• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ: ದೇವರಲ್ಲಿ ದೇವೇಗೌಡ ಪ್ರಾರ್ಥನೆ

|
   ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಚ್ ಡಿ ದೇವೇಗೌಡ | Oneindia Kannada

   ಬೆಂಗಳೂರು, ಆಗಸ್ಟ್ 12: ಸಿದ್ದರಾಮಯ್ಯ ಅವರಿಗೆ ದೇವರು ಆಯುರಾರೋಗ್ಯ, ಸುಖ, ನೆಮ್ಮದಿ ಕರುಣಿಸಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ದೇವೇಗೌಡ ಅವರು ಟ್ವೀಟ್ ಮಾಡಿದ್ದಾರೆ.

   ಇಂದು (ಆಗಸ್ಟ್ 12) ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಾಗಾಗಿ ದೇವೇಗೌಡ ಅವರು ಸಿದ್ದರಾಮಯ್ಯ ಅವರಿಗೆ ಟ್ವಿಟ್ಟರ್ ಮೂಲಕ ಶುಭ ಕೋರಿದ್ದು, ದೇವರು ಸಿದ್ದರಾಮಯ್ಯ ಅವರಿಗೆ ಸಕಲ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

   ಬಿಎಸ್‌ವೈ 3 ತಿಂಗಳು ಅಧಿಕಾರದಲ್ಲಿದ್ರೂ ಓಕೆ, ನಮಗೆ ಬೇಡವಾದ ವಿಷಯ: ದೇವೇಗೌಡ

   ಇಂದು ಸಿದ್ದರಾಮಯ್ಯ ಅವರ 71 ನೇ ಹುಟ್ಟುಹಬ್ಬ. ಆಗಸ್ಟ್ 12, 1948 ರಂದು ಸಿದ್ದರಾಮಯ್ಯ ಜನ್ಮದಿನ. ಪ್ರಸ್ತುತ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯ ಅವರು ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದಿದ್ದಾರೆ.

   ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಕಾರಣ ಸಿದ್ದರಾಮಯ್ಯ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕ ಶುಭ ಕೋರಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

   ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಸಿದ್ದರಾಮಯ್ಯ

   ರಾಜ್ಯ ಕಾಂಗ್ರೆಸ್ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಟ್ವೀಟ್ ಮಾಡಿದ್ದು, ಅನ್ನಭಾಗ್ಯ, ಕ್ಷೀರಭಾಗ್ಯ, ಆರೋಗ್ಯ ಭಾಗ್ಯ, ಕೃಷಿಭಾಗ್ಯ, ಋಣಮುಕ್ತ, ಮೈತ್ರಿ, ವಿದ್ಯಾಸಿರಿ, ಮನಸ್ವಿನಿ, ರೈತ ಸೂರ್ಯ ಯೋಜನೆ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ನೀಡಿ, ಪ್ರಗತಿಪಥದಲ್ಲಿ ರಾಜ್ಯವನ್ನು ನಂಬರ್ ಒನ್ ಸ್ಥಾನಕ್ಕೆ ಕೊಂಡೊಯ್ದ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಶುಭಾಶಯ ತಿಳಿಸಿದೆ.

   English summary
   Deve Gowda wished Siddaramaiah through twitter on his 71 birthday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X