ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿದ್ದರಾಮಯ್ಯನವರ ಕೊಡುಗೆಗಳು

Posted By:
Subscribe to Oneindia Kannada

ಚಿಕ್ಕಬಳ್ಳಾಪುರ, ಡಿಸೆಂಬರ್ 29: ಮುಖ್ಯಮಂತ್ರಿಗಳ ನವಕರ್ನಾಟಕ ನಿರ್ಮಾಣ ಯಾತ್ರೆ ಇಂದು ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪರಿಭ್ರಮಣ ಮಾಡಲಿದೆ.

ತುಮಕೂರಿನ ಶಿರಾದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಜೊತೆಗೆ ಕೋಟ್ಯಾಂತರ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.

ಮಹದಾಯಿ ವಿಚಾರದಲ್ಲಿ ಸಿದ್ದರಾಮಯ್ಯರನ್ನು ಬೆಂಬಲಿಸಬೇಕು ಏಕೆ?

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಎರಡು ಬಣ ಉಂಟಾಗಿದ್ದು ಮುಖ್ಯಮಂತ್ರಿಗಳ ಭೇಟಿ ಸಮಯ ಇದು ಭುಗಿಲೇಳುವ ಸಂಭವ ಇದೆ ಎನ್ನಲಾಗಿದೆ ಹಾಗೂ ಶಾಶ್ವತ ನೀರಾವರಿ ಯೋಜನೆ ಹೋರಾಟಗಾರರು ಎತ್ತಿನ ಹೊಳೆ ಸಂಬಂಧಿತ ಪ್ರತಿಭಟನೆಯ ಕಾವನ್ನು ಮುಖ್ಯಮಂತ್ರಿಗಳಿಗೆ ನೀಡಲಿದ್ದಾರೆ.

ಚಿತ್ರದುರ್ಗ ಜಿಲ್ಲೆಗೆ ಕಾಂಗ್ರೆಸ್ ಸರಕಾರ ನೀಡಿದ್ದೇನು?

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸಮಾವೇಶ ಉದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಲಿದ್ದು, ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ನೀಡಿರುವ ಕೊಡುಗೆಗಳ ಬಗ್ಗೆ ಗಮನ ಸೆಳೆಯಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರ ನೀಡಿರುವ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಲ್ಲಿದೆ...

ಶೇ.99 ರಷ್ಟು ಪಿಂಚಣಿ ಫಲಾನುಭವಿಗಳು

ಶೇ.99 ರಷ್ಟು ಪಿಂಚಣಿ ಫಲಾನುಭವಿಗಳು

ಜಿಲ್ಲೆಯಲ್ಲಿ 6 ತಾಲ್ಲೂಕುಗಳಿದ್ದು, ಈ ಪೈಕಿ ಗುಡಿಬಂಡೆ ತಾಲ್ಲೂಕನ್ನು ಪೋಡಿಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದ್ದು, ಉಳಿಕೆ 5 ತಾಲ್ಲೂಕುಗಳಲ್ಲಿ 9 ಗ್ರಾಮಗಳು ದುರಸ್ತಿಗೆ ಕಾರ್ಯದಲ್ಲಿದೆ. ಶೇ.99 ರಷ್ಟು ಪಿಂಚಣಿ ಫಲಾನುಭವಿಗಳ ಆಧಾರ್ ಸಂಖ್ಯೆಗಳನ್ನು ಪಡೆದು ಜೋಡಿಸಲಾಗಿದೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೀಘ್ರದಲ್ಲಿಯೇ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗುತ್ತಿದೆ.

