ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವರಹಿಪ್ಪರಗಿ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ ಉಚ್ಛಾಟನೆ?

|
Google Oneindia Kannada News

ಬೆಂಗಳೂರು, ಮೇ 19 : ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿ, ನಾಯಕರಿಗೆ ಮುಜುಗರ ಉಂಟುಮಾಡುತ್ತಿರುವ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಪರಮೇಶ್ವರ ಅವರು ಮಂಗಳವಾರ ಪತ್ರ ಬರೆದಿದ್ದು, ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. [ಪಾಟೀಲರಿಗೆ ಶೋಕಾಸ್ ನೋಟಿಸ್]

A.S Patil

ಶಾಸಕರು ಪಕ್ಷಕ್ಕೆ, ಪಕ್ಷದ ನಾಯಕರಿಗೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಕುರಿತು ಅವರಿಗೆ ನೋಟಿಸ್ ಜಾರಿಗೊಳಿಸಲಾಗಿತ್ತು. ಆದರೆ, ಅದಕ್ಕೆ ಅವರು ಉತ್ತರ ನೀಡಿಲ್ಲ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಿಲ್ಲಿಸಿಲ್ಲ ಎಂದು ಪರಮೇಶ್ವರ ಅವರು ಪತ್ರದಲ್ಲಿ ವಿವರಣೆ ನೀಡಿದ್ದಾರೆ. [ಉತ್ತರ ಕರ್ನಾಟಕ ಪತ್ಯೇಕ ರಾಜ್ಯ, ಇದು ಕತ್ತಿ ಬೇಡಿಕೆಯಲ್ಲ!]

ಹೈಕಮಾಂಡ್ ಅನುಮತಿ ಕೊಟ್ಟರೆ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತೇವೆ. ಈ ಕುರಿತು ಶೀಘ್ರದಲ್ಲಿಯೇ ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ಸಿಂಗ್‌ ಅವರಿಗೆ ಬರೆದಿರುವ ಪತ್ರದಲ್ಲಿ ಪರಮೇಶ್ವರ ಅವರು ಮನವಿ ಮಾಡಿದ್ದಾರೆ.

ಪಾಟೀಲರು ಮಾಡಿದ್ದೇನು : ಎ.ಎಸ್.ಪಾಟೀಲ ನಡಹಳ್ಳಿ ಅವರು ಹಲವು ಬಾರಿ ಪಕ್ಷದ ನಾಯಕರಿಗೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. 'ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆಗಣಿಸಿದೆ. ಆದ್ದರಿಂದ ಅದು ಪ್ರತ್ಯೇಕ ರಾಜ್ಯವಾಗಬೇಕು' ಎಂದು ಹೇಳಿಕೆ ನೀಡಿದ್ದರು.

ಬಿಬಿಎಂಪಿ ವಿಭಜನೆ ಕುರಿತು ಚರ್ಚಿಸಲು ಸರ್ಕಾರ ವಿಶೇಷ ವಿಧಾನಮಂಡಲ ಅಧಿವೇಶನ ಕರೆದಾಗ, 'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ವಿಶೇಷ ಅಧಿವೇಶನ ನಡೆಸಿ ನಿರ್ಣಯ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದರು.

ಅಂದಹಾಗೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಎ.ಎಸ್.ಪಾಟೀಲ ನಡಹಳ್ಳಿ ಅವರು 36,231 ಮತಗಳನ್ನು ಪಡೆದು 2013ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಪಾಟೀಲರ ಎದುರು 28,135 ಮತಗಳನ್ನು ಪಡೆದಿದ್ದ ಬಿಜೆಪಿಯ ಸೋಮನಗೌಡ ಪಾಟೀಲ ಅವರು ಸೋಲು ಅನುಭವಿಸಿದ್ದರು. [ಮಾಹಿತಿ : http://www.indiavotes.com]

English summary
Karnataka Pradesh Congress Committee(KPCC) chief DR.G.Parameshwar writes to Digvijaya Singh over Devarahipparagi MLA A.S Patil and requested to take decision on expelling Patil for anti-party activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X