Dharwad CBT: ನಗರ ಬಸ್‌ನಿಲ್ದಾಣಕ್ಕೆ ಮರುಜೀವ, ನವೀಕರಣಕ್ಕೆ ಶಂಕುಸ್ಥಾಪನೆ, ಅಂದಾಜು ವೆಚ್ಚ, ಗಡುವು, ಮಾಹಿತಿ
ಹುಬ್ಬಳ್ಳಿ, ಜನವರಿ 08: ಕರ್ನಾಟಕದ ವಿದ್ಯಾಕಾಶಿ ಧಾರವಾಡವು ಬೆಳೆಯುತ್ತಿರುವ ನಗರ-ಜಿಲ್ಲೆಗಳಲ್ಲಿ ಒಂದಾಗಿದೆ. ಇಲ್ಲಿ ಸಹ ಜನದಟ್ಟಣೆ ಹೆಚ್ಚಾಗಿದ್ದು, ಅಸ್ತಿತ್ವದಲ್ಲಿದ್ದ ನಗರ ಬಸ್ ನಿಲ್ದಾಣ (CBT) ವ್ಯಾಪ್ತಿಯಲ್ಲಿ ಚಿಕ್ಕದಿರುವ ನಿಲ್ದಾಣವನ್ನು ನವೀಕರಣ ಕಾರ್ಯ ಇಂದು ಸೋಮವಾರದಿಂದ ಆರಂಭವಾಗಿದೆ.
ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣವು ನೂತನ ಸಾರಿಗೆ ಬಸ್ ನಿಲ್ದಾಣವಾಗಿ ಕಂಗೊಳಿಸಲಿದೆ. ಈ ಸಂಬಂಧ ಯೋಜನೆ ಆರಂಭಕ್ಕೆ ಇಂದು ಸೋಮವಾರ ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಹ ಸಾಥ್ ನೀಡಿದರು.

ಧಾರವಾಡ ಸಿಬಿಟಿ ಬಸ್ ನಿಲ್ದಾಣವು ಒಟ್ಟು 13 ಕೋಟಿ ರೂಪಾಯಿ ವೆಚ್ಚದಲ್ಲಿ ಧಾರವಾಡದ ಸಿಬಿಟಿ ನವೀಕರಣಗೊಳ್ಳಲಿದ್ದು, ಭೂಮಿಪೂಜೆ ನೆರವೇರಿಸಲಾಗಿದೆ. ಸಿವಿಲ್ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುವ ನಿರೀಕ್ಷೆ ಇದೆ.
ಬಸ್ ನಿಲ್ದಾಣ ಮೇಲ್ದರ್ಜೆಗೆ ವರ್ಷದ ಗುಡುವು
ಭೂಮಿಪೂಜೆ ನೆರವೇರಿಸಿ ಮಾತನಾಡಿ ಸಚಿವ ರಾಮಲಿಂಗಾರೆಡ್ಡಿ ಅವರು, ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ. ಈಗ ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಒಂದು ವರ್ಷದ ಅವಧಿಯಲ್ಲಿ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ನಿರ್ಮಾಣ, ಗುಡವಿನ ಮಾಹಿತಿ ನೀಡಿದರು.

ನಗರ ಸಾರಿಗೆ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಚ್ಚುವರಿ ಬಸ್‌ಗಳ ಖರೀದಿ ಮಾಡಲಾಗುತ್ತಿದೆ. ಇದರಿಂದ ಬಸ್‌ಗಳ ಕೊರತೆ ನೀಗಲಿದೆ. ಅಂದಾಜು 50 ವರ್ಷಗಳ ಹಳೆಯದಾದ ಧಾರವಾಡದ ಸಿಬಿಟಿಯನ್ನು ಇದೀಗ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಒಂದು ವರ್ಷದಲ್ಲಿ ಸಾರ್ವಜನಿಕರಿಗೆ ಇದರ ಪ್ರಯೋಜನೆ ಸಿಗಲಿದೆ ಎಂದು ಹೇಳಿದರು.
4 ಪಲ್ಲಕ್ಕಿ ಬಸ್‌ಗಳಿಗೆ ಸಚಿವರ ಚಾಲನೆ
ಇದೇ ವೇಳೆ ಧಾರವಾಡ ಮಾತ್ರವಲ್ಲದೇ ಜಿಲ್ಲೆ ವ್ಯಾಪ್ತಿಯ ಹುಬ್ಬಳ್ಳಿಯಲ್ಲಿ ಸಾರಿಗೆ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.
ಸೋಮವರ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎರಡು ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಯ ಶಂಕುಸ್ಥಾಪನೆ ನಡೆಯಿತು. ಹಾಗೂ ನಾಲ್ಕು ನೂತನ ಪಲ್ಲಕ್ಕಿ ಬಸ್‌ಗಳಿಗೆ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಸಾರಿಗೆ ಇಲಾಖೆ ಎಂಡಿ ಭರತ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಿಬಿಟಿ ಬಸ್ ನಿಲ್ದಾಣವು 13 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಸಿವಿಲ್ ಕಾಮಗಾರಿಗಳು ತ್ವರಿಗತಿಯಲ್ಲಿ ಆರಂಭಗೊಳ್ಳಲಿದ್ದು, ನಿಗದಿತ ಸಮಯದಲ್ಲಿಯೇ ಕೆಲಸ ಪೂರ್ಣಗೊಳ್ಳಲಿದೆ ಎಂದು ಸಾರಿಗೆ ಮೂಲಗಳು ಮಾಹಿತಿ ನೀಡಿವೆ.












Click it and Unblock the Notifications