ತೆಂಗು, ಅಡಕೆ ಬೆಳೆಗಾರರ ಪರವಾಗಿ ಕೇಂದ್ರಕ್ಕೆ ದೇವೇಗೌಡ ಮನವಿ

Posted By:
Subscribe to Oneindia Kannada

ನವದೆಹಲಿ, ಏಪ್ರಿಲ್ 12: ರಾಜ್ಯದಲ್ಲಿ ಆವರಿಸಿರುವ ಬರದ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯದ ತೆಂಗು ಹಾಗೂ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಗೌಡರು, ''ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯದ ರೈತರ ಸಂಕಷ್ಟದ ಬಗ್ಗೆ ಹೇಳಿದ್ದೇವೆ. ತೆಂಗು ,ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ನೀರಿನ ಕೊರತೆಯಿಂದ ತೆಂಗು ,ಅಡಿಕೆ ಮರ ಒಣಗಿವೆ. ಒಣಗಿದ ಮರಗಳನ್ನು ಕಡಿದು ಹಾಕುತ್ತಿದ್ದಾರೆ'' ಎಂದು ವಿವರಿಸಿರುವುದಾಗಿ ತಿಳಿಸಿದರು.

Deve Gowda urges central governmet to send experts team to Karnataka to analyse Coconut, Areka

ಆನಂತರ ತಮ್ಮ ಮಾತನ್ನು ಮುಂದುವರಿಸಿ, ''ಪರಿಸ್ಥಿತಿ ಅವಲೋಕನಕ್ಕಾಗಿ ತಜ್ಞರ ಅಧ್ಯಯನ ತಂಡವನ್ನು ರಾಜ್ಯಕ್ಕೆ ತಂಡ ಕಳುಹಿಸುವಂತೆ ಮನವಿ ಮಾಡಿದ್ದೇನೆ. ಅಲ್ಲದೆ, ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಗೋರಕ್ ಸಿಂಗ್ ಸಮಿತಿ ನೀಡಿರುವ ವರದಿಯನ್ನು ಜಾರಿಗೊಳಿಸಬೇಕು'' ಎಂದು ಆಗ್ರಹಿಸಿರುವುದಾಗಿ ತಿಳಿಸಿದರು.

ಇದಕ್ಕೆ ಸ್ಪಂದಿಸಿರುವ ಕೇಂದ್ರ ಕೃಷಿ ಸಚಿವರು ತಜ್ಞರ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದ್ದಾರೆಂದು ತಿಳಿಸಿದರು.

Deve Gowda urges central governmet to send experts team to Karnataka to analyse Coconut, Areka

ಈ ಹಿಂದೆ, ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಇಂಥ ಪ್ರಯತ್ನ ಮಾಡಿದ್ದನ್ನು ನೆನಪಿಸಿಕೊಂಡ ಅವರು, ''ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಥದ್ದೇ ಪರಿಸ್ಥಿತಿ ರಾಜ್ಯದಲ್ಲಿ ಕಾಣಿಸಿಕೊಂಡಿತ್ತು. ಆಗ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆ.ಅದಕ್ಕೆ ಸ್ಪಂದಿಸಿದ್ದ ಶರದ್ ಪವಾರ್, ತಜ್ಞರ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಿದ್ದರು'' ಎಂದು ತಿಳಿಸಿದರು.

ಆನಂತರ, ಇತ್ತೀಚೆಗೆ ತಾವು ಕೈಗೊಂಡಿರುವ ರಾಜ್ಯ ಪ್ರವಾಸದ ಬಗ್ಗೆ ಮಾತನಾಡಿದ ಗೌಡರು, ''ಕಳೆದೊಂದು ವಾರದಿಂದ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತೆಂಗು,ಅಡಿಕೆ ನಾಶವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Former Prime Minister Deve Gowda has urged the central government to send an experts committee to analyse the bad situations that Coconut and beetel nut farmers are facing due to drought situation in Karnataka State.
Please Wait while comments are loading...