ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ : ಸರಣಿ ಸಭೆಗಳನ್ನು ಕರೆದ ಕೆಪಿಸಿಸಿ ಅಧ್ಯಕ್ಷರು

|
Google Oneindia Kannada News

ಬೆಂಗಳೂರು, ನವೆಂಬರ್ 16 : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ಕರೆದಿದ್ದಾರೆ. ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆಸಲು ಸರಣಿ ಸಭೆಗಳನ್ನು ಅವರು ನಡೆಸಲಿದ್ದಾರೆ.

ನವೆಂಬರ್ 17 ರಿಂದ 20ರ ತನಕ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಲೋಕಸಭೆ ಚುನಾವಣೆ : ಕರ್ನಾಟಕ ಕಾಂಗ್ರೆಸ್‌ ಕಾರ್ಯತಂತ್ರ ಬದಲುಲೋಕಸಭೆ ಚುನಾವಣೆ : ಕರ್ನಾಟಕ ಕಾಂಗ್ರೆಸ್‌ ಕಾರ್ಯತಂತ್ರ ಬದಲು

ನವೆಂಬರ್ 17 ರಂದು ಬೆಂಗಳೂರು, ಬೆಳಗಾವಿ ಭಾಗದ ಮುಖಂಡರು, ನವೆಂಬರ್ 20ರಂದು ಕಲಬುರಗಿ ಭಾಗದ ಮುಖಂಡರು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಶ್ಲೇಷಣೆ : ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ ಸಕಾಲವಲ್ಲ!ವಿಶ್ಲೇಷಣೆ : ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ ಸಕಾಲವಲ್ಲ!

Dinesh Gundu Rao

ಮತ್ತೊಂದು ಕಡೆ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಅವರು 2019ರ ಲೋಕಸಭಾ ಚುನಾವಣಾ ಪ್ರಣಾಳಿಕೆಗೆ ಜನರಿಂದ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದಾರೆ. ಜನವರಿಲ್ಲಿ ಎಲ್ಲಾ ಅಭಿಪ್ರಾಯಗಳನ್ನು ಚುನಾವಣಾ ಪ್ರಣಾಳಿಕೆ ಸಮಿತಿಗೆ ಸಲ್ಲಿಸಬೇಕಾಗಿದೆ.

ಲೋಕಸಭೆ ಚುನಾವಣೆ ನಾಯಕತ್ವ ಸಿದ್ದರಾಮಯ್ಯ ಕೈತಪ್ಪಿಸಲು ಮಸಲತ್ತುಲೋಕಸಭೆ ಚುನಾವಣೆ ನಾಯಕತ್ವ ಸಿದ್ದರಾಮಯ್ಯ ಕೈತಪ್ಪಿಸಲು ಮಸಲತ್ತು

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. 2014ರ ಚುನಾವಣೆಯಲ್ಲಿ ಕಾಂಗ್ರೆಸ್ 9, ಬಿಜೆಪಿ 17 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಈ ಬಾರಿಯ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವುದಾಗಿ ಪಕ್ಷಗಳು ಘೋಷಣೆ ಮಾಡಿವೆ. ಯಾವ ಕ್ಷೇತ್ರ ಯಾರಿಗೆ ಸೇರಲಿದೆ? ಎಂಬುದು ಇನ್ನೂ ಖಚಿತವಾಗಿಲ್ಲ.

English summary
Karnataka Pradesh Congress Committee (KPCC) Dinesh Gundu Rao called the meeting if District Congress Committee presidents to discuss about preparation of Lok Sabha Elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X