ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ದೇವೇಂದ್ರ ಫಡ್ನವೀಸ್ ಗೆ ಕಾಲ ಎಂತಹ ಉತ್ತರ ಕೊಟ್ಟಿತು, ಮಾಡಿದ್ದುಣ್ಣೋ ಮಹಾರಾಯ'

|
Google Oneindia Kannada News

ಬೆಂಗಳೂರು, ನ 26: ಸಂಖ್ಯಾಬಲವಿಲ್ಲದಿದ್ದರೂ ಅಧಿಕಾರ ರಚಿಸಲು ಹೋಗಿ ನಗೆಪಾಟಾಲಿಗೆ ಗುರಿಯಾಗಿರುವ ಬಿಜೆಪಿ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಬಗ್ಗೆ, "ಮಾಡಿದುಣ್ಣೋ ಮಹಾರಾಯ" ಎಂದು ಎಚ್.ಡಿ.ಕುಮಾರಸ್ವಾ,ಮಿ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿಯವರು ಮಾಡಿರುವ ಟ್ವೀಟ್ ಹೀಗಿದೆ, "ದೇವೇಂದ್ರ ಫಡ್ನವೀಸ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ತಿಳಿದು ಬೇಸರವಾಯಿತು. ಹಾಗೆ ನೋಡಿದರೆ ಅವರ ಪದತ್ಯಾಗ ನನಗೆ ಖುಷಿ ಕೊಡಬೇಕಿತ್ತು".

ಭೋಗ ನಂದೀಶ್ವರ ದೇವಾಲಯದಲ್ಲಿ ಕುಮಾರಸ್ವಾಮಿ ಮುಂದೆ ನಡೆದ ವಿಸ್ಮಯಭೋಗ ನಂದೀಶ್ವರ ದೇವಾಲಯದಲ್ಲಿ ಕುಮಾರಸ್ವಾಮಿ ಮುಂದೆ ನಡೆದ ವಿಸ್ಮಯ

"ಯಾಕೆಂದರೆ ನನ್ನ ಸರ್ಕಾರ ಕೆಡವಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದು ಅವರೇ ಅಲ್ಲವೇ? ಅನರ್ಹರಿಗೆ ಆತಿಥ್ಯ ಕೊಟ್ಟವರೂ ಅವರೇ. ಈಗ ಅವರಿಗೆ ಕಾಲ ಎಂಥ ಉತ್ತರ ಕೊಟ್ಟಿತು ಎಂದು ಬೇಸರವಾಗುತ್ತಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Devendra Fadnavis Resignation As Maharasthra CM: Former CM HD Kumaraswamy Tweet

"ಮಾಡಿದ್ದುಣ್ಣೊ ಮಹರಾಯ ಎಂಬುದು ಲೋಕ ರೂಢಿ. ಮಾಡಿದ್ದರ ಪ್ರತಿಫಲವನ್ನು ಫಡ್ನವೀಸ್ ಉಣ್ಣುತ್ತಿದ್ದಾರೆ. (BSY ಕೂಡ ಉಣ್ಣುತ್ತಾರೆ) ಕಾಲಚಕ್ರಕ್ಕೆ ಸಿಲುಕಿ ನಲುಗಿದ್ದಾರೆ".

"ಅಧಿಕಾರ ದಾಹಿ ಬಿಜೆಪಿ ತನ್ನ ಕೃತ್ಯಗಳಿಗೆ ತಾನೇ ಬೆಲೆ ತೆರುತ್ತಿದೆ. ಅಧಿಕಾರದ ಹಪಹಪಿ, ಸರ್ಕಾರಗಳನ್ನು ಕೆಡವುದು, ಚುನಾವಣೆ ತರುವುದನ್ನು ಬಿಜೆಪಿ ಇನ್ನಾದರೂ ಬಿಡಲಿ" ಎಂದು ಎಚ್.ಡಿ.ಕುಮಾರಸ್ವಾಮಿ, ಇನ್ನೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಸಂಕ್ರಾಂತಿ ನಂತರ ಮತ್ತೆ ಕುಮಾರಸ್ವಾಮಿ ಸಿಎಂ.?ಸಂಕ್ರಾಂತಿ ನಂತರ ಮತ್ತೆ ಕುಮಾರಸ್ವಾಮಿ ಸಿಎಂ.?

ಸಂವಿಧಾನದ ದಿನಕ್ಕೆ ಸಂಬಂಧಿಸಿದಂತೆ ಎಚ್ಡಿಕೆ ಮಾಡಿರುವ ಇನ್ನೊಂದು ಟ್ವೀಟ್, "ಬ್ರಿಟಿಷರ ದಾಸ್ಯದಿಂದ ಹೋರಾಡಿ ಹೊರಬಂದ ದೇಶಕ್ಕೆ ಸಂವಿಧಾನದ ಮೂಲಕ ಭವಿಷ್ಯದ ದಾರಿ ತೋರಿದ್ದು ಅಂಬೇಡ್ಕರ್. ಇಂದು ದೇಶವೇನಾದರೂ ಪ್ರಗತಿಯೊಂದಿಗೆ ಹೆಜ್ಜೆ ಹಾಕುತ್ತಿದ್ದರೆ, ನಾಗರಿಕರು ಹಕ್ಕಿನಿಂದ ಬದುಕುತ್ತಿದ್ದರೆ ಅದಕ್ಕೆ ಕಾರಣ ಸಂವಿಧಾನ ಮತ್ತು ಅದರ ಕರ್ತೃ ಅಂಬೇಡ್ಕರ್" ಹೀಗಿತ್ತು.

English summary
Devendra Fadnavis Resignation As Maharasthra CM: Former CM HD Kumaraswamy Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X