ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಕೋಟಿ ಒಡೆಯ: ಒಟ್ಟು ಆಸ್ತಿ ಎಷ್ಟು ಗೊತ್ತಾ?
ಧಾರವಾಡ, ಏಪ್ರಿಲ್ 18: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರಿದ್ದು, ಲೋಕಸಭಾ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು ಒಟ್ಟು ₹16.11 ಕೋಟಿ ಆಸ್ತಿ ಘೋಷಿಸಿಕೊಂಡಿದ್ದಾರೆ.
ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಅವರ ಹೆಸರಿನಲ್ಲಿ 11 ವಾಹನಗಳಿವೆ (ಒಂಬತ್ತು ಟಿಪ್ಪರ್, ಹಿಟಾಚಿ, ಜೆಸಿಬಿ ಲೋಡರ್ ಮತ್ತು ಕಾರು ತಲಾ 1) . ಇನ್ನೂ ₹ 4.50 ಕೋಟಿವಿದೆ ಎಂದು ತಿಳಿಸಿದ್ದಾರೆ. ವಿನೋದ್ ಅವರ ಬಳಿ 350 ಗ್ರಾ ಚಿನ್ನ ಇದ್ದರೆ, ಅವರ ಪತ್ನಿ ಬಳಿ 50 ಗ್ರಾಂ ಚಿನ್ನ ಇದೆ. ಪತ್ನಿ ವಸುಂಧರಾ ಹೆಸರಿನಲ್ಲಿ ₹ 3.48 ಲಕ್ಷ ಮೌಲ್ಯದ ಚರಾಸ್ತಿ ಇದೆ ಎಂದು ನಾಮಪತ್ರದ ಜೊತೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ವಿವರ ಘೋಷಿಸಿಕೊಂಡಿದ್ದಾರೆ.

ಗ್ಯಾರಂಟಿ ಅನುಷ್ಠಾನ ಸಮಿತಿಯೊಂದಿಗೆ ವಿನೋದ್ ಅಸೂಟಿ ಸಭೆ
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು ಇಂದು ಹುಬ್ಬಳ್ಳಿ-ಧಾರವಾಡ ಲೋಕಸಭಾ ವ್ಯಾಪ್ತಿಯ ಜಿಲ್ಲಾ ಹಾಗೂ ಎಲ್ಲಾ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ಜೊತೆಗೆ ನವಲೂರಿನ ಮಯೂರ ಹೋಟೆಲಿನಲ್ಲಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರ ಕೊಟ್ಟ ಗ್ಯಾರಂಟಿಗಳನ್ನು ಯಾವ ರೀತಿ ಅನುಷ್ಠಾನಗೊಳಿಸಿದೆ ಅದೇ ರೀತಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ತಾವೆಲ್ಲರೂ ಶ್ರಮವಹಿಸಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು. ಕೇಂದ್ರ ಕಾಂಗ್ರೆಸ್ ಸುಮಾರು 25 ಗ್ಯಾರಂಟಿಗಳನ್ನು ನೀಡಿದೆ, ಕೇಂದ್ರ ಕಾಂಗ್ರೆಸ್ ಗ್ಯಾರಂಟಿ ಕಾರ್ಡಗಳು ಜನರಿಗೆ ತಲುಪಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ ಲಾಡ್, ಗ್ರಾಮೀಣ ಜಿಲ್ಲಾಧ್ಯಕ್ಷರಾದ ಶ್ರೀ ಅನೀಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರ, ಎಸ್ ಆರ್ ಪಾಟೀಲ, ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಸಮಸ್ತ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಅಲ್ಪ ಸಂಖ್ಯಾತ ಮುಖಂಡರ ಜೊತೆ ಸಭೆ
ಹುಬ್ಬಳ್ಳಿ-ಧಾರವಾಡ ಲೋಕಸಭಾ ವ್ಯಾಪ್ತಿಯ ಧಾರವಾಡ ಗ್ರಾಮೀಣ ಹಾಗೂ ನಗರದ ಅಲ್ಪಸಂಖ್ಯಾತ ಮುಖಂಡರ ಜೊತೆಗೆ ನವಲೂರಿನ ಮಯೂರ ಹೋಟೆಲನಲ್ಲಿ ಹಮ್ಮಿಕೊಂಡ ಸಭೆಯಲ್ಲಿ ವಿನೋದ್ ಅಸೂಟಿ ಅವರು ಪಾಲ್ಗೊಂಡಿದ್ದರು.
ವಿವಿಧತೆಯಲ್ಲಿ ಏಕತೆ ಎಂಬ ಸಿದ್ಧಾಂತದಲ್ಲಿ ನಂಬಿಕೆ ಇರಿಸಿರುವ ಪಕ್ಷ ಕಾಂಗ್ರೆಸ್. ಅದೇ ರೀತಿ ಎಲ್ಲಾ ಸಮುದಾಯದ ಹಾಗೂ ಪಂಥಗಳ ಅಭಿವೃದ್ಧಿಯ ಸಲುವಾಗಿ ಕಾಂಗ್ರೆಸ್ ಪಕ್ಷ ಸಿದ್ಧ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ದುಡಿಬೇಕೆಂದು ನಾಯಕರಲ್ಲಿ ವಿನಂತಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ ಲಾಡ್, ಅಲ್ತಾಫ್ ಹಳ್ಳೂರ, ನಗರದ ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರು, ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.












Click it and Unblock the Notifications