ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಮೀಸಲಾತಿ ನಿರ್ಣಯಕ್ಕೆ ದೇವೇಗೌಡ ಬೆಂಬಲ

|
Google Oneindia Kannada News

ಬೆಂಗಳೂರು, ಜನವರಿ 08: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿ ಸಮುದಾಯಗಳಿಗೆ 10% ಮೀಸಲಾತಿ ನೀಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಣಯಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಬೆಂಬಲ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡ ಅವರು, ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ನಿರ್ಣಯಕ್ಕೆ ಜೆಡಿಎಸ್‌ ಬೆಂಬಲ ನೀಡುತ್ತದೆ ಎಂದು ದೇವೇಗೌಡ ಹೇಳಿದ್ದಾರೆ.

Deve Gowda support central government decision of giving reservation for upper caste

ಮೇಲ್ವರ್ಗದವರಿಗೂ ಉದ್ಯೋಗದಲ್ಲಿ ಮೀಸಲಾತಿ, ಯಾರು ಇದಕ್ಕೆ ಅರ್ಹರು? ಮೇಲ್ವರ್ಗದವರಿಗೂ ಉದ್ಯೋಗದಲ್ಲಿ ಮೀಸಲಾತಿ, ಯಾರು ಇದಕ್ಕೆ ಅರ್ಹರು?

ಸಮಾಜದ ದುರ್ಬಲ ವರ್ಗಗಳ ಪರ ನಾವು ಸದಾ ನಿಂತಿದ್ದೇವೆ ಮತ್ತು ಮುಂದೆಯೂ ಅದನ್ನೇ ಮುಂದುವರೆಸುತ್ತೇವೆ ಎಂದು ದೇವೇಗೌಡ ಹೇಳಿದ್ದಾರೆ.

ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಮೀಸಲಾತಿಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಮೀಸಲಾತಿ

ಮೇಲ್ವರ್ಗದಲ್ಲಿರುವ ಆರ್ಥಿಕವಾಗಿ ಹಿಂದುಳಿದವರಿಗೂ ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸೋಮವಾರ ನವದೆಹಲಿಯಲ್ಲಿ ನಡೆಸ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದಾಗಿ ಮೇಲ್ವರ್ಗದಲ್ಲಿ ಹುಟ್ಟಿದ ಬುದ್ಧಿವಂತ ಯುವಕರಿಗೂ ಇನ್ನುಮುಂದೆ ಉದ್ಯೋಗದಲ್ಲಿ ಮೀಸಲಾತಿ ದೊರೆಯಲಿದೆ.

English summary
JDS leader HD Deve Gowda support central government decision of giving reservation for upper caste economically backward community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X