ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧರ್ಮವೀರ ಸಂಭಾಜಿ ಮಹಾರಾಜ್‌ಗೆ ಅವಮಾನ: ಮತ್ತೊಂದು ವಿವಾದದಲ್ಲಿ ಸತೀಶ್ ಜಾರಕಿಹೊಳಿ

|
Google Oneindia Kannada News

ಬೆಂಗಳೂರು,ನವೆಂಬರ್ 11: ಪರ್ಷಿಯನ್ ಭಾಷೆಯಲ್ಲಿ ಹಿಂದೂ ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ ಎಂಬ ವಿವಾದಾತ್ಮಕ ಹೇಳಿಕೆ ಮೂಲಕ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇದೀಗ ಮತ್ತೊಂದು ಹೇಳಿಕೆಯಿಂದ ವಿವಾದದಲ್ಲಿ ಸಿಲುಕಿದ್ದಾರೆ.

ಬೆಳವಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನವೆಂಬರ್ 6 ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಮತ್ತೊಂದು ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಈ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ.

ಧರ್ಮವೀರ ಸಂಭಾಜಿ ಮಹಾರಾಜರಿಗೆ ಧರ್ಮವೀರ ಹೆಸರು ಬಂದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಸತೀಶ ಜಾರಕಿಹೊಳಿ ವಿಡಿಯೋವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ, ಈ ರೀತಿಯ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿದ್ದೇನು..?

ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿದ್ದಾರೆ. ಸಂಭಾಜಿ ಮಹಾರಾಜರನ್ನು ಬ್ರಿಟಿಷರು ಯಾಕೆ ಹತ್ಯೆ ಮಾಡಿದರು? ಯಾವಾಗ ಶಿವಾಜಿ ಮಹಾರಾಜರ ಊಟದಲ್ಲಿ ವಿಷ ಹಾಕಲಾಗಿತ್ತು ಅವರನ್ನು ಸಂಭಾಜಿ ಮಹಾರಾಜರು ಹಿಡಿದಿದ್ದರು. ಈ ಸಿಟ್ಟಿನಲ್ಲಿ ಅವರನ್ನು ಬ್ರಿಟಿಷರ ವಶಕ್ಕೆ ನೀಡಲಾಯಿತು.

ಬಳಿಕ ಅವರಿಗೆ ಧರ್ಮವೀರ ಸಂಭಾಜಿ ಮಹಾರಾಜ ಹೆಸರಿಟ್ಟರು ಎಂಬುದು ಅದೊಂದು ಇತಿಹಾಸ. ಈ ದೇಶದ ಇತಿಹಾಸ ಬಹಳ ವಿಚಿತ್ರವಾಗಿದೆ. ಇಂತಹ ಇತಿಹಾಸ ತಿಳಿಯಲು ಬಹಳ ಸಮಯ ಬೇಕು. ಈ ಬಗ್ಗೆ ಬಹಳ ಅಧ್ಯಯನ ಮಾಡಬೇಕಿದೆ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

Devendra Fadnavis Tweeets Satish Jarkiholis remark on Sambhaji Maharaj

ಸತೀಶ್ ಹೇಳಿಕೆ ವಿಡಿಯೋ ವೈರಲ್

ಸದ್ಯ ಸತೀಶ್ ಜಾರಕಿಹೊಳಿ ನೀಡಿದ ವಿವಾದಾತ್ಮಕ ಹೇಳಿಕೆಯ 42 ಸೆಕೆಂಡ್​ಗಳುಳ್ಳ ಈ ವಿಡಿಯೋ ವೈರಲ್ ಆಗುತ್ತಿದೆ. ಭಾಷಣದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಹಂಚಿಕೊಂಡಿದ್ದಾರೆ.

ನಿಮ್ಮ ಕಾಂಗ್ರೆಸ್ ಎಂ ಎಲ್ ಎ ಒಬ್ಬರು ಈ ಈ ರೀತಿ ಮಹಾನ್‌ ನಾಯಕ ಸಂಭಾಜಿ ಮಹಾರಾಜರ ಬಗ್ಗೆ ಹೇಳುವುದನ್ನು ನೀವು ಒಪ್ಪುತ್ತೀರಾ? ಸಂಭಾಜಿ ಮಹಾರಾಜರ ಬಗ್ಗೆ ತಪ್ಪು ಮಾಹಿತಿ ನೀಡುವ, ದಾರಿ ತಪ್ಪಿಸುವ, ಅವಮಾನ ಮಾಡುವ ಹೇಳಿಕೆ ಇದು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಇದು ನಿಮ್ಮ ಕಾಂಗ್ರೆಸ್‌ ಪಕ್ಷದ ಅಧಿಕೃತ ಹೇಳಿಕೆಯೇ ಮಿಸ್ಟರ್‌ ರಾಹುಲ್‌ ಎಂದು ಪ್ರಶ್ನಿಸಿದ್ದಾರೆ. ಆದರೆ ಈ ಹೇಳಿಕೆಯನ್ನು ಮಹಾರಾಷ್ಟ್ರವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಹಿಂದೂ ಪದದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ವಿವಾದದ ಕಿಡಿ ಹೊತ್ತಿಸಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಪದಕ್ಕೆ ಅಸಭ್ಯವಾದ ಅರ್ಥವಿದೆ ಎಂದಿದ್ದರು.

ಈ ಪದದ ಮೂಲವು ಭಾರತಕ್ಕೆ ಸೇರಿದ್ದಲ್ಲ. ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದರು. ಸತೀಶ್ ಜಾರಕಿಹೊಳಿ ಹೇಳಿಕೆ ಸಾಕಷ್ಟು ವಿವಾದವನ್ನ ಹುಟ್ಟು ಹಾಕುವಂತೆ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತನಿಖಾ ಸಮಿತಿ ರಚಿಸಲು ಸತೀಶ್ ಜಾರಕಿಹೊಳಿ ಪತ್ರವನ್ನು ಬರೆದಿದ್ದಾರೆ.

English summary
Shame on Sambhaji Maharaj: Satish Jarkiholi in Another Controversy, Devendra Fadnavis shared the video of Jarakiholi speech,In another controversy, Congress MLA Satish Jarakiholi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X