ದಾವಣಗೆರೆ ಜಿಲ್ಲೆ ಅಭಿವೃದ್ಧಿಗೆ ಸರ್ಕಾರದ ಕೊಡುಗೆಗಳು

7,252 ಬಸವ ವಸತಿ ಮನೆಗಳ ನಿರ್ಮಾಣ

7,252 ಬಸವ ವಸತಿ ಮನೆಗಳ ನಿರ್ಮಾಣ

ಶೇ.99 ರಷ್ಟು ಫಲಾನುಭವಿಗಳಿಗೆ ಪರಿಹಾರ ತಂತ್ರಾಂಶದ ಮೂಲಕ ಫಲಾನುಭವಿಗಳಿಗೆ ನೇರವಾಗಿ ಬೆಳೆ ಪರಿಹಾರವನ್ನು ಸಂದಾಯ ಮಾಡಲಾಗಿದೆ. ಗೌರಿಬಿದನೂರು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಭೂಮಿಯನ್ನು ಕಾಯ್ದಿರಿಸಲಾಗಿದ್ದು, ಸ್ಮಶಾನಯುಕ್ತ ತಾಲ್ಲೂಕು ಆಗಿರುತ್ತದೆ. ಸರ್ಕಾರದ ವತಿಯಿಂದ ಜಿಲ್ಲೆಯಲ್ಲಿ 7,252 ಬಸವ ವಸತಿ ಮನೆಗಳನ್ನು ನಿರ್ಮಿಸಲಾಗಿದೆ.

ಬೀಜ ಉತ್ಪಾದನಾ ಕೇಂದ್ರ

ಬೀಜ ಉತ್ಪಾದನಾ ಕೇಂದ್ರ

ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ, ಗುಡಿಬಂಡೆ, ಶಿಡ್ಲಘಟ್ಟ, ಗೌರಿಬಿದನೂರು ತಾಲ್ಲೂಕನ್ನು ಬಯಲು ಮುಕ್ತ ತಾಲ್ಲೂಕುಗಳನ್ನಾಗಿ ಘೋಷಿಸಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಆಲೂಗಡ್ಡೆ ಬೀಜ ಉತ್ಪಾದನಾ ಕೇಂದ್ರ ಸ್ಥಾಪಿಸಲಾಗಿದ್ದು ಇದರಿಂದ ಬಹಳಷ್ಟು ರೈತರಿಗೆ ಅನುಕೂಲವಾಗಿದೆ. ಗೌರಿಬಿದನೂರು ತಾಲ್ಲೂಕಿನ ವೈಜುಕೂರಹಳ್ಳಿ ಗ್ರಾಮವನ್ನು ಹೊಗೆಮುಕ್ತ ಗ್ರಾಮವೆಂದು ಘೋಷಣೆ ಮಾಡಲಾಗಿದೆ.

ನರೇಗಾಗೆ ರಾಷ್ಟ್ರ ಪ್ರಶಸ್ತಿ

ನರೇಗಾಗೆ ರಾಷ್ಟ್ರ ಪ್ರಶಸ್ತಿ

ಜಿಲ್ಲೆಯಲ್ಲಿ 3 ರೈತ ಮಾರಾಟ ಉತ್ಪಾದಕರ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಚಿಂತಾಮಣಿ ತಾಲ್ಲೂಕು ಹಿರೇಕಟ್ಟಿಗೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನದಿಂದಾಗಿ 2015-16ನೇ ಸಾಲಿನಲ್ಲಿ ರಾಷ್ಟ್ರ ಪ್ರಶಸ್ತಿ ದೊರಕಿದೆ.

63 ಗ್ರಾಮಗಳಿಗೆ ಅಂತಿಮ ಅಧಿಸೂಚನೆ

63 ಗ್ರಾಮಗಳಿಗೆ ಅಂತಿಮ ಅಧಿಸೂಚನೆ

ಜಿಲ್ಲೆಯಲ್ಲಿ ಒಟ್ಟು 204 ಹೊಸ ಕಂದಾಯ ಗ್ರಾಮಗಳನ್ನು ಸೃಜಿಸಲು ತೀರ್ಮಾನಿಸಿದ್ದು, ಒಟ್ಟು 100 ಗ್ರಾಮಗಳನ್ನು ಅಂತಿಮ ಅಧಿಸೂಚನೆಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಈ ಪೈಕಿ ಈಗಾಗಲೇ 63 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿರುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Congresss ambitious Nava Karnataka Nirmana State tour stops at Tumakur and Chikkaballapur district today. Chief Minister Siddaramaiah inaugurating various development projects in both the districts.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