ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

I am sorry, ಐ ಆಮ್ ಹೆಲ್ಪ್ ಲೆಸ್: ಹೈಕಮಾಂಡಿಗೆ ಸಿದ್ದರಾಮಯ್ಯ?

|
Google Oneindia Kannada News

ಬೆಂಗಳೂರು, ಜುಲೈ 6: ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಹತೋಟಿಗೆ ತರಲು ನನ್ನಿಂದ ಸಾಧ್ಯವಿಲ್ಲ ಎನ್ನುವ ಮಾತನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ವರಿಷ್ಠರಿಗೆ ತಿಳಿಸಿದ್ದಾರಾ?

ದಿಢೀರನೇ ಆಷಾಢ ಎನ್ನುವುದನ್ನು ನೋಡದೇ, ಶನಿವಾರ ಎನ್ನುವುದನ್ನು ಲೆಕ್ಕಹಾಕದೇ, ಶಾಸಕರು ರಾಜೀನಾಮೆಗೆ ಮುಂದಾಗಿರುವುದರಿಂದ, ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಸಮ್ಮಿಶ್ರ ಸರಕಾರಕ್ಕೆ ಖೆಡ್ಡಾ ತೋಡಿದ ಮಾಜಿ ಜೆಡಿಎಸ್ ಅಧ್ಯಕ್ಷ ಎಚ್ ವಿಶ್ವನಾಥ್?ಸಮ್ಮಿಶ್ರ ಸರಕಾರಕ್ಕೆ ಖೆಡ್ಡಾ ತೋಡಿದ ಮಾಜಿ ಜೆಡಿಎಸ್ ಅಧ್ಯಕ್ಷ ಎಚ್ ವಿಶ್ವನಾಥ್?

ಅತೃಪ್ತರನ್ನು ಸಮಾಧಾನಗೊಳಿಸಿ ಎನ್ನುವ ವರಿಷ್ಠರ ಸೂಚನೆಗೆ, I am sorry, ಐ ಆಮ್ ಹೆಲ್ಪ್ ಲೆಸ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆಂದು ವರದಿಯಾಗಿದೆ. ಇದರ ಸತ್ಯಾಸತ್ಯತೆ ಇನ್ನಷ್ಟೇ ಗೊತ್ತಾಗಬೇಕಿದೆ.

Did Siddaramaiah said, I am helpless to Congress High Command?

ಕಾಂಗ್ರೆಸ್ಸಿನ ಅತ್ಯಂತ ನಿಷ್ಟಾವಂತ ಮುಖಂಡರಲ್ಲಿ ಒಬ್ಬರಾದ ರಾಮಲಿಂಗ ರೆಡ್ಡಿ ರಾಜೀನಾಮೆ ನೀಡುವ ವಿಚಾರ ಖಚಿತವಾಗುತ್ತಿದ್ದಂತೆಯೇ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ರೆಡ್ಡಿ ಅವರನ್ನು ಭೇಟಿಯಾಗಿದ್ದರು. ಅದಾದ ನಂತರ, ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಖಂಡ್ರೆ ತೆರಳಿದ್ದರು.

ಮೈತ್ರಿ ಸರಕಾರ ಉಳಿಯಲ್ಲ ಎಂಬ ಬಗ್ಗೆ ದೇವೇಗೌಡರಿಗೆ ಮುಂಚೆಯೇ ಗೊತ್ತಿತ್ತೆ? ಮೈತ್ರಿ ಸರಕಾರ ಉಳಿಯಲ್ಲ ಎಂಬ ಬಗ್ಗೆ ದೇವೇಗೌಡರಿಗೆ ಮುಂಚೆಯೇ ಗೊತ್ತಿತ್ತೆ?

ರಾಹುಲ್ ಗಾಂಧಿ ರಾಜೀನಾಮೆ ವಿಚಾರದಲ್ಲಿ, ಯಾರನ್ನು ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಗೊಂದಲ್ಲಿರುವ ಈ ಹೊತ್ತಿನಲ್ಲಿ, ರಾಜ್ಯದ ಈ ರಾಜಕೀಯ ಬೆಳವಣಿಗೆ, ಪಕ್ಷಕ್ಕೆ ತೀವ್ರ ತಲೆನೋವನ್ನು ತಂದಿದೆ.

ಕೆಪಿಸಿಸಿ ಉಸ್ತುವಾರಿ ಕೆ ಸಿ ವೇಣುಗೋಪಾಲ್, ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದು, ಅತೃಪ್ತ ಶಾಸಕರನ್ನು ಭೇಟಿಯಾಗಲಿದ್ದಾರೆ. ಸದ್ಯದ ಮಟ್ಟಿಗೆ ಹೇಳುವುದಾದರೆ, ಸಮ್ಮಿಶ್ರ ಸರಕಾರದ ಪರಿಸ್ಥಿತಿ ಔಟ್ ಆಫ್ ಕಂಟ್ರೋಲ್. ಮುಖ್ಯಮಂತ್ರಿಗಳೂ ದೇಶದಲ್ಲಿಲ್ಲ, ಕೆಪಿಸಿಸಿ ಅಧ್ಯಕ್ಷರೂ ವಿದೇಶ ಪ್ರವಾಸದಲ್ಲಿದ್ದಾರೆ.

English summary
Did former CM Siddaramaiah said, I am sorry, I am helpless to Congress High Command?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X