂಡಲ ಅಧಿವೇಶನ ಕರೆದಾಗ, 'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ವಿಶೇಷ ಅಧಿವೇಶನ ನಡೆಸಿ ನಿರ್ಣಯ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದರು.

ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದಾರೆ

ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದಾರೆ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದಿಂದ 2013ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎ.ಎಸ್.ಪಾಟೀಲ ನಡಹಳ್ಳಿ ಅವರು 36,231 ಮತಗಳನ್ನು ಪಡೆದು ಬಿಜೆಪಿಯ ಸೋಮನಗೌಡ ಪಾಟೀಲ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+