ಸಿದ್ದರಾಮಯ್ಯ ವಿರುದ್ಧ ದೇವೇಗೌಡರಿಂದ ಚು.ಆಯೋಗಕ್ಕೆ ದೂರು

Recommended Video

      ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಎಚ್ ಡಿ ದೇವೇಗೌಡ | Oneindia Kannada

      ಬೆಂಗಳೂರು, ಏಪ್ರಿಲ್ 06: ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಮಾಜಿ ಶಿಷ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

      ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಪ್ರಭಾವ ಬಳಸಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಕರಿಸುವಂತೆ ಮಾಡಿಕೊಂಡಿದ್ದಾರೆ ಎಂದು ದೇವೇಗೌಡ ಅವರು ಆರೋಪಿಸಿದ್ದಾರೆ.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

      ಆರು ಪ್ರತ್ಯೇಕ ದೂರುಗಳನ್ನು ಸಿದ್ದರಾಮಯ್ಯ ವಿರುದ್ಧ ನೀಡಿರುವ ದೇವೇಗೌಡ ಅವರು, 'ಸಿದ್ದರಾಮಯ್ಯ ಅವರು ಗೃಹ ಇಲಾಖೆ ದುರ್ಬಳಕೆ ಮಾಡಿಕೊಂಡು ಪೊಲೀಸ್ ವಾಹನಗಳಲ್ಲಿ, ಆಂಬುಲೆನ್ಸ್‌ಗಳಲ್ಲಿ ಹಣ ಸಾಗಾಟ ಮಾಡುತ್ತಿದ್ದಾರೆ' ಎಂದು ಗಂಭೀರ ಆರೋಪ ಮಾಡಿದ್ದಾರೆ.

      Deve Gowda gives complaint to election commission against Siddaramaiah

      ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿ ಚುನಾವಣೆಗಾಗಿ ಹಣ ಸಂಗ್ರಹ ಸಹ ಮಾಡುತ್ತಿದ್ದಾರೆ, ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಅವರು ತಮ್ಮ ಪ್ರಭಾವ ಬಳಸಿ ಪೊಲೀಸ್ ಇಲಾಖೆ ಕಾಂಗ್ರೆಸ್‌ಗೆ ಬೆಂಬಲಿಸುವಂತೆ ನೋಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

      ದೇವೇಗೌಡ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು 'ನಾನು ಯಾವುದೇ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ, ಅಂತಹದ್ದೇನಾದರೂ ಆಗಿದ್ದರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ, ಇನ್ನು ಪೊಲೀಸ್ ವಾಹನ, ಆಂಬುಲೆನ್ಸ್‌ನಲ್ಲಿ ಹಣ ಸಾಗಿಸುವ ಕೆಲಸ ದೇವೇಗೌಡರ ಕಾಲದಲ್ಲಿ ಆಗಿರಬಹುದೇನೊ' ಎಂದು ಗೌಡರಿಗೆ ಟಾಂಗ್ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+