ಮೂವರು ಅಭ್ಯರ್ಥಿಗಳ ಆಯ್ಕೆಗೆ ಸಿಂಗ್ ಬರಬೇಕಿತ್ತೇ?

By: ಭಾಸ್ಕರ್ ಭಟ್
Subscribe to Oneindia Kannada

ಬೆಂಗಳೂರು, ಜನವರಿ 22 : ಅಚ್ಚರಿಯಾದರೂ ಇದು ಸತ್ಯ. ಮೂರು ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ದಿಗ್ವಿಜಯ್ ಸಿಂಗ್ ಬೆಂಗಳೂರಿಗೆ ಬಂದಿದ್ದಾರೆ. ಮೂರು ಕ್ಷೇತ್ರಗಳ ಪೈಕಿ ಹೆಬ್ಬಾಳದ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಕರ್ನಾಟಕ ಕಾಂಗ್ರೆಸ್ ನಾಯಕರು ಹರಸಾಹಸ ಪಟ್ಟಿದ್ದಾರೆ.

ಫೆಬ್ರವರಿ 13ರಂದು ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಚುನಾವಣೆ ಅಧಿಸೂಚನೆ ಪ್ರಕಟಗೊಂಡು ಎರಡು ದಿನಗಳು ಕಳೆದಿದ್ದರೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಮಾತ್ರ ಅಂತಿಮಗೊಂಡಿಲ್ಲ. ಆದ್ದರಿಂದ, ಪಕ್ಷ ಹೈಕಮಾಂಡ್ ನಾಯಕರ ಮೊರೆ ಹೋಗಿದೆ. [ಹೆಬ್ಬಾಳ ಟಿಕೆಟ್ ಯಾರಿಗೆ?]

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಬೆಂಗಳೂರಿಗೆ ಬಂದಿದ್ದು, ಶುಕ್ರವಾರ ಸಂಜೆಯ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ. ಉಪ ಚುನಾವಣೆಯಲ್ಲಿ ಗೆದ್ದವರು ಎರಡು ವರ್ಷಗಳ ಕಾಲ ಶಾಸಕರಾಗಿರಬಹುದು. ಆದರೂ ಟಿಕೆಟ್ ಪಡೆಯಲು ಪೈಪೋಟಿ ಇದೆ. [ಹೆಬ್ಬಾಳ ಉಪ ಚುನಾವಣೆ : ಅಭ್ಯರ್ಥಿ ಆಯ್ಕೆ ಕಸರತ್ತು ಮುಗಿದಿಲ್ಲ!]

ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಕ್ಷೇತ್ರಗಳ ಪೈಕಿ ಹೆಬ್ಬಾಳ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನಡುವಿನ ಅಸಮಾಧಾನಗಳು ಅಭ್ಯರ್ಥಿ ಆಯ್ಕೆಗೆ ತೊಡಕಾಗಿದೆ. ಅದಕ್ಕಾಗಿ ಸಿಂಗ್ ದೆಹಲಿಯಿಂದ ಬೆಂಗಳೂರಿಗೆ ಬಂದು ಕೂತಿದ್ದಾರೆ......

ಉಪ ಚುನಾವಣೆ : ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಕಸರತ್ತು

ಉಪ ಚುನಾವಣೆ : ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಕಸರತ್ತು

ಫೆಬ್ರವರಿ 13ರಂದು ನಡೆಯುವ ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕರ್ನಾಟಕ ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಚುನಾವಣೆ ಅಧಿಸೂಚನೆ ಪ್ರಕಟಗೊಂಡು ಎರಡು ದಿನಗಳು ಕಳೆದಿದ್ದರೂ ಅಭ್ಯರ್ಥಿಗಳ ಪಟ್ಟಿ ಮಾತ್ರ ಅಂತಿಮಗೊಂಡಿಲ್ಲ.

ಬೆಂಗಳೂರಿಗೆ ಬಂದ್ರು ಸಿಂಗ್

ಬೆಂಗಳೂರಿಗೆ ಬಂದ್ರು ಸಿಂಗ್

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಬೆಂಗಳೂರಿಗೆ ಬಂದಿದ್ದು ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ನಾಯಕರ ಸಭೆ ನಡೆಸಲಿದ್ದಾರೆ. ನಂತರ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.

ಹೆಬ್ಬಾಳ ಅಭ್ಯರ್ಥಿ ಆಯ್ಕೆಯ ಕಗ್ಗಂಟು

ಹೆಬ್ಬಾಳ ಅಭ್ಯರ್ಥಿ ಆಯ್ಕೆಯ ಕಗ್ಗಂಟು

ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಕ್ಷೇತ್ರಗಳ ಪೈಕಿ ಹೆಬ್ಬಾಳ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನಡುವಿನ ಅಸಮಾಧಾನಗಳು ಅಭ್ಯರ್ಥಿ ಆಯ್ಕೆಗೆ ತೊಡಕಾಗಿದೆ.

ಹೆಬ್ಬಾಳದಲ್ಲಿ ಟಿಕೆಟ್‌ಗೆ ಮೂವರ ಪೈಪೋಟಿ

ಹೆಬ್ಬಾಳದಲ್ಲಿ ಟಿಕೆಟ್‌ಗೆ ಮೂವರ ಪೈಪೋಟಿ

ಹೆಬ್ಬಾಳ ಟಿಕೆಟ್‌ಗಾಗಿ ಭೈರತಿ ಸುರೇಶ್, ರೆಹಮಾನ್ ಷರೀಫ್, ಎಚ್.ಎಂ.ರೇವಣ್ಣ ನಡುವೆ ಪೈಪೋಟಿ ನಡೆಯುತ್ತಿದೆ. ಯಾರಿಗೆ ಟಿಕೆಟ್? ಎಂಬುದು ಇನ್ನೂ ಖಚಿತವಾಗಿಲ್ಲ. ಹಿರಿಯ ನಾಯಕ ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್‌ಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ದೇವದುರ್ಗದಲ್ಲಿ ಸಮಸ್ಯೆ ಇಲ್ಲ

ದೇವದುರ್ಗದಲ್ಲಿ ಸಮಸ್ಯೆ ಇಲ್ಲ

ಶಾಸಕ ವೆಂಕಟೇಶ್ ನಾಯಕ್ ಅವರ ನಿಧನದಿಂದ ತೆರವಾಗಿರುವ ದೇವದುರ್ಗ ಕ್ಷೇತ್ರದಲ್ಲಿ ಟಿಕೆಟ್‌ಗೆ ಹೆಚ್ಚಿನ ಪೈಪೋಟಿ ಇಲ್ಲ. ವೆಂಕಟೇಶ್ ನಾಯಕ್ ಕುಟುಂಬದಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕು ಎಂದು ನಿರ್ಧಾರವಾಗಿದೆ. ಆದರೆ, ಯಾರಿಗೆ ಎಂಬುದು ತೀರ್ಮಾನವಾಗಬೇಕು.

ಬೀದರ್‌ನಲ್ಲಿಯೂ ಪೈಪೋಟಿ

ಬೀದರ್‌ನಲ್ಲಿಯೂ ಪೈಪೋಟಿ

ಬೀದರ್ ಕ್ಷೇತ್ರದಲ್ಲಿ ರಹೀಮ್ ಖಾನ್ ಅಥವ ಆಯಾಜ್ ಖಾನ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಮಾತ್ರ ಅಂತಿಮಗೊಳಿಸಬೇಕಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
AICC general secretary and Karnataka Congress in-charge Digvijay Singh in Bengaluru. Singh to chair party leaders meeting on Friday evening to finalize candidates for Hebbal, Devadurga and Bidar by election scheduled on February 13, 2016.
Please Wait while comments are loading...