6 ತಿಂಗಳಲ್ಲಿ ಸರ್ಕಾರ ಖತಂ: ಸಿದ್ದರಾಮಯ್ಯ ಸರ್ಕಾರ ಬೀಳಿಸುತ್ತೇವೆ: ಅಮಿತ್‌ ಶಾಗೆ ಆ ಇಬ್ಬರು ನಾಯಕರಿಂದ ವಚನ?

ಬೆಂಗಳೂರು, ಆಗಸ್ಟ್‌ 24: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಮುಡಾ ಪ್ರಕರಣ ದೊಡ್ಡ ಕಂಟಕವಾಗಿದೆ. ಈ ಪ್ರಕರಣದ ಕುರಿತು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಹೋರಾಟ ನಡೆಸಿದ್ರೆ, ಇತ್ತ ಸರ್ಕಾರ ಪತನಕ್ಕೆ ದೆಹಲಿಯಲ್ಲಿ ಮಾಸ್ಟರ್‌ ಪ್ಲಾನ್‌ ನಡೆಯುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶಾಸಕಾಂಗ ಸಭೆಯಲ್ಲಿ ಸರ್ಕಾರದ ಅಸ್ಥಿರತೆಗೆ ಕುರಿತು ನಡೆಸಿರುವ ಪ್ಲಾನ್‌ ಕುರಿತು ಸಿದ್ದರಾಮಯ್ಯ ಹಾಗೂ ಸಚಿವರು ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಕಿಂಗ್‌ ವಿಚಾರವನ್ನು ಹೊರಹಾಕಿದ್ದಾರೆ.

Deve Gowda Kumaraswamy Master Plan In Delhi To Bring Down Government Siddaramaiah accused

ರಾಜ್ಯ ಸರ್ಕಾರವನ್ನು ಇನ್ನಾರು ತಿಂಗಳಲ್ಲಿ ಅಸ್ಥಿರಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭರವಸೆ ನೀಡಿ ಬಂದಿದ್ದಾರೆ. ಹೀಗಾಗಿಯೇ ಸರ್ಕಾರದ ವಿರುದ್ದ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಪ್ರಾಸಿಕ್ಯೂಷನ್ ಅನುಮತಿಯಂತಹ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಮಾಹಿತಿಯಲ್ಲಿ ಶಾಸಕಾಂಗ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಡೆಸಿದ ಹಗರಣಗಳನ್ನು ಬಯಲಿಗೆ ತಂದು ಅವುಗಳ ವಿರುದ್ಧ ತನಿಖೆ ನಡೆಸುವುದಾಗಿಯೂ ಸಿದ್ದರಾಮಯ್ಯ ಸಭೆಗೆ ತಿಳಿಸಿದರು ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನನ್ನನ್ನು ಗುರಿಯಾಗಿಸಿಕೊಂಡು ಸರ್ಕಾರನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿವೆ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸರ್ಕಾರ ಅಸ್ಥಿರಗೊಳಿಸಲು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಹಾಗೂ ಹೆಚ್‌ ಡಿ ಕುಮಾರಸ್ವಾಮಿ ಅವರು ಪ್ಲಾನ್‌ ಮಾಡಿದ್ದಾರೆ ಎಂದು ಸಭೆಯಲ್ಲಿ ಹೇಳಲಾಗಿದೆ.

ಕುಮಾರಸ್ವಾಮಿ ಹಾಗೂ ದೇವೇಗೌಡರು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ನಾವು ಅಸ್ಥಿರಗೊಳಿಸುತ್ತೇವೆ ಎಂದು ದೆಹಲಿಯಲ್ಲಿ ಅಮಿತ್ ಶಾ ಅವರಿಗೆ ಭರವಸೆ ನೀಡಿರುವುದೇ ಇದೆಲ್ಲದಕ್ಕೂ ಕಾರಣ. ಆದರೆ, ಅವರ ಕುತಂತ್ರ ಫಲಿಸುವುದಿಲ್ಲ. ಜೊತೆಗೆ ಮುಡಾ ಆಗಲಿ, ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಾಗಲಿ ನನ್ನದು ಎಳ್ಳಷ್ಟೂ ಪಾತ್ರವಿಲ್ಲ. ಮುಡಾ ಪ್ರಕರಣದಲ್ಲಿ ನನ್ನ ಬಾಮೈದನೂ ಸೇರಿದಂತೆ ಕುಟುಂಬದ ಯಾವುದೇ ಸದಸ್ಯರ ಹಸ್ತಕ್ಷೇಪವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ನನ್ನ 40 ವರ್ಷದ ರಾಜಕೀಯ ಜೀವನಕ್ಕೆ ಕಪ್ಪುಚುಕ್ಕೆ ಇಡುವ ಹುನ್ನಾರ ಹಾಗೂ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ದುರುದ್ದೇಶದಿಂದ ಪ್ರತಿಪಕ್ಷಗಳು ಕುತಂತ್ರ ನಡೆಸಿವೆ. ಇದರ ವಿರುದ್ಧ ಕಾನೂನು ಹೋರಾಟದ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ನವರ ಅಕ್ರಮಗಳನ್ನು ಹೊರಗೆಳೆದು ಜನರ ಮುಂದೆ ಇಡುವ ಮೂಲಕ ಅವರ ಕುತಂತ್ರ ಫಲಿಸದಂತೆ ಮಾಡಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಸಭೆಯಲ್ಲಿ ಸ್ವಪಕ್ಷದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು ಎಂದು ಮೂಲಗಳು ಹೇಳಿವೆ.

ಹೆಚ್‌ ಡಿ ಕುಮಾರಸ್ವಾಮಿ ಬಿಜೆಪಿಯ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಜನಾರ್ದನ ರೆಡ್ಡಿ ಅವರ ವಿರುದ್ಧವೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ದೂರುಗಳು ಬಂದಿದ್ದರೂ ಪರಿಗಣಿಸಿಲ್ಲ. ನನ್ನ ವಿರುದ್ಧ ಮಾತ್ರ ತರಾತುರಿಯಲ್ಲಿ ಕೇಂದ್ರ ಸರ್ಕಾರ, ಬಿಜೆಪಿಯವರ ಒತ್ತಡಕ್ಕೆ ಮಣಿದು ಅನುಮತಿ ನೀಡಿ ತಾರತಮ್ಯ ಎಸಗಿದ್ದಾರೆ. ಇದರ ವಿರುದ್ದದ ಕಾನೂನು ಹೋರಾಟದಲ್ಲಿ ಜಯ ಸಿಗುವ ನಂಬಿಕೆ ನನಗೆ ಇದೆ ಸ್ವಪಕ್ಷದ ನಾಯಕರಿಗೆ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ.‌ ನಾವು ನಿಮ್ಮೊಂದಿಗಿದ್ದೇವೆ, ಯಾವುದೇ ಕಾರಣಕ್ಕೂ ಎದೆಗುಂದಬೇಡಿ ಎಂದು ಒಕ್ಕೊರಲ ಬೆಂಬಲ ಸೂಚಿಸಿದ್ದಾರೆ. ಇಡೀ ಶಾಸಕರು ಸರ್ವಾನುಮತದಿಂದ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ತೀರ್ಮಾನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+