ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ರಾಜ್ಯಪಾಲರಾಗಿ ಡಿ.ಎಚ್.ಶಂಕರಮೂರ್ತಿ ಆಯ್ಕೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 11 : ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ತಮಿಳುನಾಡು ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಮುಗಿದ ಬಳಿಕ ಈ ಕುರಿತು ಆದೇಶ ಹೊರಬೀಳುವ ನಿರೀಕ್ಷೆ ಇದೆ.

ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿರುವ ಡಿ.ಎಚ್.ಶಂಕರಮೂರ್ತಿ (76) ಅವರ ಸದಸ್ಯತ್ವದ ಅವಧಿ 2018ಕ್ಕೆ ಅಂತ್ಯಗೊಳ್ಳಲಿದೆ. ಅಷ್ಟರೊಳಗೆ ಅವರನ್ನು ರಾಜ್ಯಪಾಲರಾಗಿ ನೇಮಕ ಮಾಡುವ ಸಾಧ್ಯತೆ ಇದೆ.[ರಾಜ್ಯಪಾಲರು ಹಿಂದಿಯಲ್ಲೇಕೆ ಭಾಷಣ ಮಾಡಬೇಕು?]

DH Shankaramurthy likely to become governor of Tamil Nadu

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಈ ಕುರಿತು ಶಂಕರಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಸದ್ಯ, ತಮಿಳುನಾಡು ರಾಜ್ಯಪಾಲರಾಗಿರುವ ರೋಸಯ್ಯ ಅವರ ಅವಧಿ ಆಗಸ್ಟ್ 31ಕ್ಕೆ ಅಂತ್ಯಗೊಳ್ಳಲಿದೆ.[ಕರ್ನಾಟಕ ಮಾಜಿ ರಾಜ್ಯಪಾಲ ಠಾಕೂರ್ ವಿಧಿವಶ]

ರೋಸಯ್ಯ ಅವರಿಂದ ತೆರವಾಗುವ ಸ್ಥಾನಕ್ಕೆ ಶಂಕರಮೂರ್ತಿ ಅವರನ್ನು ನೇಮಿಸಲು ಕೇಂದ್ರ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಸದ್ಯ ನಡೆಯುತ್ತಿರುವ ಸಂಸತ್ ಅಧಿವೇಶನ ಅಂತ್ಯಗೊಂಡ ಬಳಿಕ ಈ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ.[ಕರ್ನಾಟಕದ ಪ್ರಥಮ ಪ್ರಜೆಗಳ ಪಟ್ಟಿ 1956-2014]

1988ರಿಂದ ಶಂಕರಮೂರ್ತಿ ಅವರು ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆ ಯಾಗುತ್ತಿದ್ದಾರೆ. ಪರಿಷತ್ ಸಭಾಪತಿಯಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವರಾಗಿ, ಪರಿಷತ್ ವಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ.

English summary
Karnataka Legislative Council Chairman D.H.Shankaramurthy is likely to become governor of Tamil Nadu. Tamil Nadu governor Rosaiah term comes to an end on August 31, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X