ಧರ್ಮಸ್ಥಳ ವಾರ್ಷಿಕ ಸಾಮೂಹಿಕ ವಿವಾಹ 2026: ಏಪ್ರಿಲ್ 25ರೊಳಗೆ ಹೆಸರು ನೋಂದಾಯಿಸಿಕೊಳ್ಳಿ
ಉಜಿರೆ: ಅಪಾರ ಭಕ್ತಗಣ ಹೊಂದಿರುವ ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ (ಆಲ್ ಎಡಿಶನ್) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಈ ಕೂಡಲೇ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮದುವೆ ದಿನಾಂಕ? ನೋಂದಣಿ ಕೊನೆ ದಿನ ಇತರ ವಿವರ ಇಲ್ಲಿದೆ.
ಅದೆಷ್ಟೋ ಭಕ್ತರು ಸೇರಿದಂತೆ ಜನಸಾಮಾನ್ಯರಿಗೆ ರಾಜ್ಯದ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ವಿವಾಹವಾಗಬೇಕೆಂಬ ಆಸೆ ಇರುತ್ತವೆ. ಅಂಥವರಿಗಾಗಿ ಬಡವರಿಗೆ ಮದುವೆ ವೆಚ್ಚದ ಹೊರೆ ಆಗದಂತೆ ಇಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ ಹಾಗೂ ಹೂವಿನ ಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ 'ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್' ವತಿಯಿಂದ ಭರಿಸಲಾಗುತ್ತದೆ. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ ಎಂಬುದನ್ನು ಗಮನಿಸಬೇಕು.
ಏಪ್ರಿಲ್ 25 ರೊಳಗೆ ನೋಂದಾಯಿಸಿಕೊಳ್ಳಿ
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ಸಾಮೂಹಿಕ ವಿವಾಹದಲ್ಲಿ ಈತನಕ ಒಟ್ಟು ಹದಿಮೂರು ಸಾವಿರ ಜೋಡಿಗಳು ಸಪ್ತಪದಿ ತುಳಿದಿವೆ. ಅವರೆಲ್ಲಿ ಜೀವನದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಅವರ ಸಾಲಿನಲ್ಲಿ ನೀವು ಸೇರಬಯಸುವವರು ಹಾಗೂ ಇಲ್ಲಿನ ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು 2026ರ ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08256-266644, ವಾಟ್ಸಪ್ ನಂ. 9663464648, 8147263422 ಸಂಖ್ಯೆಗೆ ಸಂಪರ್ಕಿಸುಂತೆ ಪ್ರಕಟಣೆ ಕೋರಿದೆ.
2025ರಲ್ಲಿ 75 ಜೋಡಿಗಳ ವಿವಾಹ
ಕಳೆದ ವರ್ಷ 2025ರಲ್ಲಿ ಧರ್ಮಸ್ಥಳಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮವು ಮೇ 3ರಂದು ಜರುಗಿತ್ತು. ಅಂದು ಒಟ್ಟು 75 ಜೋಡಿಗಳು ವಿವಾಹವಾಗಿ ನವಜೀವನಕ್ಕೆ ಕಾಲಿಟ್ಟಿದ್ದರು. ಪ್ರತಿ ವರ್ಷದಂತೆ ಆಗಲೂ ವಧು-ವರರಿಗೆ ಉಡುಗೊರೆ ನೀಡಿ ಆಶೀರ್ವದಿಸಲಾಗಿತ್ತು. ಈ ಬಾರಿ 54ನೇ ವರ್ಷದ ಕಾರ್ಯಕ್ರಮಗಳು 2026 ಏಪ್ರಿಲ್ ನಲ್ಲಿ ನಡೆಯಲಿವೆ.
ವೈಯಕ್ತಿಕ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡಲ್ಲ
ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹಗಳಿಗಾಗಿ ನೋಂದಣಿ ಕಚೇರಿಗಳು ತೆರೆಯಲಾಗಿದೆ. ಧರ್ಮಸ್ಥಳಕ್ಕೆ ಬಂದು ನೋಂದಣಿ ಮಾಡಿಸುವವರಿಗೆ ದೇವಾಲಯದ ಮುಂದೆ ಇರುವ ಪ್ರವಚನ ಮಂಟಪದಲ್ಲಿ ಟ್ರಸ್ಟ್ ವತಿಯಿಂದ ನೋಂದಣಿ ಕಚೇರಿ ಇದೇ ವರ್ಷ ಮೇ ತಿಂಗಳಲ್ಲಿ ತೆರಲಾಗಿದೆ. ಈ ಕಚೇರಿ ಪ್ರತಿ ವರ್ಷದ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ದೊಡ್ಡ ಸಮಾರಂಭ ಮತ್ತು ನೋಂದಣಿಗಳನ್ನು ನಿರ್ವಹಿಸಲಿದೆ.
ಇನ್ನೂ ಧರ್ಮಸ್ಥಳ ಕ್ಷೇತ್ರವು ವೈಯಕ್ತಿಕ ವಿವಾಹಗಳ ನೋಂದಣಿ ಪ್ರಮಾಣಪತ್ರಗಳನ್ನು ನೀಡುವುದಿಲ್ಲ. ನೋಂದಣಿ ಪ್ರಕ್ರಿಯೆಗಾಗಿ ಸಂಬಂಧಪಟ್ಟಂತೆ ನೀವು ಗ್ರಾಮ ಪಂಚಾಯಿತಿ ಅಥವಾ ಬಾಪೂಜಿ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications