ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್

Posted By:
Subscribe to Oneindia Kannada

ಬೆಂಗಳೂರು, ಜೂನ್ 20: ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಖಾತೆ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರನ್ನು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಪ್ರಕಟಿಸಿದೆ

ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಉದ್ಯಮಿಗಳು, ಸಾರ್ವಜನಿಕರು ದಿನೇಶ್ ಗುಂಡೂರಾವ್ ಪರ ಬ್ಯಾಟಿಂಗ್ ಆರಂಭಿಸಿದ್ದರು.[ಶಾಸಕ ಸ್ಥಾನಕ್ಕೆ ಅಂಬರೀಶ್ ರಾಜೀನಾಮೆ]

ಇದಕ್ಕೆ ಪೂರಕವಾಗಿ ಸೋಮವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾ ಮುಂದೆ ದಿನೇಶ್ ಗುಂಡೂರಾವ್ ಅವರ ಅಭಿಮಾನಿಗಳು ಭಾರಿ ಪ್ರತಿಭಟನೆ ನಡೆಸಿದ್ದರು.[ಸಚಿವರಲ್ಲಿ ಯಾರಿಗೆ ಯಾವ ಖಾತೆ ಮೇಲೆ ಕಣ್ಣು?]

ಸಚಿವ ಸ್ಥಾನ ಕಳೆದುಕೊಂಡ ಬಳಿಕ ಪ್ರತಿಕ್ರಿಯಿಸಿದ್ದ ಗುಂಡೂರಾವ್ ಅವರು ರಾಜಕಾರಣದಲ್ಲಿ ಇದೆಲ್ಲ ಸಹಜ, ಪಕ್ಷ ವಹಿಸಿದ ಜವಾಬ್ದಾರಿ ನಿಭಾಯಿಸುತ್ತೇನೆ, ಮೂರು ವರ್ಷಗಳ ಕಾಲ ಸಚಿವನಾಗಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ ಎಂದಿದ್ದರು.[ಸಚಿವ ಸಂಪುಟಕ್ಕೆ 13 ಹೊಸಮುಖಗಳ ಸೇರ್ಪಡೆ]

ಬಿಪ್ಯಾಕ್ ನ ಮೋಹನ್ ದಾಸ್ ಪೈ ಸೇರಿದಂತೆ ಹಲವಾರು ಮಂದಿ ದಿನೇಶ್ ಪರ ಟ್ವೀಟ್ ಮಾಡಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಜಿ ಪರಮೇಶ್ವರ ಅವರು ಸದ್ಯ ಜರ್ಮನಿ ಪ್ರವಾಸದಲ್ಲಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಸ್ಥಾನದ ನಂತರ ಸ್ಥಾನವನ್ನು ದಿನೇಶ್ ಅವರು ಈಗ ಅಲಂಕರಿಸಲಿದ್ದಾರೆ.

ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್

ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಉದ್ಯಮಿಗಳು, ಸಾರ್ವಜನಿಕರು ದಿನೇಶ್ ಗುಂಡೂರಾವ್ ಪರ ಬ್ಯಾಟಿಂಗ್ ಆರಂಭಿಸಿದ್ದರು.

ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ

ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ

ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ಎಐಸಿಸಿ ಹೊರಡಿಸಿದ ಆದೇಶಕ್ಕೆ ಜನಾರ್ದನ ದ್ವಿವೇದಿ ಸಹಿ ಇದೆ.

ಸ್ಥಾನ ಕಳೆದುಕೊಂಡ ಬಳಿಕ ಗುಂಡೂರಾವ್ ಟ್ವೀಟ್

ಸ್ಥಾನ ಕಳೆದುಕೊಂಡ ಬಳಿಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, ಕಾಂಗ್ರೆಸ್ ಪಕ್ಷದ ನಾಯಕರಿಗೆ/ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದರು.

ಮೋಹನ್ ದಾಸ್ ಪೈ ಅವರಿಂದ ಪ್ರತಿಕ್ರಿಯೆ

ದಿನೇಶ್ ಗುಂಡೂರಾವ್ ಅವರ ಟ್ವೀಟ್ ಗೆ ಇನ್ಫೋಸಿಸ್ ನ ಮಾಜಿ ಉದ್ಯೋಗಿ, ಬಿಪ್ಯಾಕ್ ಮುಖ್ಯಸ್ಥರಲ್ಲಿ ಒಬ್ಬರಾದ ಮೋಹನ್ ದಾಸ್ ಪೈ ಅವರಿಂದ ಪ್ರತಿಕ್ರಿಯೆ

ಯುವ ಕಾಂಗ್ರೆಸ್ ಸೇರಿ ಎಲ್ಲರಿಂದ ಮನವಿ

ಯುವ ಕಾಂಗ್ರೆಸ್ ಸೇರಿ ಎಲ್ಲರಿಂದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆ ಮನವಿ

ಅಭಿಮಾನಿಗಳಿಂದ ಪ್ರತಿಭಟನೆ

ಯುವ ಕಾಂಗ್ರೆಸ್ ಸದಸ್ಯರು ಸೇರಿ ಅಭಿಮಾನಿಗಳಿಂದ ಪ್ರತಿಭಟನೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In a surprising development, the Congress High Command on Monday has appointed Former Food and Civil supply Minister Dinesh Gundu Rao as Karnataka State Congress President.
Please Wait while comments are loading...