ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಹೆಚ್ಚಳ: ಸರ್ಕಾರ ಹೇಳಿದ್ದೇನು ?
Cyber Fraud Cases: ದೇಶದಾದ್ಯಂತ ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು. ಇದೀಗ ರಾಜ್ಯ ಸರ್ಕಾರವು ಮಹತ್ವದ ಕ್ರಮ ತೆಗೆದುಕೊಳ್ಳುವುದಕ್ಕೆ ಮುಂದಾಗಿದೆ.
ದೇಶದಾದ್ಯಂತ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸೈಬರ್ ವಂಚನೆ ಹಾಗೂ ಆನ್‌ಲೈನ್ ಲೈಂಗಿಕ ಕಿರುಕುಳ ಕಡಿವಾಣಕ್ಕೆ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಮುಂದಾಗಿವೆ. ಮಹಿಳೆಯೊಬ್ಬರಿಗೆ ಕಳೆದ ಒಂದು ವರ್ಷದಿಂದ ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿದ್ದಾರೆ.

ಸುಮಾರು 187 ಬಾರಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಇಷ್ಟೆಲ್ಲ ವಂಚನೆಯಾದ ಬಳಿಕ ಎಚ್ಚೆತ್ತುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ ಎಂದರೆ, ಸೈಬರ್ ವಂಚಕರು ಎಷ್ಟರ ಮಟ್ಟಿಗೆ ಹೆದರಿಸಬಹುದು. ಈ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
Digital Arrest Scam ರಾಜ್ಯದಲ್ಲಿ ಎಚ್ಚರಿಕೆ
ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಇದೇ ಮೊದಲು. ಬೆಂಗಳೂರಿನಲ್ಲಿದ್ದುಕೊಂಡು ಅಮೆರಿಕಾದಲ್ಲಿದ್ದವರಿಗೆ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಮಾಡಿರುವ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಿದ್ದೇವೆ. ಈ ಪ್ರಕರಣವನ್ನು ಪತ್ತೆಹಚ್ಚುತ್ತೇವೆ ಎಂದು ಹೇಳಿದರು.
ಸಂಪುಟ ಪುನರ್ ರಚನೆಯ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು ?
ಸಂಪುಟ ಪುನರ್ ರಚನೆ ಕುರಿತು ಮಾಧ್ಯಮದವರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಇನ್ನು ಮುಖ್ಯಮಂತ್ರಿಗಳ ಜೊತೆ ಮಾತನಾಡಿಲ್ಲ. ದೆಹಲಿ ಭೇಟಿ ವೇಳೆ ಏನು ಮಾಡಿಕೊಂಡು ಬಂದ್ದಿದ್ದಾರೆ ಎಂದು ತಿಳಿದುಕೊಂಡು ನಿಮಗೆ ಹೇಳುತ್ತೇನೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಮೇಲೆ ವಿಷಯ ಗೊತ್ತಾಗುತ್ತದೆ. ಮಾತಾಡದೆನೇ ಹೇಳಿದರೆ ಸರಿ ಇರುವುದಿಲ್ಲ ಎಂದರು.
ಕಳೆದ ಬಾರಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದರು. ಈ ಬಾರಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿಕೊಂಡು ಬಂದಿದ್ದಾರೆ. ಅವರ ಮಧ್ಯೆ ಏನು ಚರ್ಚೆಯಾಗಿದೆ ಎಂಬುದನ್ನು ತಿಳಿದುಕೊಳ್ಳಬೇಕಲ್ಲವೇ? ಈ ರೀತಿಯಾಗಿ ಚರ್ಚೆಯಾಗಿದೆ ಎಂದು ಯಾರಾದರು ನೇರವಾಗಿ ನಮ್ಮ ಜೊತೆ ಮಾತನಾಡಬೇಕಲ್ಲ. ತಿಳಿದುಕೊಳ್ಳದೆ ಹೇಳಿದರೆ ಊಹಾಪೋಹಾ ಅಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.












Click it and Unblock the Notifications