Dharmasthala Case: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್
ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅನಾಮಿಕನೊಬ್ಬ ದೂರು ನೀಡಿರುವುದು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಅನಾಮಿಕನ ದೂರಿನ ಬೆನ್ನಲ್ಲೇ ತನಿಖೆಗಾಗಿ ಎಸ್ಐಟಿ ಕೂಡ ರಚನೆಯಾಗಿತ್ತು. ಬರೋಬ್ಬರಿ 20 ದಿನಗಳ ಕಾಲ ಎಸ್ಐಟಿ ತಂಡ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದೆ. ಇದರ ಮಧ್ಯ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಮೊದಲ ಬಾರಿಗೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಪಿಟಿಐಗೆ ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರು ನೀಡಿರುವ ಸಂದರ್ಶನದಲ್ಲಿ ಮಾತನಾಡಿ, ಧರ್ಮಸ್ಥಳದ ಬಗ್ಗೆ ಗೊಂದಲ ಮೂಡಿಸುತ್ತಿದ್ದಾರೆ. ಎಸ್‌ಐಟಿ ತನಿಖೆಗೆ ನಮ್ಮ ಸಂಪೂರ್ಣ ಬೆಂಬಲ ಇದ್ದು, ಸತ್ಯ ಹೊರ ಬರಲಿದೆ ಎಂಬ ವಿಶ್ವಾಸ ಇದೆ. ಸೌಜನ್ಯ ಕೇಸ್‌ನಲ್ಲಿ ನಾನು ಸರ್ಕಾರಕ್ಕೆ ಮಾಹಿತಿ ನೀಡಿ, ತಕ್ಷಣವೇ ಅಪರಾಧಿಯನ್ನು ಪತ್ತೆಹಚ್ಚುವಂತೆ ಮಾಡಿದೆ. ಪೊಲೀಸರಿಗೆ ಮಾಹಿತಿ ನೀಡುವುದನ್ನು ಬಿಟ್ಟು ನಮಗೆ ಬೇರೆ ಯಾವುದೇ ವಿಚಾರ ನಮಗೆ ಸಂಬಂಧವಿಲ್ಲ.

ಘಟನೆ ನಡೆದಾಗ ನಮ್ಮ ಕುಟುಂಬದ ಸದಸ್ಯರು ದೇಶದಲ್ಲೇ ಇರಲಿಲ್ಲ. ಅವರು ಶಿಕ್ಷಣಕ್ಕಾಗಿ ವಿದೇಶದಲ್ಲಿದ್ದರು. ಆದರೂ, ಅವರೇ ಈ ಕೃತ್ಯ ಎಸಗಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಹೊರಿಸಲಾಯಿತು. ನಮ್ಮನ್ನು ಅನಾವಶ್ಯಕವಾಗಿ ಈ ಪ್ರಕರಣದಲ್ಲಿ ಎಳೆದು ತರಲಾಗಿದೆ ಎಂದು ವೀರೇಂದ್ರ ಹೆಗ್ಗಡೆ ಅವರು ಬೇಸರ ವ್ಯಕ್ತಪಡಿಸಿದರು. ನಾವು ಯಾವುದೇ ರೀತಿಯ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆ. ನಾವು ಏನನ್ನೂ ಮುಚ್ಚಿಟ್ಟಿಲ್ಲ. ಯಾವುದೇ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ. ಎಸ್‌ಐಟಿ ತನಿಖೆಯ ಅಂತಿಮ ವರದಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಹೇಳಿದರು.
ಭಕ್ತರನ್ನು ದಾರಿ ತಪ್ಪಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಈ ಆರೋಪಗಳನ್ನು ಮಾಡಲಾಗಿದೆ. ಇದರಿಂದ ತೀವ್ರ ನೋವುಂಟಾಗಿದೆ. ಈ ಕುರಿತು ತನಿಖೆಗೆ ಕರ್ನಾಟಕ ಸರಕಾರ ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸಿರುವುದನ್ನು ಸ್ವಾಗತ, ಎಸ್ಐಟಿ ರಚಿಸಿರುವುದು ಒಳ್ಳೆಯದಾಗಿದೆ. ಸತ್ಯ ಎಲ್ಲರಿಗೂ ತಿಳಿಯಲು ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿ. ನಾವು ನಮ್ಮ ಎಲ್ಲಾ ದಾಖಲೆಗಳನ್ನು ತೆರೆದಿಟ್ಟಿದ್ದೇವೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯುತ್ತಿಲ್ಲ. ಎಲ್ಲಾ ಶೈಕ್ಷಣಿಕ ಮತ್ತು ಸಾಮಾಜಿಕ ಸಂಸ್ಥೆಗಳು ಟ್ರಸ್ಟ್ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. ನಮ್ಮ ಕುಟುಂಬದ ಒಡೆತನದ ಆಸ್ತಿ ಬಹಳ ಕಡಿಮೆಯಿದೆ. ಹೆಚ್ಚಿನ ಆಸ್ತಿಯು ಟ್ರಸ್ಟ್‌ನದ್ದಾಗಿದೆ ಮತ್ತು ಅದಕ್ಕೆ ದಾಖಲೆಗಳಿವೆ. ಕಳೆದ 14 ವರ್ಷಗಳಿಂದ ಧರ್ಮಸ್ಥಳದ ವಿರುದ್ಧ ಸುಳ್ಳು ಪ್ರಚಾರ ನಡೆಯುತ್ತಿದ್ದರೂ ನಾವು ಅಚಲವಾಗಿ ನಮ್ಮ ಸಮಾಜ ಸೇವೆಯನ್ನು ಮುಂದುವರಿಸಿದ್ದೇವೆ ಎಂದು ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications