ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ ಕೆಪಿಸಿಸಿ ಅಧ್ಯಕ್ಷರು

By Gururaj
|
Google Oneindia Kannada News

ಬೆಂಗಳೂರು, ಜುಲೈ 15 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷ ಸಂಘಟನೆಯತ್ತ ಗಮನ ಹರಿಸಿದ್ದಾರೆ. ಜಿಲ್ಲಾ ಘಟಕದ ಪದಾಧಿಕಾರಿಗಳ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಜುಲೈ 11ರಂದು ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಜುಲೈ 21ರ ತನಕ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಜೊತೆ ಅವರು ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದಿರುವ ಸವಾಲುಗಳು!ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದಿರುವ ಸವಾಲುಗಳು!

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿಗಮ-ಮಂಡಳಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆದರೆ, ಕಾಂಗ್ರೆಸ್ ಹೈ ಕಮಾಂಡ್ ಲೋಕಸಭೆ ಚುನಾವಣೆಯತ್ತ ಗಮನ ಹರಿಸಿ ಎಂದು ಪಕ್ಷದ ನಾಯಕರಿಗೆ ಸೂಚನೆ ನೀಡಿದೆ.

ಚಿತ್ರಗಳು : ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರಚಿತ್ರಗಳು : ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ

Dinesh Gundu Rao busy in chalking out plan for Lok Sabha elections 2019

ಬೆಂಗಳೂರು ಸೆಂಟ್ರಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪದಾಧಿಕಾರಿಗಳ ಜೊತೆ ಈಗಾಗಲೇ ದಿನೇಶ್‌ ಗುಂಡೂರಾವ್ ಸಭೆ ನಡೆಸಿದ್ದಾರೆ. ಜುಲೈ 16ರ ಸೋಮವಾರದಿಂದ ಉಳಿದ ಜಿಲ್ಲೆಗಳ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಜು.21ರಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜೊತೆ ದಿನೇಶ್ ಗುಂಡೂರಾವ್ ಸಭೆ ನಡೆಸಲಿದ್ದಾರೆ. ಅಂದು ಜಮಖಂಡಿ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಬಾಗಲಕೋಟೆ ಜಿಲ್ಲೆಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

English summary
After taking charge as president of Karnataka Pradesh Congress Committee (KPCC) Dinesh Gundu Rao concentrating on Lok Sabha elections 2019. He is conducting district wise meetings of KPCC office bearers to discuss preparations for elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X