Development: ಕರ್ನಾಟಕದ ಈ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಗುಡ್‌ನ್ಯೂಸ್: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು

ರಾಯಚೂರು ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ನೈರ್ಮಲ್ಯ ಮತ್ತು ಕುಡಿಯುವ ನೀರಿನ ಪೂರೈಕೆ ಯೋಜನೆಗಳನ್ನು ಚುರುಕುಗೊಳಿಸುವಂತೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ರಾಯಚೂರು ಮಹಾನಗರ ಪಾಲಿಕೆ ಹಾಗೂ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ (RDA) ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ನಗರದ ಸಾರ್ವಜನಿಕ ಸೌಲಭ್ಯಗಳನ್ನು ಬಲಪಡಿಸಲು ಶೇ 100ರಷ್ಟು ಕಸ ವಿಂಗಡಣೆ, 24/7 ನಿರಂತರ ಕುಡಿಯುವ ನೀರು ಪೂರೈಕೆ, ಗೃಹ ಬಳಕೆಯ ಒಳಚರಂಡಿ ಜೋಡಣೆ (UGD) ಹೆಚ್ಚಳ ಹಾಗೂ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ₹185 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸೂಕ್ತ ರೂಪುರೇಷೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

Development Big Good News Karnataka District s Overall Growth What Did Yathindra Siddaramaiah Announce

ಇ-ವೇಸ್ಟ್ (E-Waste) ಬಳಸಿ ಸಿದ್ಧಪಡಿಸಲಾಗಿದ್ದ ಸುಂದರ ಅಲಂಕಾರಿಕ ವಸ್ತುಗಳ ಪ್ರದರ್ಶನವನ್ನು ವೀಕ್ಷಿಸಿದ ಸಚಿವರು, ತ್ಯಾಜ್ಯವನ್ನು ಅತ್ಯಂತ ಸೃಜನಶೀಲವಾಗಿ ಮರುಬಳಕೆ ಮಾಡಿದ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು. ಸಾರ್ವಜನಿಕರ ಆಸ್ತಿ ಸುರಕ್ಷತೆ ಹಾಗೂ ಪಾರದರ್ಶಕ ಆಡಳಿತಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಈ-ಖಾತಾ ವಿತರಿಸಿದ ಸಚಿವರು ಡಿಜಿಟಲೀಕರಣದ ಮೂಲಕ ಯಾವುದೇ ಅಡೆತಡೆಯಿಲ್ಲದೆ ಸಾರ್ವಜನಿಕರಿಗೆ ತ್ವರಿತವಾಗಿ ಆಸ್ತಿ ದಾಖಲೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ, ನಗರ ನೈರ್ಮಲ್ಯಕ್ಕೆ ಶ್ರಮಿಸುವ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಿಸಿದರು.

ನಗರದಲ್ಲಿ ಶೇ 100 ರಷ್ಟು ಕಸ ವಿಂಗಡಣೆಯನ್ನು (Segregation) ಕಡ್ಡಾಯಗೊಳಿಸಲು ತಿಳಿಸಿದ ಅವರು, ತಕ್ಷಣವೇ ಕಸ ವಿಂಗಡಣೆ ಯಂತ್ರಗಳು ಮತ್ತು ಹೊಸ ತ್ಯಾಜ್ಯ ಸಂಗ್ರಹಣೆ ವಾಹನಗಳನ್ನು ಖರೀದಿಸಲು ನಿರ್ದೇಶಿಸಿದರು. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 301 ಪೌರಕಾರ್ಮಿಕರ ಜೊತೆಗೆ, ಬಾಕಿ ಇರುವ 138 ಹುದ್ದೆಗಳನ್ನು (ಒಟ್ಟು 439) ಶೀಘ್ರ ಭರ್ತಿ ಮಾಡಲು ಸೂಚಿಸಿದರು. ದಿನದ 24 ಗಂಟೆಯೂ ನಿರಂತರ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಲು ಹಾಗೂ ಬಾಕಿ ನೀರಿನ ಬಿಲ್ ವಸೂಲಿ ಚುರುಕುಗೊಳಿಸಲು ಸೂಚಿಸಿದರು. ಗೃಹ ಬಳಕೆಯ ಒಳಚರಂಡಿ ಜೋಡಣೆ (Household UGD) ವೇಗಗೊಳಿಸಿ, STP ಸಾಮರ್ಥ್ಯವನ್ನು ಹಾಲಿ 33.5 MLD ಯಿಂದ 50 MLD ಗೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು.

'ಅಮೃತ್ 2.0' ಯೋಜನೆಯಡಿ ₹4.05 ಕೋಟಿ ವೆಚ್ಚದ ಹೊಸ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ರಸ್ತೆ, ಒಳಚರಂಡಿ, ಪಾದಚಾರಿ ಮಾರ್ಗ ಹಾಗೂ ನೀರಿನ ಘಟಕ ನಿರ್ಮಾಣಕ್ಕಾಗಿ 'ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ'ಯಡಿ ₹185 ಕೋಟಿ ಅನುದಾನದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಈ ಯೋಜನೆಗೆ ಸೂಕ್ತ ರೂಪುರೇಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.

RDA ನಿವೇಶನಗಳ ಬಾಕಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವುದು, ಆಶ್ರಯ ಕಾಲೋನಿಗಳ ಅಭಿವೃದ್ಧಿ, 'ಕಂದಾಯ ಅದಾಲತ್' ಮೂಲಕ ಈ-ಖಾತೆ ವಿತರಿಸುವುದು ಹಾಗೂ ಸರ್ಕಾರಿ ಜಾಗದಲ್ಲಿನ ಅಕ್ರಮ ನಿರ್ಮಾಣಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲು ಸ್ಪಷ್ಟ ಸೂಚನೆ ನೀಡಿದರು. ಸೂಕ್ತ ವ್ಯಾಪಾರ ಪರವಾನಗಿ (Trade License) ವಿತರಣೆ, ಸುಸಜ್ಜಿತ ಸಾರ್ವಜನಿಕ ಶೌಚಾಲಯ ನಿರ್ವಹಣೆ ಮತ್ತು ವಾಹನ ದಟ್ಟಣೆ ನಿಯಂತ್ರಿಸಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ನಿರ್ದೇಶಿಸಿದರು. ನಗರದ ಕುಂದುಕೊರತೆ ಆಲಿಸಲು ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ವರ್ಷಕ್ಕೆ ಕನಿಷ್ಠ 9 ಬಾರಿಯಾದರೂ ಪರಿಶೀಲನಾ ಸಭೆ ನಡೆಸಬೇಕು ಎಂದು ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಪರಿಶೀಲನಾ ಸಭೆಯಲ್ಲಿ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜು ಹಾಗೂ ಎ. ವಸಂತ ಕುಮಾರ್, ಆರ್‌ಡಿಎ ಅಧ್ಯಕ್ಷರಾದ ರಾಜಶೇಖರ್ ರಾಮಸ್ವಾಮಿ, ಜಿಲ್ಲಾಧಿಕಾರಿ ಪೂವಿತಾ ಎಸ್, ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೋಹಪಾತ್ರ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+