ಧರ್ಮಸ್ಥಳ ಪ್ರಕರಣ: ಆ ಅಯೋಗ್ಯ ಹೇಳಿದ್ದಕ್ಕೆ ಧರ್ಮಸ್ಥಳ ತನಿಖೆ, ಸ್ಫೋಟಕ ಮಾಹಿತಿ ಹಂಚಿಕೊಂಡ ಪ್ರಹ್ಲಾದ್ ಜೋಶಿ! Dharmasthala Case
Dharmasthala Case: ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮುಂದುವರಿದಿದೆ. ಆದರೆ ಎಸ್‌ಐಟಿ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಭಾರೀ ಪರ - ವಿರೋಧ ವ್ಯಕ್ತವಾಗುತ್ತಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ಎಸ್‌ಐಟಿ ತನಿಖೆ ನಡೆಸುವುದಕ್ಕೆ ಆ ಅಯೋಗ್ಯ ಹೇಳಿರುವುದೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಹ್ಲಾದ್ ಜೋಶಿ ಅವರು ಯಾರನ್ನು ಅಯೋಗ್ಯ ಎಂದರು ಹಾಗೂ ಧರ್ಮಸ್ಥಳ ವಿಚಾರವಾಗಿ ಅವರು ಮಾತನಾಡಿದ ಸ್ಫೋಟಕ ವಿಚಾರಗಳು ಏನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಧರ್ಮಸ್ಥಳ ವಿಚಾರವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲ ಅಂತಾರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿದೆ. ಧರ್ಮಸ್ಥಳದ ವಿವಿಧ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಆ ವಿಷಯದ ಬಗ್ಗೆ ಎಸ್‌ಐಟಿ ತನಿಖೆ ಮುಂದುವರಿದಿದೆ. ವಿವಿಧ ಜಾಗಗಳಲ್ಲಿ ಉತ್ಖನನ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ರೀತಿ ಇರುವಾಗಲೇ ಮಹತ್ವದ ಮಾಹಿತಿಯನ್ನು ಪ್ರಹ್ಲಾದ್ ಜೋಶಿ ಅವರು ಹಂಚಿಕೊಂಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಹಾಗೂ ನಡೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಖಂಡಿಸಿದ್ದಾರೆ. ಮುಸ್ಲಿಂ ಲೀಗ್ ಸೇರಿದಂತೆ ಹಲವು ಹಿಂದೂ ವಿರೋಧಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಕಾಂಗ್ರೆಸ್ ದೇಶದಲ್ಲಿಯೇ ಹಿಂದೂ ದೇವಾಲಯಗಳನ್ನು ಮುಚ್ಚುವ ಪ್ರಯತ್ನ ನಡೆಸಿದೆ ಎನ್ನುವ ಗಂಭೀರವಾದ ಆರೋಪವನ್ನು ಪ್ರಹ್ಲಾದ್ ಜೋಶಿ ಅವರು ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಧರ್ಮಸ್ಥಳದ ವಿಚಾರವಾಗಿ ಯಾವ ಕಾರಣಕ್ಕಾಗಿ ಎಸ್‌ಐಟಿ ರಚನೆ ಮಾಡಲಾಗಿದೆ ಎನ್ನುವ ಬಗ್ಗೆಯೂ ಮಾತನಾಡಿದ್ದಾರೆ.
ಯಾರೋ ಅಯೋಗ್ಯ ಹೇಳಿದಾ ಅಂತಾ ಧರ್ಮಸ್ಥಳ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಕೊಟ್ಟಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಬಾಯಿಗೆ ಬಂದ ರೀತಿ ಮಾತನಾಡಿದ್ದಾರೆ. ಈ ರೀತಿಯ ಅಯೋಗ್ಯರು ಎಲ್ಲಿ ಹುಡುಕಿದರೂ ಸಿಗುವುದಿಲ್ಲ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ಬದ್ಧತೆ ಎನ್ನುವುದೇ ಇಲ್ಲ. ಇವರು ಎರಡು ದೋಣಿಗಳ ಮೇಲೆ ಕಾಲಿರಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗಳೇ ಉದಾ ಎಂದು ಜೋಶಿ ಅವರು ಹೇಳಿದ್ದಾರೆ.
ಭಿನ್ನ ಹೇಳಿಕೆ: ಇನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಧರ್ಮಸ್ಥಳ ಪ್ರಕರಣದ ವಿಚಾರದಲ್ಲಿ ಯಾವ ರೀತಿ ಬೇರೆ ಬೇರೆ ಹೇಳಿಕೆಗಳನ್ನು ಕೊಟ್ಟಿದ್ದಾರೆ ಎನ್ನುವ ಬಗ್ಗೆಯೂ ಪ್ರಹ್ಲಾದ್ ಜೋಶಿ ಅವರು ಮಾತನಾಡಿದ್ದಾರೆ. ಅದರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ ಎಂದು ಹೇಳಿರುವ ಬಗ್ಗೆಯೂ ಅವರು ಮಾತನಾಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications