ರಾಜ್ಯ ಚುನಾವಣೆಗೆ ಸಚಿವ ಧರ್ಮೇಂದ್ರ ಪ್ರಧಾನ್ & ಅಣ್ಣಾಮಲೈ ಕರ್ನಾಟಕ ಬಿಜೆಪಿ ಉಸ್ತುವಾರಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ರಾಜ್ಯ ಚುನಾವಣಾ ಸಹ ಉಸ್ತುವಾರಿಯಾಗಿ ಬಿಜೆಪಿ ಹೈಕಮಾಂಡ್ ನೇಮಿಸಿದೆ.
ಬೆಂಗಳೂರು,ಫೆಬ್ರವರಿ4: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ನೇಮಕ ಮಾಡಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವಂತೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ಧರ್ಮೇಂದ್ರ ಪ್ರಧಾನ್, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ, ಭಾರತ ಸರ್ಕಾರದ ಉಸ್ತುವಾರಿ ಮತ್ತು ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದಾರೆ. ಕರ್ನಾಟಕ ರಾಜ್ಯದ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಚುನಾವಣೆ ವೇಳೆ ಒಬ್ಬ ಕೇಂದ್ರ ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಿಸುವ ಪದ್ಧತಿ ಬಿಜೆಪಿ ನಡೆಸಿಕೊಂಡು ಬಂದಿದೆ. ಕಳೆದ 2018ರ ವಿಧಾನಸಭಾ ಚುನಾಣೆ ವೇಳೆ ಆಗಿನ ಕೇಂದ್ರ ಸಚಿವರಾಗಿದ್ದ ಪ್ರಕಾಶ್ ಜಾವಡೇಕರ್ ಅವರನ್ನು ಪಕ್ಷದ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಈ ಬಾರಿಯ ಚುನಾವಣೆಗೆ ಸಹ ಉಸ್ತುವಾರಿಯಾಗಿ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ತಮಿಳು ನಾಡು ಬಿಜೆಪಿ ರಾಜ್ಯಧ್ಯಕ್ಷ ಅಣ್ಣಾಮಲೈ ಅವರನ್ನ ಬಿಜೆಪಿ ಹೈಕಮಾಂಡ್ ನೇಮಕ ಮಾಡಿದೆ. ಇನ್ನೂ ಬಿಜೆಪಿ ಪಕ್ಷದ ರಾಜ್ಯ ಉಸ್ತುವಾರಿಯಾಗಿ ಅರುಣ್ ಸಿಂಗ್ ಅವರು ಯಥಾರೀತಿ ಮುಂದುವರೆಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಂಬರುವ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ಶುಕ್ರವಾರ ನಡೆದಿದ್ದು, ಇಂದು (ಶನಿವಾರ) ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿದ್ದಾರೆ. ಈ ಕಾರ್ಯಕಾರಿಣಿ ಸಭೆಯಲ್ಲಿ ಚುನಾವಣೆಗೆ ಯಾವ ರೀತಿಯಾಗಿ ಪಕ್ಷವನ್ನಸಜ್ಜುಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಹಾಗೂ ಚುನಾವಣಾ ತಂತ್ರಗಾರಿಕೆಯನ್ನ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯ ಬಜೆಟ್ ಅಧಿವೇಶನದ ಬಳಿಕ ರಾಜ್ಯದ ನಾಲ್ಕು ದಿಕ್ಕುಗಳಿಂದ ಹಮ್ಮಿಕೊಳ್ಳಲು ಉದ್ದೇಶಿಸಿರುವ ರಥಯಾತ್ರೆಯ ರೂಪರೇಷೆ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ. ವೇಳಾಪಟ್ಟಿಅಂತಿಮಗೊಳಿಸಿ, ತಂಡಗಳನ್ನು ರಚಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಜತೆಗೆ ಪಕ್ಷ ಸಂಘಟನೆ ಬಲಪಡಿಸುವ ಉದ್ದೇಶದಿಂದ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications