ಧರ್ಮಸ್ಥಳ ಪ್ರಕರಣ: ಮೂಳೆಗಳ ಎಫ್‌ಎಸ್‌ಎಲ್ & ಕೆಮಿಕಲ್ ರಿಪೋರ್ಟ್ಸ್ ವಿಶ್ಲೇಷಣೆ: ಬಿಗ್ ಅಪ್ಡೇಟ್ಸ್
ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಧರ್ಮಸ್ಥಳ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ. ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ. ಈ ಮೂಲಕ ಇಷ್ಟು ದಿನಗಳ ಗೊಂದಲ, ವಿವಾದ ಹಾಗೂ ಚರ್ಚೆಗಳಿಗೆ ತಾರ್ಕಿಕ ಅಂತ್ಯ ಕಾಣುವ ಮುನ್ಸೂಚನೆ ಸಿಕ್ಕಿದೆ.
ಅಕ್ಟೋಬರ್ ತಿಂಗಳಲ್ಲಿ ವರದಿ ಕೊಡುವುದಾಗಿ ಎಸ್‌ಐಟಿಯವರು ಹೇಳಿದ್ದರು. 31ರೊಳಗೆ ಕೊಡಬಹುದು ಅಥವಾ ಒಂದೆರಡು ದಿನ ವಿಳಂಬವಾಗಬಹುದು. ಅಂತಿಮ ವರದಿಯನ್ನು ಕೊಡುವಂತೆ ಹೇಳಿದ್ದೇವೆ. ಪತ್ತೆಯಾಗಿರುವ ಮೂಳೆಗಳ ಎಫ್‌ಎಸ್‌ಎಲ್ ವರದಿ, ಕೆಮಿಕಲ್ ರಿಪೋರ್ಟ್ಸ್ ವಿಶ್ಲೇಷಣೆ ಮಾಡಿ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ಹೈಕಮಾಂಡ್ ತೀರ್ಮಾನ ನಾವು ಹೇಳಲು ಬರುವುದಿಲ್ಲ. ಅವರು ಏನು ತೀರ್ಮಾನ ಮಾಡುತ್ತಾರೆ ಕಾದು ನೋಡೋಣ. ದಿನನಿತ್ಯ ಮಾಧ್ಯಮದಲ್ಲಿ ಹೇಳಿಕೆ ಕೊಡಬಹುದು ಅಷ್ಟೇ. ಇಲ್ಲಿವರೆಗೆ ಹೈಕಮಾಂಡ್‌ನವರು ಏನಾದರು ಹೇಳಿದ್ದಾರೆಯೇ? ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಮಾಡುತ್ತೇವೆ ಎಂಬುದರ ಬಗ್ಗೆ ಹೈಕಮಾಂಡ್‌ನಿಂದ ಯಾವುದೇ ಮಾಹಿತಿ ಇಲ್ಲ. ಏನಾದರು ಹೈಕಮಾಂಡ್‌ನಿಂದ ಸೂಚನೆ ಬಂದಿದ್ದರೆ ನಾವು ಪ್ರತಿಕ್ರಿಯಿಸಬಹುದು. ಹೈಕಮಾಂಡ್ ತಿಳಿಸುವವರೆಗೂ ಯಾವುದಕ್ಕು ಮಹತ್ವ ಇರುವುದಿಲ್ಲ ಎಂದಿದ್ದಾರೆ.
ಅಧಿಕಾರ ಹಂಚಿಕೆ, ಎರಡೂವರೆ ವರ್ಷ ಅಂತ ಚರ್ಚೆ ಆಯ್ತು. ಈಗ ಸಂಪುಟ ಪುನರ್ ರಚನೆ ಎನ್ನುತ್ತಿದ್ದಾರೆ. ಲೀಡರ್‌ಶಿಪ್ ಬದಲಾವಣೆ ಅಂತಾಯ್ತು. ದಿನನಿತ್ಯ ಈ ರೀತಿ ಗೊಂದಲಗಳಾಗುತ್ತಿದ್ದರೆ ಆಡಳಿತದ ಮೇಲೆ ಪರಿಣಾಮ ಬೀರುವುದಿಲ್ಲವೇ? ಆಡಳಿತ ಚೆನ್ನಾಗಿ ಆಗಬೇಕು ಅಂತಂದರೆ ಇದೆಲ್ಲ ನಿಲ್ಲಬೇಕು. ನೆರೆ ಹಾವಳಿ, ರಸ್ತೆ ಗುಂಡಿ ಬಿದ್ದಿದೆ ಈತರ ಮಾತುಗಳನ್ನು ನಿಲ್ಲಿಸಲು ಆಡಳಿತ ಚುರುಕುಗೊಳಿಸಬೇಕು. ಈ ಒಂದು ಗೊಂದಲದಲ್ಲಿ ನಾವು ಇರುವುದು ಸರಿಯಲ್ಲ ಎಂದೂ ಅವರು ಹೇಳಿದ್ದಾರೆ.
ನವೆಂಬರ್ 1ರಂದು ಮುಖ್ಯಮಂತ್ರಿಗಳು ಸಂತೋಷಕೂಟ ಏರ್ಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ. ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಊಟ ಹಾಕಿಸಿದರೆ, ರಾಜಕೀಯ ದೊಡ್ಡ ಬೆಳವಣಿಗೆ ಎನ್ನಬೇಕಿಲ್ಲ. ಇದಕ್ಕೆ ರಾಜಕೀಯವಾಗಿ ವಿಶ್ಲೆಷಣೆ ಮಾಡುವುದು ಸರಿಯಲ್ಲ. ಸಂಪುಟ ಪುನರ್ ರಚನೆ ಮಾಡುವ ಕುರಿತು ಹೈಕಮಾಂಡ್‌ನವರು ಈವರೆಗೆ ಯಾರು ಹೇಳಿಲ್ಲ. ಈ ಬಗ್ಗೆ ಮುನ್ಸೂಚನೆಯೂ ಇಲ್ಲ ಎಂದಿದ್ದಾರೆ.
ಸಚಿವ ಮುನಿಯಪ್ಪ ಅವರು ಸಿಎಂ ಆಗಲಿ ಎಂದು ಶಿವಮೊಗ್ಗದಲ್ಲಿ ಘೋಷಣೆ ಕೂಗಿರುವ ಬಗ್ಗೆ ಪ್ರತಿಕ್ರಿಯಿಸಿ, ಕೆ.ಹೆಚ್.ಮುನಿಯಪ್ಪ ಅವರು ಏಳು ಬಾರಿ ಸಂಸದರಾಗಿದ್ದವರು. ಇದು ಸಾಮಾನ್ಯವಲ್ಲ. ಪಕ್ಷದಲ್ಲಿ ಹಿರಿಯರು, ಕೇಂದ್ರದಲ್ಲಿ ಸಚಿವರಾಗಿದ್ದರು. ಈಗ ರಾಜ್ಯದಲ್ಲಿ ಸಚಿವರಾಗಿದ್ದಾರೆ. ಅವರು ಸಮರ್ಥರಿದ್ದು, ಅರ್ಹತೆಯೂ ಇದೆ. ಮುನಿಯಪ್ಪನವರು ಸಿಎಂ ಆದರೆ ನಾನು ಸಂತೋಷ ಪಡುವವನೇ ಎಂದು ಹೇಳಿದ್ದಾರೆ.
ನಾವೆಲ್ಲ ಒಂದು ವರ್ಗಕ್ಕೆ ಸೇರಿದ್ದೇವೆ. ಆ ವರ್ಗಕ್ಕೆ ಅವಕಾಶ ಸಿಕ್ಕಿತಲ್ಲ ಎಂಬುದು ಸಂತೋಷ ಆಗುತ್ತದೆ. ಯಾವ ವರ್ಗ ತುಳಿತಕ್ಕೆ ಒಳಗಾಗಿತ್ತು, ಆ ವರ್ಗಕ್ಕೆ ಆಡಳಿತ ವರ್ಗ ಆಗುತ್ತದೆ ಅಂದರೆ ಸಂತೋಷಪಡಲು ಆಗುವುದಿಲ್ಲವೇ ಎಂದರು.
ದಲಿತ ಸಿಎಂ ಸ್ಥಾನ ಈ ಸಲ ಸಿಗಬೇಕು ಎಂಬ ವಿಶ್ವಾಸ ಏನಾದರು ಇದೇಯೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದಲ್ಲಿ ತೀರ್ಮಾನ ಮಾಡುವವರು ಯಾರು? ನಾವು ಇಲ್ಲಿ ಕುಳಿತುಕೊಂಡು ನಾಲ್ಕು ಜನ ಹೇಳಿದರೆ ಆಗುವುದಿಲ್ಲ. ಹೈಕಮಾಂಡ್‌ನವರು ವಿಶ್ಲೇಷಣೆ ಮಾಡುತ್ತಾರೆ. ಬಿಹಾರದಲ್ಲಿ ಎಲೆಕ್ಷನ್ ನಡೆಯುತ್ತಿದೆ. ತದನಂತರ ಇದಕ್ಕೆ ಅವಶ್ಯಕತೆ ಇದ್ದರೆ ಅವರೇ ಮಾಡುತ್ತಾರೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications