ಸೈಕಲ್ ಏರಲು ಧನಂಜಯ್ ಕುಮಾರ್ ತಯಾರಿ?
ಬೆಂಗಳೂರು, ನ.4 : ಮಾಜಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಧನಂಜಯ್ ಕುಮಾರ್ ಸಮಾಜವಾದಿ ಪಕ್ಷ ಸೇರಲಿದ್ದಾರೆಯೇ?. ಪಕ್ಷ ಸೇರುವಂತೆ ಧನಂಜಯ್ ಕುಮಾರ್ ಅವರಿಗೆ ಈಗಾಗಲೇ ಸಮಾಜವಾದಿ ಪಕ್ಷದ ನಾಯಕರು ಆಹ್ವಾನ ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಅವರು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದ ಧನಂಜಯ್ ಕುಮಾರ್, ನಂತರ ಬಿಜೆಪಿಗೆ ಮರಳಲಿಲ್ಲ. ಲೋಕಸಭೆ ಚುನಾವಣೆ ವೇಳೆ ಜೆಡಿಎಸ್ ಸೇರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ 14,895 ಮತಗಳನ್ನುಗಳಿಸಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. [ಲೋಕಸಭೆ ಚುನಾವಣೆ ಫಲಿತಾಂಶ]

ಆದರೆ, ಇತ್ತೀಚಿನ ಬೆಳವಣಿಗೆಯಂತೆ ದೆಹಲಿಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿ ಬಂದಿರುವ ಧನಂಜಯ್ ಕುಮಾರ್ ಸೈಕಲ್ ಪಕ್ಷ ಸೇರಲು ಮುಂದಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಧನಂಜಯ್ ಕುಮಾರ್ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗಬಹುದು. [ಜೆಡಿಎಸ್ ಬಿಟ್ಟು ಹೋಗುವವರು ಸಂತೋಷದಿಂದ ಹೋಗಿ]
ಸೈಕಲ್ ಪಂಚರ್ : ಕರ್ನಾಟಕದಲ್ಲಿ ಸಮಾಜವಾದಿ ಪಕ್ಷ ನೆಲೆ ಕಂಡುಕೊಳ್ಳಲು ಪರದಾಡುತ್ತಿದೆ. ರಾಜ್ಯದ ಏಕೈಕ ಎಸ್ಪಿ ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಇನ್ನು ಉಳಿದವರು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಮಾತ್ರ.
ಕರ್ನಾಟಕದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ಮತ್ತು ವಿ.ಧನಂಜಯ್ ಕುಮಾರ್ ಹೆಸರು ಕೇಳಿಬರುತ್ತಿದೆ. ಕಳೆದ ತಿಂಗಳು ಲಕ್ನೋದಲ್ಲಿ ನಡೆದ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿಯೂ ಗೂಳಿಹಟ್ಟಿ ಅವರು ಪಾಲ್ಗೊಂಡಿದ್ದರು.
ಇವುಗಳ ಮಧ್ಯೆಯೇ ಧನಂಜಯ್ ಕುಮಾರ್ ದೆಹಲಿಯಲ್ಲಿ ಮುಲಾಯಂ ಸಿಂಗ್ ಯಾದವ್ ಭೇಟಿ ಮಾಡಿದ್ದು, ಹೊಸ ಲೆಕ್ಕಾಚಾರ ಹುಟ್ಟುಹಾಕಿದೆ. ನ.28ರಂದು ಧನಂಜಯ್ ಕುಮಾರ್ ಪುತ್ರನ ವಿವಾಹವಿದ್ದು, ಅದರಲ್ಲಿ ಅವರು ಬ್ಯುಸಿಯಾಗಿದ್ದಾರೆ. ಅದು ಮುಗಿದ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಅಂದಹಾಗೆ ಅಬ್ದುಲ್ ಅಜೀಂ, ಸುನಿಲ್ ಹೆಗಡೆ ಈಗಾಗಲೇ ಜೆಡಿಎಸ್ ತೊರೆದಿದ್ದಾರೆ. ಧನಂಜಯ್ ಕುಮಾರ್ ಸೈಕಲ್ ಏರಿದರೆ ಅವರು ಪಕ್ಷ ತೊರೆಯುವುದು ಖಂಡಿತ. ಪಕ್ಷ ತೊರೆಯುವ ನಾಯಕರು ಸಂತೋಷದಿಂದ ಹೋಗಿ ಎಂದು ಎಚ್.ಡಿ.ದೇವೇಗೌಡರು ಈಗಾಗಲೇ ಖಡಕ್ ಸಂದೇಶ ರವಾನಿಸಿದ್ದಾರೆ. ಧನಂಜಯ್ ಕುಮಾರ್ ಪಕ್ಷ ತೊರೆಯುತ್ತಾರಾ?
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications